Friday, May 27, 2022

ಇಂದು ಪ್ರಧಾನಿ ಮೋದಿ- ಪೋಪ್‌ ಫ್ರಾನ್ಸಿಸ್‌ ಭೇಟಿ

ರೋಮ್: ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಇಟಲಿಗೆ ಆಗಮಿಸಿದರು.

ಇಂದು ಕೋವಿಡ್‌–19ರ ಸಾಂಕ್ರಾಮಿಕ ರೋಗದಿಂದ ಜಗತ್ತು ಎದುರಿಸುತ್ತಿರುವ ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಗಳು ಹಾಗೂ ಚೇತರಿಕೆಗೆ ಸಂಬಂಧಿಸಿದ ವಿಷಯಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.


ಇಟಲಿ ಪ್ರವಾಸದಲ್ಲಿ ಇರುವ ಪ್ರಧಾನಿ ಮೋದಿ ಇಂದು ವ್ಯಾಟಿಕನ್‌ ಸಿಟಿಗೂ ಭೇಟಿ ನೀಡಲಿದ್ದಾರೆ. ಈ ಮಧ್ಯೆ ಕ್ರೈಸ್ತರ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ಭೇಟಿಯಾಗುವ ಸಾಧ್ಯತೆ ಇದೆ.

ಇದಾದ ನಂತರ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ಆಹ್ವಾನದ ಮೇರೆಗೆ ಮೋದಿ ಅವರು ನವೆಂಬರ್‌ 1ರಂದು ಬ್ರಿಟನ್‌ನ ಗ್ಲಾಸ್ಗೊಗೆ ಪ್ರಯಾಣಿಸಲಿದ್ದಾರೆ.

LEAVE A REPLY

Please enter your comment!
Please enter your name here

Hot Topics