Monday, January 24, 2022

ಮೋದಿ ಭದ್ರತಾ ಲೋಪ ಪ್ರಕರಣ: ನಾವೇ ತನಿಖೆ ನಡೆಸ್ತೇವೆ ಎಂದ ಸುಪ್ರೀಂ

ನವದೆಹಲಿ: ಪಂಜಾಬ್‌ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ವ್ಯವಸ್ಥೆಯಲ್ಲಿ ಉಂಟಾದ ಗಂಭೀರ ಲೋಪದ ಸಂಬಂಧ ತನಿಖೆ ನಡೆಸಲು ಪ್ರತ್ಯೇಕ ಸಮಿತಿ ರಚಿಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಡೆಯುತ್ತಿರುವ ಎಲ್ಲ ರೀತಿಯ ತನಿಖೆಯನ್ನೂ ತಕ್ಷಣವೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಆದೇಶಿಸಿದ್ದಾರೆ.


ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಫಿರೋಜ್‌ಪುರದಲ್ಲಿ ಆಗಿರುವ ಭದ್ರತಾ ಲೋಪದ ತನಿಖೆ ನಡೆಯಲಿದೆ.

ಚಂಡೀಗಡದ ಡಿಜಿಪಿ, ರಾಷ್ಟ್ರೀಯ ತನಿಖಾ ದಳದ ಐಜಿ, ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಹಾಗೂ ಪಂಜಾಬ್‌ ಪೊಲೀಸ್‌ನ ಎಡಿಜಿಪಿ (ಭದ್ರತೆ) ಅವರನ್ನು ತನಿಖಾ ಸಮಿತಿಯಲ್ಲಿ ಒಳಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.

ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಅವರು ಕೇಂದ್ರದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದರು.

ಕೇಂದ್ರ ಸರ್ಕಾರದ ನೇತೃತ್ವದ ಸಮಿತಿಯ ತನಿಖೆಯ ಮೇಲೆ ಪಂಜಾಬ್‌ ಸರ್ಕಾರವು ಅವಿಶ್ವಾಸ ವ್ಯಕ್ತಪಡಿಸಿದೆ.

ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಸ್ವತಂತ್ರ ಸಮಿತಿಯನ್ನು ರಚಿಸುವ ಮೂಲಕ ತನಿಖೆಗೆ ಆಗ್ರಹಿಸಿದೆ.

Hot Topics

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...