ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ಯುವಕನಿಂದ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ಯುವಕನಿಂದ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ನಂತೂರು ಸರ್ಕಲ್ ಬಳಿ ನಿನ್ನೆ ಈ ಘಟನೆ ನಡೆದಿದೆ.
ಕಾರ್ಕಳದಿಂದ ಖಾಸಾಗಿ ಬಸ್ ನಲ್ಲಿ ಬರುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಹಿಂದೂ ಯುವತಿಯನ್ನು ನಗರದ ನಂತೂರಿನಲ್ಲಿ ಬಸ್ಸನ್ನು ತಡೆದು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದು ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.