Sunday, December 4, 2022

ಕೇರಳದ ರೂಪದರ್ಶಿ-ಮಂಗಳಮುಖಿ ನೇಣಿಗೆ ಶರಣು

ಕೊಚ್ಚಿ: ನಟಿ, ರೂಪದರ್ಶಿಯಾಗಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಚ್ಚಿಯ ಚಕ್ಕರಪರಂಬುವಿನ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ.

ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ (26) ಮೃತಪಟ್ಟಿದ್ದಾರೆ.


ಆಳಪ್ಪುಳ ಜಿಲ್ಲೆ ಮೂಲದ ಶೆರಿನ್ ಕಳೆದ ಹಲವು ವರ್ಷಗಳಿಂದ ಕೊಚ್ಚಿಯಲ್ಲಿ ನೆಲೆಸಿದ್ದರು.

ಪ್ರಾಥಮಿಕ ತನಿಖೆ ಬಳಿಕ ಮಾನಸಿಕ ಒತ್ತಡ ಎದುರಿಸಲಾಗದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಇವರು ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಮೊದಲಿಗೆ ನೋಡಿದ ಆಕೆಯ ರೂಂಮೇಟ್, ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಈ ಕುರಿತಂತೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಚಕ್ಕರಪರಂಬು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics