Saturday, October 1, 2022

ಮೂಡುಬಿದಿರೆ: ರಕ್ತಚಂದನ ದಿಮ್ಮಿ ಕದ್ದ ಪ್ರಕರಣ-ಆರೋಪಿಗಳಿಗೆ ಜಾಮೀನು ಮಂಜೂರು

ಮೂಡುಬಿದಿರೆ: ಮೂರು ತಿಂಗಳ ಹಿಂದೆ ಆಂಧ್ರದಿಂದ ಭಾರಿ ಮೌಲ್ಯದ ರಕ್ತಚಂದನ ದಿಮ್ಮಿಗಳನ್ನು ಕಳವು ಮಾಡಿ ಲಾರಿಯಲ್ಲಿ ಮಂಗಳೂರು ಬಂದರಿಗೆ ಸಾಗಣೆ ಮಾಡುವಾಗ ಮೂಲ್ಕಿ ಕೆಂಚನಕೆರೆ ಬಳಿ ಮಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕೈಗೆ ಸಿಕ್ಕಿ, ಜೈಲು ಸೇರಿದ್ದ ಆರು ಆರೋಪಿಗಳಿಗೆ ಮೂಡುಬಿದಿರೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ರಕ್ತ ಚಂದನ ಹಾಗೂ ಲಾರಿ 

ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾರ್ಗದರ್ಶನದಲ್ಲಿ ಅಧಿಕಾರಿಗಳ ತಂಡ ಕಳೆದ ಜೂನ್‌ನಲ್ಲಿ ಕಾರ್ಯಾಚರಣೆ ನಡೆಸಿ ಎರಡು ವಾಹನಗಳನ್ನು ವಶಪಡಿಸಿಕೊಂಡು,

ಆಂಧ್ರಪ್ರದೇಶದ ನೆಲ್ಲೂರಿನ ರಾಜೇಶ್ ರೆಡ್ಡಿ, ಕೇರಳ ಆನೆಕ್ಕಲ್‌ನ ಸುಭಾಸ್, ಶಾಮೀರ್ ಮತ್ತು ಮಹಮ್ಮದ್ ಕುಂಞಿ, ತಮಿಳುನಾಡು ತಿರುವೆಳ್ಳೂರಿನ ಪಾಲರಾಜ್, ದಿನೇಶ್ ಕುಮಾರ್ ಹಾಗೂ ಕೊಯಮತ್ತೂರಿನ ಅನಿಲ್ ಕುಮಾರ್ ಅವರನ್ನು ಬಂಧಿಸಿತ್ತು.

ಸುಮಾರು 8 ಕೋಟಿ ರೂ ಮೌಲ್ಯದ ರಕ್ತಚಂದನ ದಿಮ್ಮಿ ಹಾಗೂ ಎರಡು ವಾಹನಗಳನ್ನು ವಶಪಡಿಸಿಕೊಂಡಿತ್ತು.

ಈ ಪ್ರಕರಣ ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ವಿಸ್ತರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಪೂರಕ ದಾಖಲೆಗಳನ್ನು ಸಂಗ್ರಹಿಸಿ ಮೂರು ತಿಂಗಳೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲು ಸಾಧ್ಯವಾಗದ ಕಾರಣ ಆರೋಪಿಗಳಿಗೆ ಜಾಮೀನು ದೊರೆತಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಪೋಸ್ಟ್‌ಮ್ಯಾನ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್...

ಮಂಗಳೂರು: ನೂತನ ಮೇಯರ್ ಪ್ರಥಮ ಸಭೆ-ತ್ಯಾಜ್ಯ ವಿಲೇವಾರಿ ಗುತ್ತಿಗೆ ಮತ್ತು LED ಲೈಟ್‌ ಬಗ್ಗೆ ಗಂಭೀರ ಚರ್ಚೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಸಿಕ ಸಭೆ ಇಂದು ಲಾಲ್‌ಬಾಗ್‌ನಲ್ಲಿರುವ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಮೇಯರ್‌ ಜಯಾನಂದ ಅಂಚನ್‌ ಆಧ್ಯಕ್ಷತೆಯ ಈ ಪ್ರಥಮ ಸಭೆಯಲ್ಲಿ ನಗರದ ತ್ಯಾಜ್ಯ ವಿಲೆವಾರಿ ಗುತ್ತಿಗೆ ಮತ್ತು...

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ರೂ ಮೌಲ್ಯದ ಚಿನ್ನ ಪತ್ತೆ

ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮಸ್ಕತ್‌ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.ಭಟ್ಕಳ ಮೂಲದ...