Monday, January 24, 2022

ಹೊಸ ವರ್ಷಕ್ಕೆ ದುಬೈನತ್ತ ಮೋದಿ ಪ್ರವಾಸ: Dubai Expo 2020ದಲ್ಲಿ ಭಾಗಿ ಸಾಧ್ಯತೆ

ನವದೆಹಲಿ: ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನ ಮತ್ರಿ ನರೇಂದ್ರ ಮೋದಿ 2022ರಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ವಿದೇಶಿ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.


ಭಾರತ ಮತ್ತು ಯುಎಇ ಪ್ರಸ್ತುತ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ ಮೂರನೇ ಸುತ್ತಿನ ಮಾತುಕತೆಗೆ ತಯಾರಿ ನಡೆಸಿದ್ದು, 2022ರ ಮೊದಲ ತ್ರೈಮಾಸಿಕ ಅಂತಿಮಗೊಳ್ಳುವ ನಿರೀಕ್ಷೆಯಿದೆ.

ಜೊತೆಗೆ ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುತ್ತಿರುವ ಭಾರತದ ನಾಲ್ಕು ಅಂತಸ್ತಿನ ಪೆವಿಲಿಯನ್ ಹೊಂದಿದ ದುಬೈ ಎಕ್ಸ್‌ಪೋದಲ್ಲಿ ಮೋದಿ ಭಾಗಿಯಾಗಲಿದ್ದಾರೆ ಎಂದು ಮೂಲ ಗಳು ತಿಳಿಸಿವೆ.

ಇದು ಖಚಿತವಾದಲ್ಲಿ ಇದು 2022ರಲ್ಲಿ ಅವರ ಮೊದಲ ವಿದೇಶಿ ಪ್ರವಾಸವಾಗಿರಲಿದೆ.

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...