Connect with us

DAKSHINA KANNADA

ಮೂಡುಬಿದಿರೆ: ಪುರುಷ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸಮಾಪನ-ಮಂಗಳೂರು ವಿ.ವಿಗೆ ಸಮಗ್ರ ಪ್ರಶಸ್ತಿ

Published

on

ಮೂಡುಬಿದಿರೆ: ಮಂಗಳೂರು ವಿವಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ

ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 81ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯು 6 ಚಿನ್ನ, 6ಬೆಳ್ಳಿ ಹಾಗೂ 4 ಕಂಚಿನ ಪದಕದೊಂದಿಗೆ 105 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

42 ಅಂಕಗಳನ್ನು ಗಳಿಸಿರುವ ಪಂಜಾಬ್ ಪಾಗ್ವಾರ್‌ನ ಲವ್ಲಿ ಪ್ರೊಫೆಷನಲ್ ವಿವಿಯು ರನ್ನರ್ ಅಫ್ ಪ್ರಶಸ್ತಿ ಹಾಗೂ ರೋಟ್ಹಾಕ್ ಮಹರ್ಷಿ ದಯಾನಂದ ವಿವಿಯು 37 ಅಂಕಗಳನ್ನು ದಾಖಲಿಸಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಮಂಗಳೂರು ವಿವಿಯು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಕೂಟದಲ್ಲಿ ಪಂಜಾಬ್‌ನ ಪಟಿಯಾಲ ವಿವಿಯ ಅಕ್ಷ್ ದೀಪ್ ಸಿಂಗ್ ಉತ್ತಮ ಕ್ರೀಡಾಪಟುವಾಗಿ ಮೂಡಿ ಬಂದಿದ್ದಾರೆ.

ಶುಕ್ರವಾರ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಅಧಾನಿ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ಜಂಟಿಯಾಗಿ ಪ್ರಶಸ್ತಿ ಪ್ರಧಾನ ಮಾಡಿದರು.

ನಂತರ ಮಾತನಾಡಿದ ಅವರು “ಮುಂದಿನ ಒಲಿಂಪಿಕ್ ಕ್ರೀಡೆಗೆ ಸಹಕಾರಿಯಾಗುವಂತೆ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯು ವ್ಯವಸ್ಥಿತ ರೀತಿಯಲ್ಲಿ ಸಜ್ಜುಗೊಳಿಸುತ್ತಿದೆ.

ಈ ಕ್ರೀಡಾಕೂಟವು ಹಿಂದಿನ ಹಲವಾರು ರಾಷ್ಟ್ರೀಯ ದಾಖಲೆಗಳನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿರುವುದು ಗಮನಾರ್ಹ.

ಕ್ರೀಡೆಯಲ್ಲಿ ಕ್ರೀಡಾರ್ಥಿಗಳು ತಾವು ಎಣಿಸಿದಂತೆ ನಡೆಯದೆ ಇದ್ದರೂ, ಫಲಿತಾಂಶದಲ್ಲಿ ವ್ಯತ್ಯಾಸ ಕಾಣಬಹುದು.

ಸತತ 5 ವರ್ಷಗಳಿಂದ ಕ್ರೀಡೆಯನ್ನು ಮಂಗಳೂರು ವಿವಿ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆಯು ಜಂಟಿಯಾಗಿ ಆಯೋಜಿಸುತ್ತಾ ಬರುವ ಮೂಲಕ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ” ಎಂದರು.

ಮಂಗಳೂರು ವಿವಿಯ ರಿಜಿಸ್ಟರ್ ಕಿಶೋರ್ ಕುಮಾರ್ ಸಿ.ಕೆ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಮಂಗಳೂರು ಎ.ಪಿ.ಎಂ.ಸಿ ಅಧ್ಯಕ್ಷ ಕೃಷ್ಣರಾಜ್ ಹೆಗ್ಡೆ, ದ.ಕ ವಾರ್ತಾಧಿಕಾರಿ ರವಿರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜೈನ್ ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯು.ವಿ. ಶಂಕರ್, ಅಮರಾವತಿ ವಿವಿ ನಿರ್ದೇಶಕ ಡಾ. ಅವಿನಾಶ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಉಪಸ್ಥಿತರಿದ್ದರು.

ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಎಸ್. ಡಿ’ಸೋಜ ವಂದಿಸಿದರು.

ತಮಿಳುನಾಡಿನ ಎ.ಎಲ್. ಮುತ್ತು ಮತ್ತು ದೆಹಲಿಯ ರೂಬಿ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಕೂಟದಲ್ಲಿ 8 ನೂತನ ದಾಖಲೆಗಳು
ನಾಲ್ಕನೇ ದಿನವಾಗಿರುವ ಶುಕ್ರವಾರದಂದು 400 ಮೀಟರ್ ರಿಲೆಯಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿರುವ ಆಳ್ವಾಸ್‌ನ ಕ್ರೀಡಾಪಟುಗಳಾದ ಶ್ರಿಜನ್ ಥೋಮಸ್, ತೀರ್ಥಶ್, ಅಭಿನ್ ದೇವಾಡಿಗ ಮತ್ತು ವಿಘ್ನೇಶ್ 40.74 ಸೆಕುಂಡುಗಳಲ್ಲಿ ಕ್ರಮಿಸಿ ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ.

ಉಳಿದಂತೆ ಮೂರು ದಿನಗಳಲ್ಲಿ ಮಂಗಳೂರು ವಿವಿ ಆದೇಶ್ (1೦೦೦೦ ಮೀ.ಓಟ), ಪಂಜಾಬ್ ಪಟಿಯಾಲ ವಿವಿಯ ಅಕ್ಷ್ ದೀಪ್ ಸಿಂಗ್ (2೦ ಕಿಮೀ ನಡಿಗೆ), ಗುರು ನಾನಕ್ ದೇವ್ ವಿವಿಯ ಹರೇಂದ್ರ ಕುಮಾರ್( 1,500ಮೀ ಓಟ), ಕುರುಕ್ಷೇತ್ರ ವಿವಿಯ ಫ್ರಿನ್ಸ್ ( 5೦೦೦ಮೀ ಓಟ),

ಮಹಾತ್ಮಗಾಂಧಿ ವಿವಿ ಕೊಟ್ಟಾಯಂನ ಸಿದ್ಧಾರ್ಥ್ ಎ.ಕೆ.( ಫೋಲ್ ವಾಲ್ಟ್ ), ಚೌದರಿ ದೇವಿಲಾಲ್ ವಿವಿ ಸಿರ್ಸ ಹರಿಯಾಣದ ವಿಕಾಸ್ (ಚಕ್ರ ಎಸೆತ), ಮಹಾರ್ಷಿ ದಯಾನಂದ ವಿವಿಯ ಲೊಕೇಶ್ ಚೌದಾರ್ (ಸ್ಟೀಪಲ್ ಚೇಸ್ ) ಹೀಗೆ ಒಟ್ಟು 8 ಕೂಟ ದಾಖಲೆಗಳು ನಿರ್ಮಾಣವಾಗಿದೆ.

ಸಮಗ್ರ ಚಾಂಪಿಯನ್ ಶಿಫ್‌ಗೆ ಪ್ರಶಸ್ತಿ ಸಹಿತ 50,000, ರನ್ನರ್ ಅಫ್‌ಗೆ 30,000, ತೃತೀಯ ಪ್ರಶಸ್ತಿಗೆ 20,000 ಕೂಟ ದಾಖಲೆ ಮಾಡಿರುವ ಕ್ರೀಡಾಪಟುಗಳಿಗೆ ತಲಾ 25,000ದಂತೆ 2ಲಕ್ಷ ರೂ.ವನ್ನು ಹಾಗೂ ಎಲ್ಲಾ ವಿಜೇತ ಕ್ರೀಡಾಪಟುಗಳಿಗೆ

ಪ್ರಥಮ-25,000, ದ್ವಿತೀಯ-15000 ಹಾಗೂ ತೃತೀಯ ಸ್ಥಾನಕ್ಕೆ 10,000 ನಗದು ಪುರಸ್ಕಾರವನ್ನು ನೀಡುವ ಮೂಲಕ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಕ್ರೀಡಾಪಟುಗಳಿಗೆ ಆರ್ಥಿಕವಾಗಿ ಪ್ರೋತ್ಸಾಹ ನೀಡಿರುವುದು ಗಮನಾರ್ಹ.

ಹಾಗೂ  ಆಳ್ವಾಸ್ ಶಿಕ್ಷಣ ಸಂಸ್ಥೆಯು 5ನೇ ಬಾರಿಗೆ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್ ಶಿಫ್ ಆಯೋಜನೆ ಮಾಡಿರುವುದು ಶ್ಲಾಘನೀಯ.

ಸಂಜೆ ಕ್ರೀಡಾ ಸ್ಪರ್ಧೆಗಳು ಮುಗಿದ ಬಳಿಕ ಜಾಗೋ ಭಾರತ್ ಕಲಾವಿದರಿಂದ ರಾಷ್ಟ್ರ ಭಕ್ತಿಗೀತೆಗಳ ಗಾಯನ ಮತ್ತು ಆಳ್ವಾಸ್ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರಗು ನೀಡಿದವು.

400 ವಿವಿಯಿಂದ 4000ಕ್ಕೂ ಅಧಿಕ ಕ್ರೀಡಾಪಟುಗಳು, 1,000ಕ್ಕೂ ಅಧಿಕ ಕ್ರೀಡಾಧಿಕಾರಿಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

LATEST NEWS

Trending