Connect with us

    DAKSHINA KANNADA

    ಮೂಡುಬಿದಿರೆ ತಾಲೂಕು ಆಡಳಿತ ಸೌಧ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

    Published

    on

    ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮೂಲ್ಕಿ-ಮೂಡುಬಿದರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಇಂದು ಸಂಜೆ ಆಗಮಿಸಿದ್ದಾರೆ.


    ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಯ ಮಹಾವೀರ ಮೈದಾನಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಹೆಲಿಪ್ಯಾಡ್‌ನಲ್ಲಿ ಶಾಸಕ ಉಮನಾಥ್‌ ಕೋಟ್ಯಾನ್‌ ಬರಮಾಡಿಕೊಂಡರು.

    ಈ ವೇಳೆ ಸಂಸದ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮಾಜಿ ಸಚಿವ ಅಭಯಚಂದ್ರ ಜೈನ್ ಮಂಗಳೂರು ವಿವಿ ಉಪಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್‌ ಆಳ್ವ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಮತ್ತಿತರರು ಇದ್ದರು.

    ಆಳ್ವಾಸ್‌ ಎನ್‌ಸಿಸಿ ಆರ್ಮಿ ಕೆಡೆಟ್‌ ವಿಂಗ್‌ನಿಂದ ಗೌರವಿಸಲಾಯಿತು.

    ತದನಂತರ 10 ಕೋಟಿ ವೆಚ್ಚದ ಆಡಳಿತ ಸೌಧವನ್ನು ಸಿಎಂ ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಮೂಲ್ಕಿ ವಿಧಾನಸಭಾ ಕ್ಷೇತ್ರದ 145.48 ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಲಜೀವನ್‌ ಮಿಷನ್‌ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮನಾಥ್‌ ಕೋಟ್ಯಾನ್‌ ವಹಿಸಿದ್ದರು.

    ಸಚಿವ ಡಾ.ಕೆ ಸುಧಾಕರ್‌, ವಿ. ಸೋಮಣ್ಣ, ಬಿ.ಸಿ ನಾಗೇಶ್‌, ಕೋಟಾ ಶ್ರೀನಿವಾಸ್‌ ಪೂಜಾರಿ, ಎಸ್‌ ಅಂಗಾರ, ಶಾಸಕ ಹರೀಶ್‌ ಪೂಂಜಾ, ವೇದವ್ಯಾಸ್‌ ಕಾಮತ್‌, ರಘುಪತಿ ಭಟ್‌, ರಾಜೇಶ್‌ ನಾಯ್ಕ್‌, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರಿದ್ದರು.

    ಜೈನ ವಾಸ್ತು ಶೈಲಿಯ ಕಟ್ಟಡ

    10 ಸಾವಿರ ಚದರ ಅಡಿ ಹೊಂದಿರುವ ಸುಸಜ್ಜಿತ ಆಡಳಿತ ಸೌಧ ಕೇವಲ 1 ವರ್ಷ 3 ತಿಂಗಳಲ್ಲಿ ನಿರ್ಮಾಣವಾದ ಕಟ್ಟಡ. ಇದು ಕರ್ನಾಟಕ ಇತಿಹಾಸದಲ್ಲಿ ಅತ್ಯಂತ ಶೀಘ್ರವಾಗಿ ಕಾಮಗಾರಿ ಪೂರೈಸಿದ ಕಟ್ಟಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

    10 ಕೋಟಿ ವೆಚ್ಚದ ಜೈನ ವಾಸ್ತು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಇದು ನಿರ್ಮಾಣವಾಗಿದ್ದು, ಇದರಲ್ಲಿ ತಹಶೀಲ್ದಾರ್‌ ಕಚೇರಿ, ಶಾಸಕರ ಕಚೇರಿ, ರಿಜಿಸ್ಟ್ರಾರ್‌ ಆಫೀಸ್‌, ಸರ್ವೆ ಇಲಾಖೆ ಕಾರ್ಯ ನಿರ್ವಹಿಸಲಿದೆ.

    ಈ ಮೂಲಕ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ಉದ್ದೇಶವಾಗಿದೆ.

    DAKSHINA KANNADA

    ಕಂಬಳ ಕ್ಷೇತ್ರದಲ್ಲಿ ಹಲವು ಮೆಡಲ್‌ಗಳನ್ನು ಗಳಿಸಿದ “ಲಕ್ಕಿ” ಇನ್ನಿಲ್ಲ..

    Published

    on

    ಕಿನ್ನಿಗೋಳಿ: ಕಂಬಳ ಕ್ಷೇತ್ರದ ಸಾಧಕ, ಹಲವಾರು ಮೆಡಲ್ ಗಳನ್ನು ತನ್ನದಾಗಿಸಿದ ಕೋಣ  ಲಕ್ಕಿ ಸಾವನ್ನಪ್ಪಿದೆ. ಐಕಳ ದಿವಾಕರ ಚೌಟ ಮಾಲಕತ್ವದ ಕೋಣ ಲಕ್ಕಿ ಕಳೆದ ಏಳೆಂಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ(ಜು.16) ಕಾರ್ಕಳದಲ್ಲಿ ಲಕ್ಕಿಗೆ ಅಪರೇಷನ್ ಕೂಡ ನಡೆದಿತ್ತು.

    ಮಳೆ ಸೃಷ್ಟಿಸಿದ ಅವಾಂತರ.. ಲಾರಿ ಏರಿ ಜಿಲ್ಲಾಧಿಕಾರಿ ಪ್ರಯಾಣ..!!

    ಖ್ಯಾತ ವೈದ್ಯ ವಾಸುದೇವ ಪೈ ಅಪರೇಷನ್ ನಡೆಸಿದ್ದು, ಮತ್ತೆ ಇಂದು ಚಿಕಿತ್ಸೆಗಾಗಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ವೈದ್ಯರನ್ನು ನೋಡಿದ ಲಕ್ಕಿ ಹೆದರಿ ಅತ್ತಿಂದಿತ್ತ ಓಡತೊಡಗಿತ್ತು. ಲಕ್ಕಿಯ ಮಾಲಕರು ಮತ್ತು ಒಡನಾಡಿಗಳಿಗೂ ನಿಯಂತ್ರಣಕ್ಕೆ ಸಿಗದಾಯಿತು. ಕೊನೆಗೆ ಮರಕ್ಕೆ ಕಟ್ಟಿ ಹಾಕಿದ್ದು ಸ್ವಲ್ಪ ಹೊತ್ತಿನಲ್ಲೇ ಅಸು ನೀಗಿದೆ. ಲಕ್ಕಿ ಒಬ್ಬಂಟಿ ಕೋಣವಾಗಿದ್ದು ಕಂಬಳ ಸಂದರ್ಭ ಅದಕ್ಕೆ ಸರಿಯಾದ ಜೊತೆ ಹುಡುಕಿ ಕಂಬಳದಲ್ಲಿ ಓಡಿಸಲಾಗುತ್ತಿತ್ತು. ಈ ಬಾರಿ 5 ಮತ್ತು ಕಳೆದ ವರ್ಷ 5 ಮೆಡಲ್ ಗಳನ್ನು ತನ್ನದಾಗಿಸಿದ್ದ ಲಕ್ಕಿ ಹಲವಾರು ಮೆಡಲ್ ಗಳನ್ನು ಪಡೆದುಕೊಂಡಿತ್ತು.

    Continue Reading

    DAKSHINA KANNADA

    ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ: ವಿ.ಸೋಮಣ್ಣ

    Published

    on

    ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ. ಹಳೆ ಸಿದ್ದರಾಮಯ್ಯನವರು ಇಲ್ಲ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

    ಬುಧವಾರ ಮಂಗಳೂರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣ ವಿಚಾರದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಸೋಮಣ್ಣ ಅವರು ಈ ಉತ್ತರ ನೀಡಿದರು.

    ನಾನು‌ ಅವರ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಆ ಸಿದ್ದರಾಮಯ್ಯನವರು ಇವತ್ತು ಇಲ್ಲ. ಇವತ್ತು ಇರುವ ಸಿದ್ದರಾಮಯ್ಯನವರ ಕುರಿತು ನನಗೂ ಒಂದು ರೀತಿ ಅನುಮಾನ ಆಗಿದೆ ಎಂದರು. ‘ವಾಸ್ತವವನ್ನು ಯಾರೂ ಮುಚ್ಚಿಡಲು ಆಗಲ್ಲ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದರೆ ಯಾರಿಗೂ ಗೊತ್ತಾಗಲ್ಲ ಎಂದು ಯಾರೂ ತಿಳಿದುಕೊಳ್ಳಬಾರದು’

    ಸಿದ್ದರಾಮಯ್ಯನವರು ಅದನ್ನು ತಿದ್ದಿಕೊಂಡು ಜನರಿಗೆ ವಾಸ್ತವಾಂಶ ಏನೆಂದು ತಿಳಿಸಲಿ. ಆಗ ಅವರು ಹಳೆ ಸಿದ್ದರಾಮಯ್ಯ ಆಗುತ್ತಾರೆ ಎಂದು ಸಚಿವ ಸೋಮಣ್ಣ ಅವರು ಹೇಳಿದರು.

    Continue Reading

    DAKSHINA KANNADA

    ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಭೇಟಿ

    Published

    on

    ಮಂಗಳೂರು: ರೈಲ್ವೆ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ರಾತ್ರಿ ಆಗಮಿಸಿದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸಂಸದ ಬ್ರಿಜೇಶ್ ಚೌಟ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

    ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

    ಸಚಿವ ಸೋಮಣ್ಣ ಅವರು ಜುಲೈ 17 ರಂದು ಬೆಳಗ್ಗೆ ಒಂಭತ್ತು ಗಂಟೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣ, ಬಳಿಕ ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಭೇಟಿ ನೀಡಿದರು. ಬಳಿಕ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಸಂಬಂಧಿಸಿ ಸಭೆಯ ನೇತೃತ್ವ ವಹಿಸಲಿದ್ದಾರೆ.

    Continue Reading

    LATEST NEWS

    Trending