Connect with us

    DAKSHINA KANNADA

    ರಾಜ್ಯದಲ್ಲಿ 40 % ಭ್ರಷ್ಟಾಚಾರದ ಸರಕಾರದ ಬಗ್ಗೆ ಮೋದಿ ಮಾತನಾಡಲ್ಲ – ಡಬ್ಬಲ್‌ ಇಂಜಿನ್ ಸರಕಾರದ ವಿರುದ್ಧ ಹರಿಹಾಯ್ದ ಖರ್ಗೆ..!

    Published

    on

    ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾವು ಸಂರಕ್ಷಣೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ರಾಜ್ಯದ 40 ಪರ್ಸೆಂಟ್‌ ಕಮಿಷನ್ ಸರಕಾರ ಭ್ರಷ್ಟಾಚಾರದ ಪರಾಕಾಷ್ಟೆ ತಲುಪಿದ್ದು, ಈ ಚುನಾವಣೆಯಲ್ಲಿ ಅದನ್ನು ಕಿತ್ತೊಗೆಯಬೇಕಾಗಿದೆ. ಇಂತಹ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿಯೂ ಮಾತನಾಡಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಮಂಗಳೂರು : ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾವು ಸಂರಕ್ಷಣೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ರಾಜ್ಯದ 40 ಪರ್ಸೆಂಟ್‌ ಕಮಿಷನ್ ಸರಕಾರ ಭ್ರಷ್ಟಾಚಾರದ ಪರಾಕಾಷ್ಟೆ ತಲುಪಿದ್ದು, ಈ ಚುನಾವಣೆಯಲ್ಲಿ ಅದನ್ನು ಕಿತ್ತೊಗೆಯಬೇಕಾಗಿದೆ. ಇಂತಹ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿಯೂ ಮಾತನಾಡಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಕರ್ನಾಟಕದಲ್ಲಿ ಲಂಚ ಕೊಡದೇ ಕೆಲಸ ಆಗುವುದಿಲ್ಲ ಎನ್ನುವ ಅಭಿಪ್ರಾಯ ಪ್ರತೀ ಮತದಾರರಲ್ಲಿ ಮೂಡಿದೆ.

    ಇವರ ಭ್ರಷ್ಟಾಚಾರದ ವಾಸನೆ ಹೊರರಾಜ್ಯದಲ್ಲೂ ಇದು ಹಬ್ಬಿದೆ. ಕಾಂಗ್ರೆಸ್ ಸರಕಾರವಿದ್ದಾಗ ಅಭಿವೃದ್ಧಿ, ಪ್ರವಾಸೋದ್ಯಮ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಪ್ರಗತಿಯಲ್ಲಿದ್ದೆವು. ಆದರೆ ಬಿಜೆಪಿ ಸರಕಾರ ಬಂದ ಬಳಿಕ ಏನಾಗಿದೆ ಎಂದು ಪ್ರಶ್ನಿಸಿದರು.

    40 ಪರ್ಸೆಂಟ್‌ ಕಮಿಷನ್‌ ಕೊಟ್ಟರೆ ಬಿಜೆಪಿ ಸರಕಾರದಲ್ಲಿ ಎಲ್ಲಾ ಕೆಲಸ ಆಗುತ್ತದೆ ಎಂದು ಜಗಜ್ಜಾಹೀರಾಗಿದೆ.

    ಇದಕ್ಕೆ ಸಾಕ್ಷಿ ನಾವು ಕೊಡಬೇಕಾಗಿಲ್ಲ. ಗುತ್ತಿಗೆದಾರರೇ ಇದನ್ನು ಜಗಜ್ಜಾಹೀರು ಮಾಡಿದ್ದಾರೆ. ಪ್ರಧಾನಿಗೂ , ರಾಷ್ಟ್ರಪತಿಗಳಿಗೆ, ಗವರ್ನರ್‌ಗೆ ದೂರು ಕಳಿಸಿದ್ದಾರೆ.

    ಇದಕ್ಕಿಂತ ದೊಡ್ಡ ಸಾಕ್ಷಿ ಇನ್ನೇನು ಬೇಕು. ಇಂತಹ ಭ್ರಷ್ಟಾಚಾರದ ಸರಕಾರ ಇರುವ ಕಾರಣ ಇದನ್ನು ತೆಗೆದುಹಾಕಬೇಕು ಎಂದು ಜನ ತೀರ್ಮಾನ ಮಾಡಿದ್ದಾರೆ.

    ಮೋದಿ ಭ್ರಷ್ಟಾಚಾರದಿಂದ ತಿಂತಾ ಇರೋವರಿಗೆ ತಿನ್ನಲು ಅನುಮತಿ ಕೊಟ್ಟಿದ್ದಾರೆ. ಅಮಿತ್‌ ಅವರು ಕೂಡಾ ಸುಮ್ಮನಿದ್ದಾರೆ ಎಂದರು.

    ರಾಜ್ಯದಲ್ಲಿ 25 ಲಕ್ಷ ಡಾಕ್ಟರ್ಸ್‌, ಇಂಜಿನಿಯರ್‌ ವಿದ್ಯಾವಂತ ನಿರುದ್ಯೋಗಿಗಳಿದ್ದಾರೆ. ಅವರಿಗೆ ಉದ್ಯೋಗಾವಕಾಶ ಸಿಕ್ತಾ ಇಲ್ಲ. ಸುಮಾರು 3 ಕೋಟಿ ಜನ ನಿರುದ್ಯೋಗಿಗಳು ಇದ್ದಾರೆ.

    2 ಲಕ್ಷ 70 ಸಾವಿರ ಜನರಿಗೆ ಉದ್ಯೋಗಾವಕಾಶ ಕೊಡುವ ಸರಕಾರಿ ಹುದ್ದೆಗಳಿದ್ದರೂ ಅದನ್ನು ತುಂಬಲು ಸರಕಾರ ಮುಂದಾಗಿಲ್ಲ ಯಾಕೆ ಎಂದು ಪ್ರಶ್ನಿಸಿದರು.

    ಮಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲೂ ಅಭಿವೃದ್ಧಿಗೆ ಎಷ್ಟು ಬಂಡವಾಳ ಹೂಡಿಕೆ ಮಾಡಿದ್ದೀರಿ ಎಂದು ಬಿಜೆಪಿಯವರನ್ನು ಪ್ರಶ್ನಿಸಿದರು. ನಮಗೆ ಸರಕಾರ ರಚಿಸಲು 150 ಸೀಟುಗಳನ್ನು ತರಲು ಕೈಜೋಡಿಸಿ ಎಂದು ಮತದಾರರಿಗೆ ವಿನಂತಿ ಮಾಡುತ್ತೇವೆ ಎಂದರು.
    ಕೇಂದ್ರದ ಕೈಯಲ್ಲಿ ಇಡಿ, ಐಟಿ ಎಲ್ಲವೂ ಇದೆ. ಹೀಗಾಗಿ ಅವರ ಕಳ್ಳತನ ಗೊತ್ತಾಗುತ್ತಿಲ್ಲ.

    ತನ್ನ ಬಟ್ಟಲಿನಲ್ಲಿ ಹೆಗ್ಗಣ ಬಿದ್ದಿದ್ದರೂ, ಉಳಿದವರ ಬಟ್ಟಲಿನ ನೊಣ ಬಿಜೆಪಿಯವರು ತೋರಿಸುತ್ತಿದ್ದಾರೆ. ಬಿಜೆಪಿಯವರೇ ಎಲ್ಲಾ ಕಡೆ ಕಳ್ಳತನದ ಎಟಿಎಂ ಇಟ್ಟಿದ್ದಾರೆ.

    ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸ್ತಾ ಇದೆ, ಮನಿ ಮತ್ತು‌ ಮಸಲ್ ಪವರ್ ಬಳಸ್ತಾ ಇದ್ದಾರೆ ಎಂದರು.

    ರಾಜ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನನಗೆ ಯಾವ ಸ್ವಾಮಿಗಳಿಗೆ ಎಷ್ಟು ಪ್ರಭಾವ ಇದೆ ಅಂತ ಗೊತ್ತಿಲ್ಲ.

    ಯೋಗಿ ಆದಿತ್ಯನಾಥ್ ನಮ್ಮ ಜೊತೆ ಸಂಸತ್ತಿನಲ್ಲಿ ಇದ್ದರು. ಆಗ ರಾಜಕೀಯವೇ ಬೇಡ ಎಂದು ಜೋರಾಗಿ ಅತ್ತರು, ನಾವು ಅವರಿಗೆ ಸಮಾಧಾನ ಮಾಡಿದೆವು.

    ಇದೆಲ್ಲಾ ಬಿಟ್ಟು ಒಬ್ಬ ಸ್ವಾಮೀಜಿಯಾಗಿ ಸಮಾಜ ಸೇವೆ ಮಾಡಿ ಅಂದಿದ್ದೆವು. ಇನ್ನು ಇಲ್ಲಿಗೆ ಬಂದು ಭಾಷಣ ಮಾಡಿ ಏನು ಮಾಡುತ್ತಾರೆ ಗೊತ್ತಿಲ್ಲ ಎಂದರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending