Home ದೇಶ-ವಿದೇಶ ಭಾರತದಲ್ಲಿ ಕೊರೊನಾ ಅಟ್ಟಹಾಸ: 1,04,000 ಜನರಲ್ಲಿ ಕೊರೊನಾ ಸೋಂಕು.!!

ಭಾರತದಲ್ಲಿ ಕೊರೊನಾ ಅಟ್ಟಹಾಸ: 1,04,000 ಜನರಲ್ಲಿ ಕೊರೊನಾ ಸೋಂಕು.!!

ಭಾರತದಲ್ಲಿ ಕೊರೊನಾ ಅಟ್ಟಹಾಸ: 1,04,000 ಜನರಲ್ಲಿ ಕೊರೊನಾ ಸೋಂಕು.!!

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಭಾರತದಲ್ಲಿ ಇದುವರೆಗೆ 1,04,000 ಜನ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

3,216 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 41 ಸಾವಿರ ಜನ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲೇ ನಂ ಒನ್‌ ಸ್ಥಾನದಲ್ಲಿರುವ ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದೆ.

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 2,100 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ರಾಜ್ಯದ ಕೊರೊನಾ ಸೋಂಕಿತರ ಸಂಖ್ಯೆ 37,158ಕ್ಕೆ ಏರಿಕೆಯಾಗಿದೆ. 1249 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಆದರೆ ಕೊರೊನಾ ಸಾವಿನ ಸಂಖ್ಯೆ ಕೂಡ ಶೇ.3.2ಕ್ಕೆ ಇಳಿಕೆಯಾಗಿದೆ. ತಮಿಳುನಾಡು 2ನೇ ಸ್ಥಾನದಲ್ಲಿದ್ದು, ನಿನ್ನೆ ಒಂದೇ ದಿನ 700 ಪ್ರಕರಣಗಳು ಹೊಸದಾಗಿ ಸೇರ್ಪಡೆಗೊಂಡಿದ್ದು, 12448 ಕ್ಕೇ ಏರಿಕೆಯಾಗಿದೆ.

ಕೋವಿಡ್-19 ವೈರಸ್ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಇದೀಗ ಮೂರು ಹಂತ ಮುಗಿದು,

ಇದೀಗ ನಾಲ್ಕನೇ ಹಂತದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಿ, ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ.

ಹಾಗಾಗಿ ವಿವಿಧ ರಾಜ್ಯಗಳಲ್ಲಿಯೂ ಅಂತರ್ ರಾಜ್ಯಗಳಲ್ಲಿರುವ ಜನರು ಆಗಮಿಸಲು ಅವಕಾಶ ಮಾಡಿಕೊಟ್ಟಿದೆ.

ಏತನ್ಮಧ್ಯೆ ಕೋವಿಡ್ 19 ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗತೊಡಗಿದೆ ಎಂದು ತಿಳಿಸಿದೆ.

ಇನ್ನು ಇಡೀ ವಿಶ್ವದಲ್ಲೇ ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೆ ಹೆಮ್ಮಾರಿ ವೈರಸ್ 3.23 ಲಕ್ಷ ಮಂದಿಯನ್ನು ಬಲಿ ಪಡೆದುಕೊಂಡಿದೆ.

ಇದುವರೆಗೂ 48,97,842 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಅಲ್ಲದೆ, 3,23,287 ಮಂದಿ ವೈರಸ್’ಗೆ ಬಲಿಯಾಗಿದ್ದಾರೆ.

ಈ ನಡುವೆ 48,97,842 ಮಂದಿ ಸೋಂಕಿತರ ಪೈಕಿ 1,959,149 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

- Advertisment -

RECENT NEWS

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ ಮಂಗಳೂರು :  ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ದೇವರ ಗುಡ್ಡೆ ಬಳಿ ನಡೆದ ಎಕ್ಕಾರು ನಿವಾಸಿ ಕೀರ್ತನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ :ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ...

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...