Connect with us

DAKSHINA KANNADA

ಮೊಯಿದಿನ್ ಬಾವಾ ಕಾಂಗ್ರೆಸ್‌ಗೆ ಗುಡ್ ಬೈ : JDS ಸೇರ್ಪಡೆ- ಮಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ..!

Published

on

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಮಾಜಿ ಶಾಸಕ ಮೊಯ್ದೀನ್ ಬಾವ ಸವಾಲೆಸೆದರು.

ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನಾಯತ್ ಆಲಿಗೆ ಟಿಕೆಟ್ ಘೋಷಣೆಯ ಬೆನ್ನಲ್ಲೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವಾ ಅವರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್‌  ಸೇರಿಕೊಂಡಿದ್ದಾರೆ.

ಮಂಗಳೂರು ಉತ್ತರದಲ್ಲೇ  ಇನಾಯತ್‌ ಆಲಿ ವಿರುದ್ದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೊಯಿದಿನ್ ಬಾವಾ ಅವರು  ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಡಿಕೆಶಿ ಅವರು ಟಿಕೆಟ್ ಮಾರಾಟ ಮಾಡಿದ್ದಾರೆ ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು ಇನಾಯತ್ ಆಲಿಗೆ ಕೇವಲ 7 ಶೇ. ಮತ ಸಿಕ್ಕಿದ್ದರೂ ಪಾಲುದಾರ ಎಂಬ ನೆಪದಲ್ಲಿ ಟಿಕೆಟ್ ಮಾರಿದ್ದಾರೆ ಎಂದು ಗಂಭಿರ ಆರೋಪ ಮಾಡಿದ ಬಾವಾ ನನ್ನ ಟಿಕೆಟ್ ತಪ್ಪಿಸಿದ್ದು ಡಿಕೆ ಶಿವಕುಮಾರ್ ಅವರೇ, ಖಚಿತವಾಗಿ ಹೇಳುತ್ತೇನೆ ಎಂದು ಹರಿಹಾಯ್ದರು.

ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಸೋಲಿಸಲು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ ಎಂದು ಆರೋಪಿಸಿದ ಬಾವಾ ಇನಾಯತ್ ಆಲಿ ಎಲ್ಲಿಂದ ಹಣ ಮಾಡಿದ್ದು ಗೊತ್ತಿದೆ, ಡಿಕೆಶಿ ನೀರಾವರಿ ಸಚಿವನಾದ ಬಳಿಕ ಬಂದಿದ್ದು ಇನಾಯತ್ ಆಲಿ ಯಾರೆಂದೇ ಕ್ಷೇತ್ರದಲ್ಲಿ ಜನರಿಗೆ ಗೊತ್ತಿಲ್ಲ.

ಕಾಂಗ್ರೆಸ್ ಕಾರ್ಯಕರ್ತರಿಗೂ ಗೊತ್ತಿಲ್ಲ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿ ಮಾಜಿ ಶಾಸಕ ಮೊಯ್ದೀನ್ ಬಾವ ಸವಾಲೆಸೆದರು.

ಅಧ್ಯಕ್ಷ ಡಿ ಕೆ ಶಿವಕುಮಾರ್ ನನ್ನನ್ನ ವೈರಿಯಾಗಿ ಕಾಡಿ ಇನಾಯತ್ ಆಲಿಗೆ ಟಿಕೆಟ್ ಕೊಟ್ಟಿದ್ದಾರೆ.

ಇನಾಯತ್ ಆಲಿ ಬಿಜೆಪಿ ವಿರುದ್ದ ಹೋರಾಟ ಮಾಡಿಲ್ಲ, ನನ್ನ ಅಭಿಮಾನಿಗಳಿಗೆ ಹೊರಗಡೆಯಿಂದ ಜನ ತಂದು ದುಡ್ಡಿನ ಆಮಿಷ ಒಡ್ಡಿದರು ಎಂದು ಆರೋಪಿಸಿದರು.

ಇನಾಯತ್ ಆಲಿ ಎರಡು ಕೋಟಿ ರೂಪಾಯಿ ನ್ಯಾಶನಲ್ ಹೆರಾಲ್ಟ್‌ಗೆ ಕೊಟ್ಟಿದ್ದಾರಂತೆ.

ಇದನ್ನು ಡಿಕೆಶಿ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಎದುರಲ್ಲೇ ಹೇಳಿದ್ದಾರೆ ಎಂದ ಮೊಯ್ದೀನ್ ಬಾವ, ಕರಾವಳಿ ಭಾಗದ ಕೆಲವರು ವ್ಯವಸ್ಥೆ ಮಾಡಿ ನನ್ನ ಟಿಕೆಟ್ ತಪ್ಪಿಸಿದ್ದಾರೆ.

ಏಕೈಕ ಶಾಸಕರಾಗಿ ಮೆರೆಯಬೇಕೆಂಬ ವ್ಯಕ್ತಿ ಟಿಕೆಟ್ ತಪ್ಪಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಳುಗಿಸಿದ ಎಂಎಲ್ಸಿ ಟಿಕೆಟ್ ತಪ್ಪಿಸಿದ್ದಾರೆ ಎಂದು ಶಾಸಕ ಯುಟಿ ಖಾದರ್ ಮತ್ತು ಎಂಎಲ್ಸಿ ಮಂಜುನಾಥ ಭಂಡಾರಿ ವಿರುದ್ದ ಆರೋಪ ಮಾಡಿದರು.

ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದ ಮೊಯ್ದೀನ್ ಬಾವ, ಕಾರ್ಯಕರ್ತರ ಒತ್ತಾಯದ ಹಿನ್ನೆಲೆ ನಾನು ಜೆಡಿಎಸ್ ಸೇರುತ್ತಿದ್ದೇನೆ.

ಮಾನ್ಯ ಕುಮಾರಣ್ಣ ಮತ್ತು ದೇವೇಗೌಡರ ಆಶೀರ್ವಾದ ನನಗೆ ಇದೆ. ಇಂದು ಮಂಗಳೂರು ಉತ್ತರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು.

DAKSHINA KANNADA

ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?

Published

on

ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.

ಕಲ್ಲಂಗಡಿ ಚಿಕನ್ ಬಿರಿಯಾನಿ

ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್‌ನ villagefoodchannel_official ಪೇಜ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.

ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ

ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.

ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.

ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.

ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.

Continue Reading

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

LATEST NEWS

Trending