Saturday, August 20, 2022

ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ : 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

ಬೆಂಗಳೂರು: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆರಂಭದಲ್ಲೇ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ , ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಕೇರಳಕ್ಕೆ ನೈರುತ್ಯ ಮಾರುತಗಳು ಈಗಾಗಲೇ ಪ್ರವೇಶಿಸಿದೆ. ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ.ಆರಂಭದಲ್ಲೇ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಿದೆ.

ಜೂನ್ 6ರ ತನಕವೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

 

LEAVE A REPLY

Please enter your comment!
Please enter your name here

Hot Topics