Connect with us

DAKSHINA KANNADA

MANGALURU : ಮೋದಿ ರೋಡ್ ಶೋ : ವಾಹನ ಸಂಚಾರಕ್ಕೆ ಬದಲಿ ಮಾರ್ಗ; ಇಲ್ಲಿದೆ ಡಿಟೇಲ್ಸ್

Published

on

ಮಂಗಳೂರು : ಎಪ್ರಿಲ್ 14 ರ ಸಂಜೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಗರದ ನಾರಾಯಣಗುರು ವೃತ್ತದಿಂದ ನವ ಭಾರತ್ ವೃತ್ತದ ವರೆಗೆ ರೋಡ್ ಶೋ ನಡೆಯಲಿದೆ. ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ಈಗಾಗಲೇ ಭರದ ಸಿದ್ಧತೆ ನಡೆಸಲಾಗಿದೆ. ಭದ್ರತಾ ದೃಷ್ಟಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.

ಇನ್ನು ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಹಾಗೂ ವಾಹನ ಪಾರ್ಕಿಂಗ್ ವಿಚಾರದಲ್ಲಿ ಬದಲಾವಣೆ ಮಾಡಲಾಗಿದೆ‌. ಈ ಬದಲಾವಣೆ ಈ ಕೆಳಗಿನಂತಿದೆ. 14-04-2024 ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರ ಹೀಗಿದೆ.

ವಾಹನ ಸಂಚಾರ ನಿಷೇಧಿತ ಮಾರ್ಗಗಳು

1. ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
2. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
3. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

 

ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು

1. ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು – ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ – ಕೆ.ಪಿ.ಟಿ – ಕೊಟ್ಟಾರ ಚೌಕಿ – ಉರ್ವ ಸ್ಟೋರ್ – ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ .
2. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಸಿಟಿ ಸೆಂಟರ್ – ಹಂಪನಕಟ್ಟೆ ವರೆಗೆ.
3. ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಾವುಟಗುಡ್ಡ – ಡಾ.ಅಂಬೇಡ್ಕರ್ ವೃತ್ತ – ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಕದ್ರಿ ಕಂಬಳ – ಭಟ್ಟಗುಡ್ಡೆ ರಸ್ತೆಯ ಎರಡು ಬದಿ.
4. ಕಾವೂರು – ಪಂಜಿಮೊಗೆರು – ಕೂಳೂರು – ೪ ನೇ ಮೈಲು – ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿ
5. ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಲ್ಮಠ ರೋಡ್ – ರೂಪಾ ಹೋಟೆಲ್ ರಸ್ತೆ – ಡಾ.ಅಂಬೇಡ್ಕರ್ ವೃತ್ತ – ಕಲೆಕ್ಟರ್ಸ್ ಗೇಟ್ ವೃತ್ತ – ಹಾರ್ಟಿಕಲ್ಚರ್ ಜಂಕ್ಷನ್ – ಸೈಂಟ್ ಆಗ್ನೇಸ್ – ಶಿವಭಾಗ್ – ನಂತೂರು ವೃತ್ತ – ಪದುವಾ – ಕೆ.ಪಿ.ಟಿ ವರೆಗೆ ಎರಡು ಬದಿ.
6. ಬಿ.ಜಿ. ಜಂಕ್ಷನ್ – ಜೈಲ್ ರೋಡ್ – ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿ.

ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ

1. ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲಾ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ಜಂಕ್ಷನ್ – ಶಿವಭಾಗ್ ಜಂಕ್ಷನ್ – ಸೆಂಟ್ ಆಗ್ನೇಸ್ – ಹಾರ್ಟಿಕಲ್ಚರ್ ಜಂಕ್ಷನ್ – ಲೋವರ್ ಬೆಂದೂರು – ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
2. ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
3. ಕಾರ್‌ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
4. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
5. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending