Connect with us

DAKSHINA KANNADA

ಪುತ್ತೂರಿನ ಈ ದೈವಸ್ಥಾನದಲ್ಲಿ ಕಾಸಿಗಿಲ್ಲ ಬೆಲೆ.. ಎಲ್ಲವೂ ಫ್ರೀ ಫ್ರೀ..!

Published

on

ಪುತ್ತೂರು: ತುಳುನಾಡು ಎಂದರೆ ಅದು ಜಾತ್ರೆ ನಡೆಯುವ ತವರು. ಎಲ್ಲಾ ಜಾತ್ರೆಗಳಲ್ಲೂ ಸಾಮಾನ್ಯವಾಗಿ ಸಂತೆ ತಿರುಗುವುದೇ ಒಂದು ತೆರನಾದ ಮನರಂಜನೆ ಆಗಿರುತ್ತದೆ. ಇಷ್ಟವಾದ ತಿಂಡಿ-ತಿನಿಸು, ಬೇಕಾದ ವಸ್ತುಗಳನ್ನು ಜಾತ್ರೆಯಲ್ಲಿ ಖರೀದಿಸೋದು ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ…


ಆದರೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹತ್ತಿರದ ಸಂಬಂಧ ಹೊಂದಿರುವ ಬಲ್ನಾಡಿನ ಉಳ್ಳಾಲ್ತಿ ಕ್ಷೇತ್ರದಲ್ಲಿ ಮಾತ್ರ ಜಾತ್ರೆ ನಡೆಯುವ ಪರಿಯೇ ವಿಭಿನ್ನ. ಎಲ್ಲಾ ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಆಚರಣೆ, ರಥೋತ್ಸವ, ಬಣ್ಣ ಬಣ್ಣದ ಲೈಟಿಂಗ್‌ಗಳ ಜೊತೆಗೆ ವ್ಯಾಪಾರ ವಹಿವಾಟು ಕೂಡ ಬಿರುಸಿನಂತೆ ನಡೆಯುತ್ತದೆ. ಆದರೆ ಇಲ್ಲಿ ಹಾಗಲ್ಲ.

ಜಾತ್ರೆ-ಉತ್ಸವಾದಿಗಳಲ್ಲಿ ಹೆಚ್ಚಾಗಿ ಧಾರ್ಮಿಕ ಆಚರಣೆಯ ಜೊತೆಗೆ ವ್ಯಾಪಾರ ವ್ಯವಹಾರಕ್ಕೆ ಮುಕ್ತ ಅವಕಾಶವಿರುತ್ತದೆ. ಆದರೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವೇ ಇಲ್ಲ. ಇಲ್ಲಿ ವ್ಯಾಪಾರ ಮಾಡುವುದಿದ್ದರೂ ಯಾವುದೇ ಗ್ರಾಹಕನಿಂದ ಹಣ ಸ್ವೀಕರಿಸುವುದಿಲ್ಲ. ಈ ಕ್ಷೇತ್ರಕ್ಕೆ ಭಕ್ತಾಧಿಗಳನ್ನು ಕರೆತರುವ ಆಟೋ, ಕಾರು,ಟ್ಯಾಕ್ಸಿಗಳ ಚಾಲಕರು ಭಕ್ತಾಧಿಗಳಿಂದ ಬಾಡಿಗೆ ಕೂಡ ಪಡೆಯಬಾರದೆಂಬ ಕಟ್ಟಳೆಯಿದೆ.

ಈ ಜಾತ್ರೆ ನೋಡಲು ಬರುವ ಎಲ್ಲಾ ಭಕ್ತಾಧಿಗಳು ಮಲ್ಲಿಗೆಯೊಂದರ ಹೊರತು ಇನ್ನ್ಯಾವುದನ್ನೂ ಹಣ ಕೊಟ್ಟು ಸ್ವೀಕಾರ ಮಾಡುವಂತಿಲ್ಲ.
ಪ್ರತೀ ಎಪ್ರಿಲ್ 28 ರಂದು ಬಲ್ನಾಡು ಉಳ್ಳಾಲ್ತಿ ಕ್ಷೇತ್ರದಲ್ಲಿ ಜಾತ್ರೋತ್ಸವ ನಡೆಯುವುದು ಇಲ್ಲಿನ ವಾಡಿಕೆಯಾಗಿದ್ದು, ಇಲ್ಲಿನ ಜಾತ್ರೋತ್ಸವದ ಸಂದರ್ಭ ಕ್ಷೇತ್ರದ ಆಸುಪಾಸಿನಲ್ಲಿ ವ್ಯಾಪಾರ ಮಳಿಗೆಗಳನ್ನು ಹಾಕಬಾರದೆಂಬ ನಿಯಮವಿದೆ.

ವ್ಯಾಪಾರ ಎನ್ನುವ ಅಕ್ಷರವೂ ಈ ಕ್ಷೇತ್ರದ ಸುತ್ತಮುತ್ತ ಜಾತ್ರೋತ್ಸವದ ಸಂದರ್ಭದಲ್ಲಿ ಕೇಳಿ ಬರುವಂತಿಲ್ಲ. ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗೆ ಎಲ್ಲವನ್ನೂ ಉಚಿತವಾಗಿ ನೀಡಬೇಕಾದ ನಿಯಮ ಹಲವಾರು ವರ್ಷಗಳಿಂದ ಇಲ್ಲಿ ರೂಢಿಯಿಂದ ಬಂದಿದೆ. ಪುತ್ತೂರು ನಗರದಿಂದ ಸುಮಾರು 3 ಕಿಲೋ ಮೀಟರ್ ದೂರದಲ್ಲಿರುವ ಬಲ್ನಾಡು ಕ್ಷೇತ್ರಕ್ಕೆ ಪುತ್ತೂರು ಭಾಗದಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ಭೇಟಿ ನೀಡುತ್ತಾರೆ.

ಎಲ್ಲಕ್ಕಿಂತ ಮಿಗಿಲಾಗಿ ಸ್ತ್ರೀ ಪ್ರಧಾನ ದೈವವಾಗಿರುವ ಉಳ್ಳಾಲ್ತಿ ದೈವದ ನೇಮೋತ್ಸವವನ್ನು ಸ್ತ್ರೀಯರೇ ನೋಡುವಂತಿಲ್ಲ. ಆದರೆ ಕ್ಷೇತ್ರದಲ್ಲಿ ಉಳ್ಳಾಲ್ತಿ ದೈವದ ನೇಮೋತ್ಸವದ ಮೊದಲು ಉಳ್ಳಾಲ್ತಿಯ ಅಣ್ಣನೆಂದು ಗುರುತಿಸಿಕೊಂಡಿರುವ ದಂಡನಾಯಕ ದೈವದ ನೇಮೋತ್ಸವ ನಡೆಯುತ್ತದೆ. ಈ ನೇಮೋತ್ಸವದಲ್ಲಿ ಮಹಿಳೆಯರಿಗೆ ಪಾಲ್ಗೊಳ್ಳಲು ಅವಕಾಶವಿದೆ.

ನೇಮೋತ್ಸವ ಆಗುತ್ತಿರುವ ಸಂದರ್ಭದಲ್ಲಿ ಕ್ಷೇತ್ರದ ಆಸುಪಾಸು ಮಹಿಳೆಯರು ಬರುವಂತಿಲ್ಲ ಎನ್ನುವ ಸಂಪ್ರದಾಯವನ್ನೂ ಇಲ್ಲಿ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬರಲಾಗುತ್ತಿದೆ. ಉಳ್ಳಾಲ್ತಿ ದೈವಕ್ಕೆ ಇಷ್ಟವಾದ ಮಲ್ಲಿಗೆಯನ್ನು ಮಹಿಳೆಯರು ಪುರುಷರ ಮೂಲಕವೇ ದೈವಕ್ಕೆ ಹರಕೆಯಾಗಿ ಒಪ್ಪಿಸುತ್ತಿದ್ದು, ದೈವಕ್ಕೆ ಹರಕೆಯಾಗಿ ಬರುವ ಸೀರೆಯನ್ನು ಮಹಿಳೆಯರಿಗೇ ನೀಡುವ ಉದಾರತೆಯೂ ಈ ಕ್ಷೇತ್ರದಲ್ಲಿದೆ.

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

LATEST NEWS

Trending