LATEST NEWS
ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಜೇನು ದಾಳಿ : 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
Published
20 hours agoon
By
NEWS DESK2ಉತ್ತಕನ್ನಡ : ಶಾಲಾ ಮೈದಾನದಲ್ಲಿ ಮಕ್ಕಳು ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದರು. ಈ ವೇಳೆ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಇದರಿಂದ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾನ್ ಬಾಸ್ಕೋ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.
ಶಾಲಾ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಸುಮಾರು 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಿರಸಿಯ ಡಾನ್ ಬಾಸ್ಕೋ ಶಾಲಾ ಮೈದಾನದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶಿರಸಿ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಮಂಗಳೂರು/ಉತ್ತರಪ್ರದೇಶ: ಮದುವೆ ಎನ್ನುವುದು ಜನುಮ-ಜನುಮದ ಅನುಬಂಧ ಎಂದು ಹೇಳುತ್ತಾರೆ. ಆದರೆ ಉತ್ತರಪ್ರದೇಶದ ಮೀರತ್ ನಲ್ಲಿ 25 ವರ್ಷದ ಶಿಕ್ಷಕಿಯೊಬ್ಬರು 16 ವರ್ಷದ ಅಪ್ರಾಪ್ತ ಬಾಲಕನೊಂದಿಗೆ ಮದುವೆಯಾಗಿರುವ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಶಿಕ್ಷಕಿ ಪೋಷಕರಿಗೂ ತಿಳಿಸದೇ ಬಾಲಕನನ್ನು ಕರೆದುಕೊಂಡು ಹೋಗಿದ್ದಾಳೆ. ಇದರಿಂದ ಪೋಷಕರು ಪೊಲೀಸ್ ಠಾಣೆಯಲ್ಲಿ ಶಿಕ್ಷಕಿ ವಿರುದ್ದ ದೂರು ದಾಖಲಿಸಿದ್ದಾರೆ. ಸದ್ಯ ಈ ಘಟನೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಶಿಕ್ಷಕಿ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನ ಸ್ಥಳೀಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದ 25 ವರ್ಷದ ಯುವತಿ ಕೆಲವು ದಿನಗಳ ಹಿಂದೆ ಮೀರತ್ ನ 16 ವರ್ಷದ ಬಾಲಕನನ್ನು ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯಿಸಿಕೊಂಡಿದ್ದಾಳೆ.
ಇದನ್ನೂ ಓದಿ: ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂ*ಡಿನ ದಾ*ಳಿ
ಬಳಿಕ ಇವರಿಬ್ಬರ ಪರಿಚಯ ಪ್ರೀತಿಯಾಗಿ ತಿರುಗಿದೆ. ಇತ್ತೀಚೆಗೆ ಶಿಕ್ಷಕಿ ಕಾರಿನಲ್ಲಿ ಮೀರತ್‌ಗೆ ಹೋಗಿ, ಬಾಲಕನ್ನು ಕಾರಿನಲ್ಲಿ ಗಾಜಿಯಾಬಾದ್‌ಗೆ ಕರೆದುಕೊಂಡು ಹೋಗಿದ್ದರು. ಗಾಜಿಯಾಬಾದ್‌ನಲ್ಲಿಯೇ ಬಾಲಕ ಮೇಜರ್ ಎಂಬಂತೆ ನಕಲಿ ದಾಖಲೆ ಸೃಷ್ಟಿಸಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾಳೆ. ತಮ್ಮ ಮಗನ ಮದುವೆಯ ಬಗ್ಗೆ ತಿಳಿದ ಹುಡುಗನ ಪೋಷಕರು ಆಘಾತಕ್ಕೊಳಗಾಗಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಕ್ಷಕಿ ತಮ್ಮ ಮಗನಿಗೆ ಹೆದರಿಸಿ ಮದುವೆಯಾಗಿದ್ದಾರೆ ಮತ್ತು ತಮ್ಮ ಮಗ ಅಪ್ರಾಪ್ತನಾಗಿದ್ದರೂ ಮೇಜರ್ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಬಾಲಕನ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿದ್ದರೂ ಕೂಡ, ಅದಕ್ಕೆ ಕಾನೂನು ಮಾನ್ಯತೆ ಇಲ್ಲ. ಭಾರತೀಯ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ.
DAKSHINA KANNADA
ಉಳ್ಳಾಲ: ಯುಐ ಚಿತ್ರದ ಯಶಸ್ಸಿಗೆ ಕೊರಗಜ್ಜನಿಗೆ ಅಡ್ಡಬಿದ್ದ ಉಪೇಂದ್ರ
Published
35 minutes agoon
04/12/2024ಉಳ್ಳಾಲ: ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್‌ನ ರಿಯಲ್ ಸ್ಟಾರ್ ನಟ , ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಅವರು ಭೇಟಿ ನೀಡಿ ಡಿಸೆಂಬರ್ 20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ ಯುಐ ಸಿನೆಮಾದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.
ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು. ಚಿತ್ರದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್ , ರಾಜೇಶ್ ಭಟ್ ಮೊದಲಾದವರಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನು ಕ್ಷೇತ್ರದ ಪರವಾಗಿ ಅಭಿನಂದಿಸಿದರು.
ಮಂಗಳೂರು/ಅಮೃತಸರ : ಅಮೃತಸರದ ಗೋಲ್ಡನ್ ಟೆಂಪನ್ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿಕದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂ*ಡಿನ ದಾ*ಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ಹೊರಗೆ ನಿಂತಿದ್ದವರು ಗುಂ*ಡು ಹಾರಿಸಿದ ನರೇನ್ ಸಿಂಗ್ ಎಂಬಾತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಗಾಲಿ ಕುರ್ಚಿಯಲ್ಲಿ ಕುಳಿತಿದ್ದ ಸುಖ್ ಬೀರ್ ಸಿಂಗ್ ಬಾದಲ್‌ರನ್ನು ಗುರಿಯಾಗಿಸಿ ವ್ಯಕ್ತಿ ಹಾರಿಸಿದ ಗುಂಡು ಗೋಡೆಗೆ ತಗುಲಿದ್ದರಿಂದ, ಅದೃಷ್ಟವಶಾತ್ ಪ್ರಾ*ಣಾಪಾ*ಯದಿಂದ ಪಾರಾಗಿದ್ದಾರೆ. ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಎಸ್‌ಎಡಿ ಆರೋಪಿಸಿದೆ.
ಇದನ್ನೂ ಓದಿ : ‘ಆರ್ ಸಿಬಿ ನನ್ನನ್ನು ಖರೀದಿ ಮಾಡಿದಕ್ಕೆ ದೇವರಿಗೆ ಧನ್ಯವಾದ’: ಜಿತೇಶ್ ಶರ್ಮಾ !
ಇತ್ತೀಚೆಗಷ್ಟೇ, ಅಕಾಲಿ ದಳದ ನಾಯಕನಿಗೆ 2015ರಲ್ಲಿ ಗುರು ಗ್ರಂಥ ಸಾಹಿಬ್‌ನ ತ್ಯಾಗದಲ್ಲಿ ಡೇರಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರನ್ನು ಬೆಂಬಲಿಸಿದಕ್ಕಾಗಿ ಅಕಾಲ್ ತಖ್ತ್ ಶಿಕ್ಷೆ ವಿಧಿಸಿತ್ತು. ಅವರು ಪ್ರತಿದಿನ ಒಂದು ಗಂಟೆ ದೇವಸ್ಥಾನದಲ್ಲಿ ದ್ವಾರಪಾಲಕನಾಗಿ ಕೆಲಸ ಮಾಡಬೇಕಾಗುತ್ತದೆ. ಶೌಚಾಲಯ ತೊಳೆಯುವುದು, ಪಾತ್ರೆ ತೊಳೆಯುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.
LATEST NEWS
ಸರ್ಕಾರಿ ಉದ್ಯೋಗಿಗಳೇ ಬಿಪಿಎಲ್ ಕಾರ್ಡ್ ನಿಮ್ಮ ಬಳಿ ಇದೆಯಾ ? ಇದನ್ನೊಮ್ಮೆ ಓದಿ ..
ಕ್ರೂರ ವ್ಯಾಘ್ರನೊಂದಿಗೆ ಹೋರಾಡಿ ಪತಿಯನ್ನು ರಕ್ಷಿಸಿದ ಪತ್ನಿ…
ಶಬರಿಮಲೆ ಯಾತ್ರಿಕರಿದ್ದ ಬಸ್ ಅ*ಪಘಾತ; 19 ಮಂದಿಗೆ ಗಾ*ಯ, ಒಂದು ಸಾ*ವು
ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ !!
ಇಸ್ರೊದಿಂದ ಇಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ಪ್ರೊಬಾ-3 ಮಿಷನ್ ಉಡಾವಣೆ
ವಿಟ್ಲ: ಬಾಡಿಗೆಗೆಂದು ಹೋದ ಅಟೋ ಚಾಲಕ ನಾಪತ್ತೆ
Trending
- BANTWAL6 days ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- FILM5 days ago
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ
- Ancient Mangaluru7 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
- LATEST NEWS6 days ago
ನಾನ್ ವೆಜ್ ತಿನ್ನಬೇಡ ಎಂದ ಪ್ರಿಯತಮ: ಆ*ತ್ಮಹತ್ಯೆಗೆ ಶರಣಾದ ಏರ್ ಇಂಡಿಯಾ ಪೈಲಟ್ !