BANTWAL
ಕೋಟ್ಯಾಂತರ ರೂಪಾಯಿ ವೆಚ್ಚ ಮಾದರಿ ರಸ್ತೆ ಉದ್ಘಾಟನೆಗೊಳ್ಳುವ ಮುನ್ನವೇ ಒಡೆಯಲು ಮುಂದಾದ ಅಧಿಕಾರಿಗಳು..!
ಕೋಟ್ಯಾಂತರ ರೂಪಾಯಿ ವೆಚ್ಚ ಮಾದರಿ ರಸ್ತೆ ಉದ್ಘಾಟನೆಗೊಳ್ಳುವ ಮುನ್ನವೇ ಒಡೆಯಲು ಮುಂದಾದ ಅಧಿಕಾರಿಗಳು..!
ಮಂಗಳೂರು : ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾದ ಮಾದರಿ ರಸ್ತೆ ಉದ್ಘಾಟನೆಗೊಳ್ಳುವ ಮೊದಲೇ ನೀರಿನ ಯೋಜನೆಗಾಗಿ ಅಧಿಕಾರಿಗಳು ಒಡೆಯಲು ಮುಂದಾದ ಘಟನೆ ಮಂಗಳೂರಿನ ಉಳ್ಳಾಲದ ಮುಡಿಪುವಿನಲ್ಲಿ ನಡೆದಿದೆ.
ಉಳ್ಳಾಲಮುಡಿಪು ಕಾಯರ್ಗೋಳಿಯಿಂದ ಕಂಬ್ಲಪದವುವರೆಗಿನ ರಸ್ತೆ ನಿರ್ಮಾಣಗೊಂಡು 5-6 ತಿಂಗಳಷ್ಟೇ ಕಳೆದಿದೆ.
ಖಾಸಗಿ ಸಂಸ್ಥೆ ಅಧೀನದ ಟ್ರಸ್ಟ್ ದೇಣಿಗೆಯಡಿ ಹೆಚ್ಚಿನ ಮುತುವರ್ಜಿ ವಹಿಸಿ ಜಿಲ್ಲೆಯಲ್ಲೇ ಗ್ರಾಮಾಂತರ ಭಾಗದಲ್ಲಿ ಮಾದರಿ ರಸ್ತೆಯಾಗಿ ನಿರ್ಮಾಣ ಆಗಿದೆ.
ಆದರೆ ಹರೇಕಳ-ಅಡ್ಯಾರ್ ಸೇತುವೆಯಿಂದ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹಂಚಿಕೆಯಾಗಲಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೈಗೊಂಡಿರುವ ಕರ್ನಾಟಕ ಜಲಮಂಡಳಿ ಇನ್ನೂ ಉದ್ಘಾಟನೆಗೊಳ್ಳದ ಮಾದರಿ ರಸ್ತೆಯನ್ನೇ ಒಡೆಯಲು ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುಸಜ್ಜಿತ ಚರಂಡಿ, ದಾರಿದೀಪಗಳು, ಫುಟ್ಪಾತ್ ವ್ಯವಸ್ಥೆ , ರಸ್ತೆ ವಿಭಾಜಕದಲ್ಲಿ ತಂಪೆರೆಯುವ ಗಿಡಗಳು ಹೀಗೆ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಎಲ್ಲಿಯೂ ಕಾಣದ ರಸ್ತೆ ಮುಡಿಪು ಭಾಗದಲ್ಲಿ ನಿರ್ಮಾಣವಾಗಿದೆ.
ಲೋಕೋಪಯೋಗಿ ಇಲಾಖೆ ಕೋಟ್ಯಂತರ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಸಿದ್ದು, ಖಾಸಗಿ ಸಂಸ್ಥೆಯ ಕೋಟ್ಯಂತರ ದೇಣಿಗೆಯೂ ರಸ್ತೆ ಅಭಿವೃದ್ಧಿಗೆ ದೇಣಿಗೆಯಾಗಿ ನೀಡಲಾಗಿದೆ.
ಅಲ್ಲದೆ ರಸ್ತೆ ನಿರ್ಮಾಣದ ಸಂದರ್ಭ ಅಂತರಾಷ್ಟ್ರೀಯ ಮಾನ್ಯತೆ ಪಡೆದಿರುವ ಸಂಸ್ಥೆಯ 5 ಮಂದಿ ಇಂಜಿನಿಯರ್ ಗಳು ಸ್ಥಳದಲ್ಲೇ ಇದ್ದು, ರಸ್ತೆ ಗುಣಮಟ್ಟವನ್ನು ಪರಿಶೀಲಿಸಿಯೇ ಕಾಮಗಾರಿ ಮುಗಿಸಲಾಗಿದೆ.
ಇದೀಗ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿದ ರಸ್ತೆಯನ್ನು ಒಡೆಯಲು ಕರ್ನಾಟಕ ಜಲಮಂಡಳಿ ಮುಂದಾಗಿದೆ. ರಸ್ತೆ ಬದಿಯ ಸರಕಾರಿ ಭೂಮಿಯಲ್ಲೇ ಪೈಪ್ಲೈನ್ ಅಳವಡಿಸುವುದಾಗಿ ಡಿಪಿಆರ್ ಸಿದ್ಧಪಡಿಸಲಾಗಿತ್ತು.
ಆದರೆ ಇದೀಗ ಏಕಾಏಕಿ ಬದಲಾಯಿಸಲಾಗಿದೆ ಅನ್ನುವ ಆರೋಪ ಕೇಳಿಬಂದಿದೆ. ಜನರ ತೆರಿಗೆ ಹಣದ ಪಾಲನ್ನೂ ಹೊಂದಿರುವ ರಸ್ತೆಯನ್ನು ಉದ್ಘಾಟನೆಗೆ ಮುನ್ನ ಒಡೆಯಲು ಸಹಾಯಕ ಆಯುಕ್ತರು ವಿಶೇಷ ಆಸಕ್ತಿಯನ್ನು ಹೊಂದಿರುವ ಕುರಿತು ವ್ಯಾಪಕ ಟೀಕೆಗಳು ಕೇಳಿಬಂದಿದೆ.
ಅಲ್ಲದೆ ಅಧಿಕಾರಿಯನ್ನು ಶೀಘ್ರವೇ ಎತ್ತಂಗಡಿ ಮಾಡಬೇಕು ಅನ್ನುವ ಆಗ್ರಹವೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!