Connect with us

  DAKSHINA KANNADA

  ರಾಹುಲ್ ಗಾಂಧಿಗೆ ಹೊಡೆಯಲು ಮೋದಿಗೇ ತಾಕತ್ತಿಲ್ಲ, ಇನ್ನು ಭರತ್ ಶೆಟ್ಟಿ ಯಾವ ಲೆಕ್ಕ: ಐವನ್ ಡಿಸೋಜಾ ಕಿಡಿ

  Published

  on

  ಮಂಗಳೂರು: ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಧ್ಯವಾಗಿಲ್ಲ, ಇನ್ನು ಭರತ್ ಶೆಟ್ಟಿಗೆ ಸಾಧ್ಯವಿದೆಯಾ ಎಂದು ವಿಧಾನಪರಿಷತ್ ಸದಸ್ಯರಾದ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಪ್ರಶ್ನಿಸಿದರು.

  ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಹೊಡೆಯಲು ಮೋದಿಗೆ ತಾಕತ್ತಿಲ್ಲ, ಇನ್ನು ಭರತ್ ಶೆಟ್ಟಿ ಯಾವ ಲೆಕ್ಕ ಎಂದರು. ರಾಹುಲ್ ಗಾಂಧಿ ಮಾತಿಗೆ ಪ್ರಧಾನಿ ಮೋದಿಯವರಿಗೆ ಉತ್ತರ ಕೊಡಲು ಸಾಧ್ಯವಾಗಿಲ್ಲ, ಹಾಗಾಗಿ ಬಿಜೆಪಿಯ ಪುಡಿ ರಾಜಕಾರಣಿಗಳು ಹಾದಿಬೀದಿಯಲ್ಲಿ ಚಿಲ್ಲರೆ ರಾಜಕಾರಣ ಮಾಡಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದರು.

  ರಾಹುಲ್ ಗಾಂಧಿಯನ್ನು ಭರತ್ ಶೆಟ್ಟಿ ನಾಯಿಗೆ ಹೋಲಿಸಿದ್ದಾರೆ, ನಾಯಿಗೆ ಇರುವ ಬುದ್ಧಿ ಡಾಕ್ಟರ್ ಭರತ್ ಶೆಟ್ಟಿಗೆ ಇಲ್ಲ, ನಾಯಿಗೆ ಇರುವ ಮಾನಮರ್ಯಾದಿ ಕೂಡ ಭರತ್ ಶೆಟ್ಟಿಗೆ ಇಲ್ಲ, ಭರತ್ ಶೆಟ್ಟಿ ಶಾಸಕ‌ ಸ್ಥಾನಕ್ಕೆ ಅರ್ಹನಲ್ಲ ಎಂದು ಕಿಡಿಕಾರಿದರು.

  ನಾವು ಶಸ್ತ್ರಾಸ್ತ್ರ ತೆಗೆಯುತ್ತೇವೆ ಎಂದು ಭರತ್ ಶೆಟ್ಟಿ ಹೇಳಿರುವುದು ಪ್ರಚೋದನೆ ಆಗಿದ್ದು, ಭರತ್ ಶೆಟ್ಟಿ ಮೇಲೆ ಸುಮೊಟೊ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕೆಂದು ಮಂಗಳೂರು ನಗರ ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡುವುದಾಗಿ ಹೇಳಿದರು. ಬೇರೆ ಪ್ರಕರಣದಲ್ಲಿ ಸುಮೊಟೊ ಕೇಸ್ ದಾಖಲಿಸುವ ಮಂಗಳೂರು ಪೊಲೀಸರು ಈಗ ಎಲ್ಲಿದ್ದಾರೆ ಎಂದು ಐವನ್ ಡಿಸೋಜಾ ಪ್ರಶ್ನಿಸಿದರು.

  ಭರತ್ ಶೆಟ್ಟಿ ಥರದ ಬಿಜೆಪಿ ನಾಯಕರ ಪ್ರಚೋದನೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೋಮುಸೂಕ್ಷ್ಮ ಪ್ರದೇಶ ಎಂಬ ಹಣೆಪಟ್ಟಿ ಸಿಕ್ಕಿದೆ ಎಂದು ಆರೋಪಿಸಿದ ಅವರು, ಹಿಂದೂ ಧರ್ಮವನ್ನು ಯಾರೂ ಭರತ್ ಶೆಟ್ಟಿಗೆ ಗುತ್ತಿಗೆ ಕೊಟ್ಟಿಲ್ಲ, ಬಿಜೆಪಿಯವರಿಗೆ ಹಿಂದೂ ಧರ್ಮದ ಪರ ವಕಾಲತು ಮಾಡಲು ದೇಶದ ಜನರು ಅಧಿಕಾರ ಕೊಟ್ಟಿಲ್ಲ ಎಂದರು.

  ಜನರ ಮಧ್ಯೆ ವಿಷಬೀಜ ಬಿತ್ತಿ ಅಧಿಕಾರ ನಡೆಸುವ ಬಿಜೆಪಿಯವರು ಮನೆಗೆ ಹೋಗುವ ಕಾಲ ಹತ್ತಿರ ಬಂದಿದೆ, ಮೋದಿ ಸರ್ಕಾರ ಇನ್ನು 6 ತಿಂಗಳಲ್ಲಿ ಪತನವಾಗಲಿದೆ ಎಂದು ಐವನ್ ಡಿಸೋಜಾ ಭವಿಷ್ಯ ನುಡಿದರು.

  ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಜಿ ಹೆಗ್ಡೆ, ಮಾಜಿ ಮೇಯರ್ ಗಳಾದ ಎಂ ಶಶಿಧರ್ ಹೆಗ್ಡೆ, ಅಶ್ರಫ್ ಕೆ, ಹರೀನಾಥ್ ಕೆ, ಬ್ಲಾಕ್ ಅಧ್ಯಕ್ಷರು ಗಳು ಪ್ರಕಾಶ್ ಸಾಲಿಯಾನ್, ಸುರೇಂದ್ರ ಕಾಂಬ್ಳಿ, ಜೆ ಅಬ್ದುಲ್ ಸಲೀಂ, ಬೇಬಿ ಕುಂದರ್ ಅಪ್ಪಿಲತಾ, ಟಿ ಹೊನ್ನಯ್ಯ, NSUI ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ, ಭಾಸ್ಕರ್ ರಾವ್, ಶುಭೋದಯ ಆಳ್ವಾ ಉಪಸ್ಥಿತರಿದ್ದರು.

  DAKSHINA KANNADA

  ಬಜಪೆ: ಅದ್ಯಪಾಡಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಜಲಾವೃತ

  Published

  on

  ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.

  ಕಳೆದ ಹತ್ತು ವರ್ಷದಿಂದ ಈ ಗ್ರಾಮದ ಜನರು ಮಳೆಗಾಲದಲ್ಲಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಿಂದ ಇಲ್ಲಿನ ರೈತರು ಈಗಾಗಲೇ ತಮ್ಮ ಕೃಷಿ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಉಂಟಾಗುವ ನೆರೆಯಿಂದ ಮನೆಗಳೂ ಕುಸಿಯುವ ಭೀತಿ ಎದುರಾಗಿದೆ.

  ಈ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಜನರ ಸಂಕಷ್ಟ ಕೇಳಿದ್ದಾರೆ. ದೋಣಿಯ ಮೂಲಕ ಇಲ್ಲಿನ ಮನೆಗಳಿಗೆ ತೆರಳಿದ ಜಿಲ್ಲಾದಿಕಾರಿ ಮನೆಯಲ್ಲಿದ್ದ ವೃದ್ಧರಿಗೆ ಸಾಂತ್ವಾನ ಹೇಳಿದ್ದಾರೆ. ಸುಮಾರು 80 ಜನರು ಇಲ್ಲಿ ವಾಸವಾಗಿದ್ದು, ಜನರನ್ನು ಸ್ಥಳಾಂತರ ಮಾಡಿ ಸುರಕ್ಷಿತ ಜಾಗಕ್ಕೆ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

  ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ಥಳೀಯ ಜನರ ಬಳಿ ಮಾತನಾಡಿದ್ದು, ಅವರು ಪ್ರಮುಖ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆ ಬಗ್ಗೆ ಗಮನ ಹರಿಸಲಾಗುವುದು ಆದ್ರೆ ಅದಕ್ಕೂ ಮೊದಲು ಈಗ ಇವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

  Continue Reading

  BANTWAL

  ವಿಟ್ಲದಲ್ಲಿ ಕುಸಿದು ಬಿದ್ದ ಕೋಳಿ ಶೆಡ್; 1500ಕ್ಕೂ ಅಧಿಕ ಕೋಳಿ ಸಾ*ವು

  Published

  on

  ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.

  ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು.

  ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾ*ಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

  Continue Reading

  DAKSHINA KANNADA

  ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ

  Published

  on

  ಮಂಗಳೂರು: ರೈಲ್ವೇ ಇಲಾಖೆಗೆ ಹೆಚ್ಚುವರಿ ರೈಲು ಓಡಿಸುವಂತೆ ಸಂಸದ ಬ್ರಿಜೇಶ್ ಚೌಟ ಮಾಡಿದ ಮನವಿಗೆ ನೈರುತ್ಯ ರೈಲ್ವೇ ಇಲಾಖೆ ಸ್ಪಂಧಿಸಿದೆ.

  ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದೆ. ಶುಕ್ರವಾರ ಹಾಗೂ ಶನಿವಾರದಂದು ತಲಾ ಒಂದು ಹಾಗೂ ಶನಿವಾರ ಹಾಗೂ ಭಾನುವಾರದಂದು ತಲಾ ಎರಡು ಹೆಚ್ಚುವರಿ ರೈಲು ಓಡಿಸುವ ಬಗ್ಗೆ ರೈಲ್ವೇ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

  ಮಂಗಳೂರು ಬೆಂಗಳೂರು ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡುತ್ತಿದ್ದು, ಮಳೆಯ ಕಾರಣ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಶಿರಾಡಿ ಘಾಟ್, ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂದ ವಿಧಿಸಲಾಗಿದೆ. ಹೀಗಾಗಿ ಜನರ ಅಗತ್ಯತೆ ಪೂರೈಸಲು ಹೆಚ್ಚುವರಿ ರೈಲು ಓಡಿಸುವಂತೆ ಸಂಸದರು ರೈಲ್ವೇ ಇಲಾಖೆಗೆ ಪತ್ರ ಬರೆದಿದ್ದರು.

  ಸಂಸದರ ಪತ್ರ ಕೈ ಸೇರಿದ ಒಂದೇ ಘಂಟೆಯಲ್ಲಿ ನೈರುತ್ಯ ರೈಲ್ವೇ ಇಲಾಖೆ ಹೆಚ್ಚುವರಿ ರೈಲು ಓಡಿಸುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಹೆಚ್ಚುವರಿ ರೈಲು ಓಡಾಟದ ಸಮಯವನ್ನು ನಿಗಧಿ ಪಡಿಸಿದೆ. ಈ ಕಾರಣದಿಂದ ಮಾಮೂಲ ರೈಲಿನಲ್ಲಿ ಪ್ರಯಾಣಿಕರಿಗೆ ಸೀಟು ಸಿಗದ ಪರದಾಡುವುದು ಕೂಡಾ ತಪ್ಪಿದಂತಾಗಿದೆ.

  Continue Reading

  LATEST NEWS

  Trending