Monday, May 23, 2022

ಪಕ್ಷದ ಶಿಸ್ತು ಉಲ್ಲಂಘನೆ: ಬಿಜೆಪಿ ಬೂತ್‌ ಅಧ್ಯಕ್ಷ ಮಹಮ್ಮದ್ ಅಸ್ಗರ್‌ ಉಚ್ಛಾಟನೆ

ಮಂಗಳೂರು: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಅಮಾನತುಗೊಳಿಸಲಾಗಿದೆ.


ಮಂಗಳೂರು ವಿಧಾನಸಭಾ ಕ್ಷೇತ್ರದ ಪಜೀರು ಗ್ರಾಮದ ಬೂತ್ ಸಂಖ್ಯೆ 109 ಸಾಂಬಾರ್ ತೋಟ ಬೂತ್ ನ ಬಿಜೆಪಿ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜ ದೈವಕ್ಕೆ ಮದುಮಗ ಅವಮಾನ ಮಾಡಿದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಅಂದರೆ ಮದುಮಗನ ಸಹೋದರನನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಆತನನ್ನು ಪೊಲೀಸರು ಬಿಡುಗಡೆ ಮಾಡಿದ್ದರು.

ಈ ವಿಚಾರದಲ್ಲಿ ಅಸ್ಗರ್ ಕೈವಾಡವಿತ್ತು ಎಂಬ ಆರೋಪ ಕೇಳಿ ಬಂದಿತ್ತು.

LEAVE A REPLY

Please enter your comment!
Please enter your name here

Hot Topics

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...