ಶ್ರೀನಗರ: ಯೋಧರೊಂದಿಗೆ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಮ್ಮುವಿನ ರಾಜೌರಿಯಲ್ಲಿ ಬಂದಿಳಿದಿದ್ದಾರೆ.
ಅಲ್ಲಿಂದ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಣೆ ನಡೆಸಲು ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ನಿನ್ನೆ ಜಮ್ಮುವಿಗೆ ಆಗಮಿಸಿದ್ದು, ಭದ್ರತೆಯನ್ನು ಪರಿಶೀಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹೀಗೆ ಗಡಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಣೆ ಮಾಡುತ್ತಿರುವುದು ಇದೇ ಮೊದಲೇನೂ ಅಲ್ಲ.
2014ರಲ್ಲಿ ಪ್ರಧಾನಮಂತ್ರಿಯಾದಾಗಿನಿಂದಲೂ ದೀಪಾವಳಿಯನ್ನು ಯೋಧರೊಂದಿಗೆ ಆಚರಣೆ ಮಾಡುತ್ತಿದ್ದಾರೆ. ಈ ಹಿಂದಿನ ದೀಪಾವಳಿಯನ್ನು ಅವರು ಉತ್ತರಾಖಂಡ್, ಪಂಜಾಬ್, ಹಿಮಾಚಲ ಪ್ರದೇಶ, ರಾಜಸ್ಥಾನ, ಜಮ್ಮು-ಕಾಶ್ಮೀರದ ಗಡಿಗಳಲ್ಲಿ ಯೋಧರೊಂದಿಗೆ ಆಚರಿಸಿದ್ದರು. 2019ರಲ್ಲಿಯೂ ರಾಜೌರಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು.