Connect with us

LATEST NEWS

ಕಾಲೇಜು ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟ ಪ್ರಕರಣ: ವಿಚಾರಣೆಗೆ ಉಡುಪಿಗೆ ಬಂದ ಖುಷ್ಬೂ

Published

on

ಉಡುಪಿ: ಇಲ್ಲಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಸಂಜೆ ವೇಳೆ ಉಡುಪಿಗೆ ಆಗಮಿಸಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಪೊಲೀಸರನ್ನು ಭೇಟಿಯಾಗಿ ಎಫ್‌ಐಆರ್ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ. ನಾಳೆ ಕಾಲೇಜಿಗೆ ಭೇಟಿ ಕೊಟ್ಟು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಮೂವರು ವಿದ್ಯಾರ್ಥಿನಿಯರ ಜೊತೆ ಕೂಡ ಮಾತನಾಡುತ್ತೇನೆ. ನಂತರ ಮಾಧ್ಯಮಗಳಿಗೆ ವಿವರ ನೀಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಉಪಸ್ಥಿತರಿದ್ದರು.

DAKSHINA KANNADA

Ullala: ಡ್ರಗ್ಸ್ ಮಾರಾಟ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!!

Published

on

ಮಂಗಳೂರು: ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಎಂಬಲ್ಲಿ ಡಿ. 4 ರಂದು ನಿಷೇದಿತ ಮಾದಕ ವಸ್ತು ಮೆಥಂಫೆಟಮೈನ್‌ ಮತ್ತು ಎಲ್.ಎಸ್.ಡಿ. ಸ್ಟಾಂಪ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಡ್ರಗ್‌ ಪೆಡ್ಲರ್‌ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಶಿತ್ ಯಾನೆ ಅಶ್ವಿತ್ ಯಾನೆ ಆಶು ಬಂಧಿತ  ಆರೋಪಿ. ಆರೋಪಿಯನ್ನು ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಪತ್ತೆ ಮಾಡಿದ್ದು, ಆತನಿಂದ 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ., 30,000 ರೂಪಾಯಿ ಮೌಲ್ಯದ 600 ಗ್ರಾಂ ಗಾಂಜಾ, 1 ಲಕ್ಷ ರೂಪಾಯಿ ಮೌಲ್ಯದ ಕೆಟಿಎಂ ಡ್ಯೂಕ್ ಮೋಟಾರು ಸೈಕಲ್ ಸೇರಿದಂತೆ ಒಟ್ಟು 7 ಲಕ್ಷದ 77 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ. ಎಚ್.ಎನ್., ಪಿ.ಎಸ್.ಐ.ಗಳಾದ ಶೀತಲ್ ಅಲಗೂರ ಮತ್ತು ಸಂತೋಷ ಕುಮಾರ್.ಡಿ. ಹಾಗೂ ಮಂಗಳೂರು ದಕ್ಷಿಣ ಉಪ-ವಿಭಾಗದ ಎ.ಸಿ.ಪಿ. ನೇತೃತ್ವದ ಡ್ರಗ್ಸ್‌ ನಿಗ್ರಹ ದಳದ ಪಿ.ಎಸ್.ಐ. ಪುನಿತ್ ಗಾಂವ್ಕರ್ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಡಿ. 4 ರಂದು ಆರೋಪಿಗಳಾದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ಅವರನ್ನು ಪೊಲೀಸರು ಬಂಧಿಸಿ ಅವರಿಂದ 132 ಗ್ರಾಂ ತೂಕದ ಮೆಥಂಫೆಟಮೈನ್‌ ಮತ್ತು 250 ಎಲ್‌.ಎಸ್.ಡಿ. ಸ್ಟ್ಯಾಂಪ್‍ ಡ್ರಗ್, ನಗದು 3,70,050 ರೂಪಾಯಿ ಹಾಗೂ ಒಂದು ಸ್ವಿಪ್ಟ್ ಕಾರು ಸೇರಿದಂತೆ ಒಟ್ಟು 14 ಲಕ್ಷದ ಒಂದು ಸಾವಿರದ ಐವತ್ತು ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿ 3ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

DAKSHINA KANNADA

Puttur : ವಿವಾದಕ್ಕೆ ಕಾರಣವಾದ ‘ಬುರ್ಖಾ ತೆಗೆದು ಒಳಗೆ ಬನ್ನಿ’ ಸೂಚನಾ ಫಲಕ

Published

on

ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆ ಒಂದಲ್ಲಾ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿ ಇರುತ್ತದೆ. ಇದೀಗ ಆಸ್ಪತ್ರೆಯಲ್ಲಿ ಹಾಕಲಾಗಿರುವ ಸೂಚನಾ ಫಲಕವೊಂದು ವಿವಾದಕ್ಕೆ ಕಾರಣವಾಗಿದೆ.  ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದ ಸೂಚನಾ ಫಲಕವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕವನ್ನು ಹಾಕಲಾಗಿದೆ. ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿದ್ದ ಫಲಕವನ್ನು ಕಳೆದ ಒಂದು ವರ್ಷದ ಹಿಂದೆಯೇ ಹಾಕಲಾಗಿತ್ತು. ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದು ಹರಿಯ ಬಿಡಲಾಗಿತ್ತು. ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್‌ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ.

ಒತ್ತಡ ಹಿನ್ನಲೆಯಲ್ಲಿ ಸೂಚನಾ ಫಲಕ ತೆರವುಗೊಳಿಸಲಾಗಿದೆ. ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಗೊಂದಲದಲ್ಲಿರುವ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು, ಚಿಕಿತ್ಸೆಯಲ್ಲೂ ಧರ್ಮ ಎಳೆತಂದಿರುವ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಈ ಸೂಚನಾ ಫಲಕದ ಬಗ್ಗೆ ತನ್ನ ಸಮುದಾಯಕ್ಕೆ ಸ್ಪಷ್ಟೀಕರಣ ನೀಡಿದ ಪುತ್ತೂರು ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ ಅವರು, ಇಸಿಜಿ ಮಾಡಲು ಹೋಗುವ ಬಳಿ ಇರೋ ರೂಂನಲ್ಲಿ ಈ ಸೂಚನಾ ಫಲಕ ಹಾಕಲಾಗಿದೆ. ಹೆಚ್ಚಾಗಿ ನಮ್ಮ ಮುಸ್ಲಿಂ ಸಮುದಾಯಕ್ಕೆ ಸೇರಿದ ಡಾಕ್ಟರ್ ಗಳೇ  ಇಲ್ಲಿ ಹೆಚ್ಚಿದ್ದಾರೆ. ಅದಲ್ಲದೇ ಅವರೆಲ್ಲರೂ ಹಿಜಾಬ್ ಧರಿಸಿಯೇ ಡ್ಯೂಟಿ ಮಾಡ್ತಾರೆ. ಹಾಗಿರುವಾಗ ಇಸಿಜಿಗೆ ತೆರಳುವ ಸಂದರ್ಭ ಬುರ್ಖಾ ತೆಗೆದು ಹೋಗ ಬೇಕಾಗುತ್ತದೆ. ಯಾಕೆಂದರೆ ದೊಡ್ಡ ದೊಡ್ಡ ಅಪಘಾತದ ಅಥವಾ ಇಸಿಜಿ ಸಂದರ್ಭದಲ್ಲಿ ಮಾತ್ರ ಬುರ್ಖಾ ತೆಗೆಯ ಬೇಕಾಗುತ್ತದೆ’ ಬುರ್ಖಾ ತೆಗೆಯದೆ ಇದ್ದಲ್ಲಿ ಚಿಕಿತ್ಸೆ ನೀಡುವುದು ಹೇಗೆ.. ಇಸಿಜಿ ಮಾಡುವುದು ಹೇಗೆ…? ಎಂದು ಅವರು ಪ್ರಶ್ನಿಸಿದ್ದಾರೆ. ಇದ್ಯಾವುದೋ ಕೋಮು ಭಾವನೆಯಲ್ಲಿ ಹಾಕಿದಂತಹ ಸೂಚನಾ ಫಲಕವಲ್ಲ’. ‘ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ ಎಂಬಂತೆ ಕೆಲವರು ಪೋಸ್ಟ್ ವೈರಲ್ ಮಾಡಿದ್ದಾರೆ. ಆಸ್ಪತ್ರೆಯ ಒಳಗಡೆ ಬುರ್ಖಾ ಧರಿಸಿ ಹೋಗಬಹುದು, ಆದರೆ ಇಸಿಜಿಗೆ ಹೋಗುವ ಸಂದರ್ಭ ಬುರ್ಖಾ ತೆಗೆದು ಹೋಗ ಬೇಕು’ ಎಂದು ಸ್ಪಷ್ಟಣೆ ನೀಡಿದ್ದಾರೆ.

 

Continue Reading

BELTHANGADY

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

Published

on

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಡಿ.10ಕ್ಕೆ ಬೆಳಿಗ್ಗೆ ಪತ್ತೆಯಾಗಿದೆ.


ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡುತ್ತಿದ್ದಾಗ ಶವವೊಂದು ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು ಪೊಲೀಸರು ಉಜಿರೆ ಘಟಕ ಪ್ರತಿನಿಧಿ ರವೀಂದ್ರ ಇವರಿಗೆ ಫೋನ್ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಇವರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಶಿಶಿಲ- ಅರಿಸಿನಮಕ್ಕಿ ಘಟಕದ ಅವಿನಾಶ್ ಬಿಡೆ, ಉಜಿರೆ ಘಟಕದ ರಾಘವೇಂದ್ರ, ಶಶಿಕುಮಾ‌ರ್ ಇವರೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಪೊಲೀಸ್‌ ಠಾಣಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಶವವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Continue Reading

LATEST NEWS

Trending