Wednesday, July 28, 2021

ವಿದ್ಯಾಗಮ ಯೋಜನೆಗೆ ತೀವ್ರ ಹಿನ್ನಡೆ : ಪಾಠ ಮಾಡುತ್ತಿದ್ದ ಮೂಡಬಿದಿರೆ ಶಿಕ್ಷಕಿ ಕೊರೊನಾಗೆ ಬಲಿ..!

ವಿದ್ಯಾಗಮ ಯೋಜನೆಗೆ ತೀವ್ರ ಹಿನ್ನಡೆ : ಪಾಠ ಮಾಡುತ್ತಿದ್ದ ಮೂಡಬಿದಿರೆ ಶಿಕ್ಷಕಿ ಕೊರೊನಾಗೆ ಬಲಿ..!

ಮಂಗಳೂರು :ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಮೂಡಬಿದ್ರೆಯ ಶಿಕ್ಷಕಿ ಪದ್ಮಾಕ್ಷಿ  ಮಹಾಮಾರಿ ಕೊರೊನಾಕ್ಕೆ ಬಲಿಯಾಗಿದ್ದಾರೆ.

ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದಿರೆ ಶಿಕ್ಷಕಿ ಪದ್ಮಾಕ್ಷಿ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿಗೆ ಸೆ. 29ರಂದು ಕೋವಿಡ್-19 ದೃಢಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶಿಕ್ಷಕಿಗೆ ಎರಡನೇ ಹಂತದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿತ್ತು. ತಾಯಿಯ ಚಿಕಿತ್ಸೆಗೆ ಸಹಕರಿಸುವಂತೆ ಕೋರಿ ಪುತ್ರಿ ಐಶ್ವರ್ಯಾ ಫೇಸ್ ಬುಕ್ ನಲ್ಲಿ ಮಾಡಿಕೊಂಡ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕಿ ಇಂದು ಸಾವನ್ನಪ್ಪಿದ್ದಾರೆ.

ಈ ಮಧ್ಯೆ ನೆಗೆಟಿವ್ ಎಂದು ಕಂಡುಬಂದಿದ್ದರೂ ಪದ್ಮಾಕ್ಷಿ ಅವರ ಆರೋಗ್ಯಸ್ಥಿತಿ ನಿನ್ನೆ ಗುರುವಾರ ಅಪರಾಹ್ನ ವಿಷಮಿಸತೊಡಗಿದ ಕಾರಣ ಪತಿ ಶಶಿಕಾಂತ್ , ಪುತ್ರಿ ಐಶ್ವರ್ಯ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಎಕ್ಮೋ ಚಿಕಿತ್ಸೆಗಾಗಿ ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಒಯ್ಯಲು ಸಿದ್ಧತೆ ನಡೆಸಿದ್ದರು.

ಮಾಜಿ ಸಚಿವ ಅಭಯಚಂದ್ರ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜತೆ ಈ ಬಗ್ಗೆ ಮಾತನಾಡಿ, ವಿನಂತಿಸಿದ್ದರು.

ಸಚಿವ ಕೋಟಾ ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಅಧಿಕಾರಿಗಳು  ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದಂತೆ ಪದ್ಮಾಕ್ಷಿ ಕೊನೆಯುಸಿರೆಳೆದಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಅನೇಕರು ತೀವ್ರ ವಿರೋಧ ಮತ್ತು ಕೆಲವರ ಪರ ಗಳ ನಡುವೆಯೇ    ವಿದ್ಯಾಗಮ ಯೋಜನೆಗೆ ಶಿಕ್ಷಕಿ ಮದ್ಮಾಕ್ಷಿ ಮೊದಲ ಬಲಿಯಾಗಿದ್ದಾರೆ.

ಪದ್ಮಾಕ್ಷಿ ಮೂಡಬಿದರೆಯ ಮಕ್ಕಿ ಜವಹಾರ್ ನೆಹರೂ ಹೈಸ್ಕೂಲ್​ನ ಶಿಕ್ಷಕಿಯಾಗಿದ್ದರು. ವಿದ್ಯಾಗಮ ಬಳಿಕ ಮಹಾಮಾರಿ ಕರೊನಾ ಸೋಂಕು ಪದ್ಮಾಕ್ಷಿಗೆ ತಗುಲಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಾಕ್ಷಿಯನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ದುರಾದೃಷ್ಟಕರ ಪದ್ಮಾಕ್ಷಿ ಪತಿ, ಮೂಡಬಿದರೆಯ ಡಿ.ಜೆ. ಹೈಯರ್ ಪ್ರೈಮರಿ ‌ಶಾಲೆ ಮುಖ್ಯಶಿಕ್ಷಕ ಶಶಿಕಾಂತ್ ಅವರಿಗೂ ಕರೊನಾ ದೃಢಪಟ್ಟಿದೆ.

ಈ ಹಿಂದೆಯೇ ಫೇಸ್​ಬುಕ್​ನಲ್ಲಿ ಅಳಲು ತೋಡಿಕೊಂಡಿದ್ದ ಶಿಕ್ಷಕ ದಂಪತಿ ಮಗಳು ಐಶ್ವರ್ಯಾ ಜೈನ್​, ಸದ್ಯ ಅಮ್ಮನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಆರ್ಥಿಕ ನೆರವು ನೀಡಿ, ಆ ಮೂಲಕ ನನ್ನ ತಾಯಿಯನ್ನು ಉಳಿಸಿಕೊಡಿ ಎಂದು ಫೇಸ್​ಬುಕ್​ನಲ್ಲಿ ಫೋಟೋ ಸಹಿತ ಮನವಿ ಮಾಡಿದ್ದರು. ಅಷ್ಟೇ ಅಲ್ಲ, ವಿದ್ಯಾಗಮದ ಪರಿಣಾಮ ಅಮ್ಮನಿಗೆ ಈ ಸ್ಥಿತಿ ಬಂದಿದೆ ಎಂದೂ ಅಸಮಾಧಾನ ಹೊರಹಾಕಿದ್ದರು. ವಿದ್ಯಾಗಮಕ್ಕೂ ಮೊದಲು ಅಮ್ಮ ಆರಾಮಾಗಿದ್ದರು. ವಿದ್ಯಾಗಮದ ನಂತರವೇ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ಎಚ್ಚೆತ್ತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕೂಡಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಗುಣಮಟ್ಟದ ಚಿಕಿತ್ಸೆಗೆ ವ್ಯವಸ್ಥೆ ಮತ್ತು ಆ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದರು. ಸರ್ಕಾರದ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಐಶ್ವರ್ಯಾಳನ್ನು ಸಂಪರ್ಕಿಸಿ, ತಾಯಿಯ ಚಿಕಿತ್ಸೆ ಕುರಿತು ಸರ್ಕಾರ ಪೂರ್ಣ ಕಾಳಜಿ ವಹಿಸಿದೆ. ಯಾವುದೇ ಆತಂಕ ಬೇಡ ಎಂದು ಸಾಂತ್ವಾನ ಹೇಳಿದ್ದರು.

ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸದರಿ ಶಿಕ್ಷಕಿಯ ಚಿಕಿತ್ಸೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದರು.

ಆದರೆ, ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದರಿಂದ ಏನೇ ಪ್ರಯತ್ನ ಮಾಡಿದರೂ ಶಿಕ್ಷಕಿಯನ್ನು ಉಳಿಸಿಕೊಳ್ಳಲು ಕೊನೆಗೂ ಸಾಧ್ಯವಾಗಲಿಲ್ಲ. ಇತ್ತ ಪದ್ಮಕ್ಷಿ ಪತಿಗೂ ಕರೊನಾ ಇರುವುದರಿಂದ ಮಗಳು ಐಶ್ವರ್ಯಾ ಮನದಲ್ಲಿ ಕಾರ್ಮೋಡ ಕವಿದಿದೆ. ಈಗಾಗಲೇ ಅಮ್ಮನನ್ನು ಕಳೆದುಕೊಂಡಿರುವ ಐಶ್ವರ್ಯಾಗೆ ಅಪ್ಪನೇ ಪ್ರಮುಖ ಆಧಾರ ಸ್ತಂಭವಾಗಿದ್ದಾರೆ. ಇದೀಗ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...