Sunday, July 3, 2022

ವಿಶ್ವದ 11 ರಾಷ್ಟ್ರಗಳಿಗೆ ಹರಡಿದ ‘ಮಂಕಿಪಾಕ್ಸ್‌’: ಭಾರತದಲ್ಲಿ ಹೈ ಅಲರ್ಟ್‌

ನವದೆಹಲಿ: ಮಂಕಿ ಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ತನ್ನ ಪಾದ ಚಾಚುತ್ತಿದೆ. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಯಾವುದೇ ಪ್ರಕರಣ ಕಂಡುಬಂದಿಲ್ಲವಾದರೂ ಕೇಂದ್ರ ಸರ್ಕಾರ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ.


ವಿಶ್ವದ ಸುಮಾರು 11 ದೇಶಗಳಲ್ಲಿ ಮಂಕಿಪಾಕ್ಸ್ ಕಾಯಿಲೆಯ ಸುಮಾರು 80 ಪ್ರಕರಣಗಳು ದೃಢಪಟ್ಟಿದ್ದು, 50 ಪ್ರಕರಣಗಳು ತನಿಖೆಯ ಹಂತದಲ್ಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಪ್ಡೇಟ್ ಬಿಡುಗಡೆ ಮಾಡಿದೆ.

ಡಬ್ಲೂಹೆಚ್ಓ ಪ್ರಕಾರ, ಮೇ 5 ರಂದು ಲಂಡನ್ ನಲ್ಲಿ ಮಂಕಿ ಪಾಕ್ಸ್ ಪ್ರಕರಣ ಪತ್ತೆಯಾಗಿತ್ತು. ಲಂಡನ್‌ನಲ್ಲಿನ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು.

ಮೇ 13ರಂದು ವಿಶ್ವ ಆರೋಗ್ಯ ಸಂಸ್ಥೆಗೆ ಈ ಪ್ರಕರಣದ ಕುರಿತು ಮಾಹಿತಿ ನೀಡಲಾಗಿತ್ತು. ಇದೀಗ ಕ್ರಮೇಣ ಈ ಕಾಯಿಲೆ ವಿಶ್ವದ ಸುಮಾರು 11 ದೇಶಗಳಿಗೆ ಪಸರಿಸಿದೆ.


ಯುರೋಪಿಯನ್ ದೇಶಗಳಾಗಿರುವ ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್ಲ್ಯಾಂಡ್, ಪೋರ್ಚುಗಲ್, ಸ್ಪೇನ್, ಸ್ವೀಡನ್ ಹಾಯಗೋ ಬ್ರಿಟನ್ ನಲ್ಲಿ ಮಂಕಿಪಾಕ್ಸ್ ವೈರಸ್ ಹರಡಿದೆ.

ಇದಲ್ಲದೆ ಅಮೆರಿಕಾ, ಆಸ್ಟ್ರೇಲಿಯ ಹಾಗೂ ಕೆನಡಗಳಲ್ಲಿಯೂ ಕೂಡ ಹೆಚ್ಚಾಗುತ್ತಿರುವ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಚಿಂತೆಯನ್ನು ಹೆಚ್ಚಿಸಿವೆ.

ಆದರೆ, ವಿಶ್ವ ಸಂಸ್ಥೆ ಇದುವರೆಗೆ ಈ ಕಾಯಿಲೆಯನ್ನು ಮಹಾಮಾರಿ ಎಂದು ಘೋಷಿಸಿಲ್ಲ. ಆದರೆ, ಕೋರೋನಾ ವೈರಸ್ ಗಿಂತ ಇದು ತೀರಾ ಭಿನ್ನವಾಗಿದೆ ಹಾಗೂ ಪ್ರಸ್ತುತ ಇದು ವ್ಯಾಪಕವಾಗಿ ಹರಡುವ ಸಾಧ್ಯತೆ ತುಂಬಾ ಕಡಿಮೆ ಎನ್ನಲಾಗಿದೆ. ಇನ್ನೊಂದೆಡೆ, ವಿಶ್ವ ಆರೋಗ್ಯ ಸಂಸ್ಥೆ ಈ ಕಾಯಿಲೆಗೆ ಸಂಬಂಧಿಸಿದಂತೆ ತುರ್ತುಸಭೆ ನಡೆಸಿದೆ.

ಈ ಕಾಯಿಲೆ ಸಾಮಾನ್ಯವಾಗಿ ಇಲಿ ಹಾಗೂ ಅಳಿಲುಗಳಂತಹ ಪ್ರಾಣಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ.

ಆಫ್ರಿಕಾದಂತಹ ಮಳೆ ಹೆಚ್ಚಾಗುವ ಪ್ರದೇಶ ಮತ್ತು ದಟ್ಟಅರಣ್ಯ ಪ್ರದೇಶಗಳನ್ನು ಹೊಂದಿರುವ ದೇಶಗಳಲ್ಲಿ ಇದರ ಅತಿ ಹೆಚ್ಚು ಪ್ರಕರಣಗಳು ಕಂಡುಬರುತ್ತವೆ.

ಈ ಕಾಯಿಲೆಯ ಮೊದಲ ಪ್ರಕರಣ 1970ರಲ್ಲಿ ಗುರುತಿಸಲಾಗಿತ್ತು. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಅಥವಾ ವೈರಸ್ ನ ಯಾವುದೇ ಪ್ರಕರಣ ವರದಿಯಾಗಿಲ್ಲ, ಆದರೆ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ.

ಆಫ್ರಿಕನ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ವಿಮಾನ ನಿಲ್ದಾಣದಲ್ಲಿ ನಿಗಾ ಇರಿಸಲಾಗುತ್ತಿದೆ, ಅಗತ್ಯ ಬಿದ್ದರೆ, ಅವರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ತನಿಖೆಗಾಗಿ ಕಳುಹಿಸಲಾಗುವುದು ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ ಮತ್ತಿಬ್ಬರ ರಕ್ಷಣೆ

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ.ನಾಪತ್ತೆಯಾದ ಯುವಕನನ್ನು ರಾಜು ಸಾಹ್...

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...