Connect with us

    LATEST NEWS

    ಟಿಬೆಟ್‌ನಲ್ಲಿ ಪ್ರಬಲ ಭೂಕಂಪಕ್ಕೆ 30ಕ್ಕೂ ಅಧಿಕ ಮಂದಿ ಬ*ಲಿ; ನೇಪಾಳ, ಉತ್ತರಭಾರತದಲ್ಲೂ ಕಂಪಿಸಿದ ಭೂಮಿ

    Published

    on

    ಮಂಗಳೂರು/ಕಠ್ಮಂಡು : ಟಿಬೆಟ್ ಪ್ರದೇಶದಲ್ಲಿ ಮಂಗಳವಾರ(ಜ.7) ಪ್ರಬಲ ಭೂಕಂ*ಪ ಸಂಭವಿಸಿದ್ದು, 30ಕ್ಕೂ ಅಧಿಕ ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. 50ಕ್ಕೂ ಅಧಿಕ ಮಂದಿ ಗಾ*ಯಗೊಂಡಿದ್ದಾರೆ. ಭೂಕಂಪದಿಂದಾಗಿ ನೇಪಾಳದ ರಾಜಧಾನಿ ಕಠ್ಮಂಡುವಿನ ಹಲವು ಕಟ್ಟಡಗಳು ಕುಸಿದಿವೆ.

    ಟಿಬೆಟ್ ರಾಜಧಾನಿ ಲಾಸಾದಿಂದ ಸುಮಾರು 380 ಕಿಲೋ ಮೀಟರ್‌ಗಳಷ್ಟು ದೂರದಲ್ಲಿರುವ ಲೋಬುಚೆ ಪಟ್ಟಣದಲ್ಲಿ ಭೂಕಂ*ಪದ ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿದೆ. ಭೂಕಂ*ಪದ ತೀವ್ರತೆ  7.1 ಎಂದು ಯುನೈಟಡಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ.

    ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸಂಭವಿಸಿದ ಭೂಕಂ*ಪದಿಂದಾಗಿ ಜನರು ಭಯಭೀತರಾಗಿದ್ದು, ಮನೆಯಿಂದ ಹೊರಗೆ ಓಡಿದ್ದಾರೆ. ಮೌಂಟ್ ಎವರೆಸ್ಟ್ ಬಳಿಯ ಜನರಿಗೂ ಭೂಮಿ ಕಂಪಿಸಿದ ಅನುಭವವಾಗಿದೆ.

    2015ರಲ್ಲಿ ನೇಪಾಳ – ಟಿಬೆಟ್ ಗಡಿಯಲ್ಲಿ 7.8 ತೀವ್ರತೆಯ ಭೂಕಂ*ಪ ಸಂಭವಿಸಿತ್ತು. 9,000 ಜನರು ಪ್ರಾ*ಣ ಕಳೆದುಕೊಂಡಿದ್ದು. ಅಪಾರ ಆಸ್ತಿ ಹಾ*ನಿಯಾಗಿತ್ತು.

    ಇದನ್ನೂ ಓದಿ : ಬೋರ್ ವೆಲ್ ಗೆ ಬಿದ್ದ 18 ವರ್ಷದ ಯುವತಿ !

    ಭಾರತದ ಕೆಲವೆಡೆ ಭೂಮಿ ಕಂ*ಪಿಸಿದ ಅನುಭವವಾಗಿದೆ. ಬಿಹಾರ ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂ*ಪನವಾದ ಬಗ್ಗೆ ವರದಿಯಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 6 ಮಂದಿ ಸಾ*ವು, 30ಕ್ಕೂ ಅಧಿಕ ಮಂದಿಗೆ ಗಾಯ

    Published

    on

    ತಿರುಪತಿ : ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃ*ತಪಟ್ಟವರ ಸಂಖ್ಯೆ ಆರಕ್ಕೇರಿದೆ.

    ಬುಧವಾರ ಸಂಜೆ ನಡೆದ ಈ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ರಾತ್ರಿ 8 ಗಂಟೆಯ ಸುಮಾರಿಗೆ ತಿರುಮಲ ತಿರುಪತಿ ದೇವಸ್ಥಾನ ಅಧಿಕಾರಿಗಳು ಟಿಕೆಟ್ ವಿತರಣೆ ಆರಂಭಿಸಿದ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಯಿತು.

    ಅಸ್ವಸ್ಥ ಭಕ್ತರೊಬ್ಬರು ಸರದಿಯಿಂದ ನಿರ್ಗಮಿಸಲು ಗೇಟು ತೆರೆದ ಸಂದರ್ಭದಲ್ಲಿ ಎರಡು ಕಡೆಗಳಲ್ಲಿ ಕಾಲ್ತುಳಿತ ಸಂಭವಿಸಿತು. ಮುಂಜಾನೆಯಿಂದಲೇ ಸರದಿಯಲ್ಲಿ ಕಾಯುತ್ತಿದ್ದ ಭಕ್ತರು ಮುಂದೆ ನುಗ್ಗಿದ್ದು, ತೀವ್ರ ಜನದಟ್ಟಣೆ ಮತ್ತು ಅವ್ಯವಸ್ಥೆಗೆ ಕಾರಣವಾಯಿತು.

    ಇದನ್ನೂ ಓದಿ: ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

    ತಮಿಳುನಾಡಿನ ಸೇಲಂನಿಂದ ಆಗಮಿಸಿದ್ದ ಮಲ್ಲಿಕಾ ಎಂಬ ಮಹಿಳೆ ದೇಗುಲ ನಗರಿಯ ರುಯಿಯಾ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃ*ತಪಟ್ಟರೆ ಇತರ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಕೊ*ನೆಯುಸಿರೆಳೆದಿದ್ದಾರೆ. ಮತ್ತಿಬ್ಬರು ಎಸ್ ವಿ ಐಎಂಎಸ್ ನಲ್ಲಿ ಮೃ*ತಪಟ್ಟರು. ಹಲವು ಮಂದಿ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿರುವುದರಿಂದ ಮೃ*ತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಜನದಟ್ಟಣೆಯನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಇಲ್ಲದೆ ಇರುವುದು ಕಾಲ್ತುಳಿತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗೇಟು ತೆಗೆದ ಸಂದರ್ಭದಲ್ಲಿ ಪೊಲೀಸರು ಕೂಡಾ ಅಲ್ಲಿರಲಿಲ್ಲ. ಹಲವು ಗಂಟೆಗಳಿಂದ ಕಾಯುತ್ತಿದ್ದ ಸಾವಿರಾರು ಮಂದಿ ಟಿಕೆಟ್ ಪಡೆಯಲು ನುಗ್ಗಿದರು ಎಂದು ಘಟನೆಯಲ್ಲಿ ಉಳಿದುಕೊಂಡ ವ್ಯಕ್ತಿಯೊಬ್ಬರು ವಿವರಿಸಿದ್ದಾರೆ.

    ವೈಕುಂಠ ಏಕಾದಶಿಯಂದು 2-3 ಲಕ್ಷ ಮಂದಿ ದರ್ಶನ ಪಡೆಯುತ್ತಾರೆ. ಜನವರಿ 10, 11 ಮತ್ತು 12ರಂದು ನಡೆಯುವ ವೈಕುಂಠ ದ್ವಾರ ಸೇವಾ ದರ್ಶನಕ್ಕಾಗಿ ಒಂಬತ್ತು ಕೇಂದ್ರಗಳ 94 ಕೌಂಟರ್ಗಳಲ್ಲಿ ಟೋಕನ್ ವಿತರಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು.

    Continue Reading

    DAKSHINA KANNADA

    ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

    Published

    on

    ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾ*ಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ.

    ಕಾವ್ಯಶ್ರೀ ಎಂಬುವವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸು*ಟ್ಟು ನೋವುಂಟು ಮಾಡಿದ್ದರು.

    ಇದನ್ನೂ ಓದಿ: ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ನೀರಾಟಕ್ಕಿಳಿದ ನಾಲ್ವರಲ್ಲಿ ಮೂವರು ಸಾವು, ಓರ್ವನ ರಕ್ಷಣೆ 

    ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ದ ದೂರು ದಾಖಲಿಸಿದ್ದರು.

    ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.

    Continue Reading

    DAKSHINA KANNADA

    ಬಂಟ್ವಾಳ: ಅದ್ಧೂರಿಯಾಗಿ ನಡೆದ “ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನ-25” ಕಾರ್ಯಕ್ರಮ

    Published

    on

    ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಹಾಗೂ ಪ್ರಾದೇಶಿಕ ಘಟಕಗಳ ಸಹಯೋಗ ದೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನ-2025’ ಕಾರ್ಯಕ್ರಮವು ಬುಧವಾರ ಗಂಜಿಮಠದ ಒಡ್ಡೂರು ಫಾರ್ಮ್ ಹೌಸ್‌ನಲ್ಲಿ ನಡೆಯಿತು.

    ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಾ.ಭರತ್ ಶೆಟ್ಟಿ, ದೀಪಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಯಕ್ಷಧ್ರುವ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಪ್ರಮುಖರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ದೇವದಾಸ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

    ಯಕ್ಷಧ್ರುವ – ಯಕ್ಷಶಿಕ್ಷಣದಲ್ಲಿ ತರಬೇತಿ ಪಡೆದ ಸುಮಾರು 1000 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ರಂಗ ಪ್ರವೇಶ ಮಾಡಿದರು. ಬಂಟ್ವಾಳ ಕ್ಷೇತ್ರದ 10 ಹಾಗೂ ಮಂಗಳೂರು ನಗರ ಉತ್ತರ ಕ್ಷೇತ್ರದ 10 ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತ್ಯೇಕ ಪ್ರತ್ಯೇಕವಾದ ಎರಡು ರಂಗಸ್ಥಳದಲ್ಲಿ ತಮ್ಮ ಪ್ರದರ್ಶನ ನೀಡಿದರು.

    ಕೀರ್ತಿಶೇಷ ಮಿಜಾರುಗುತ್ತು ಆನಂದ ಆಳ್ವ ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರದ 10 ಶಾಲೆಯ ವಿದ್ಯಾರ್ಥಿಗಳು ಹಾಗೂ ಕೀರ್ತಿಶೇಷ ಡಾ. ವೈ. ಚಂದ್ರಶೇಖರ ಶೆಟ್ಟಿ ವೇದಿಕೆಯಲ್ಲಿ ಉತ್ತರ ಕ್ಷೇತ್ರದ 11 ಶಾಲೆಗಳ ವಿದ್ಯಾರ್ಥಿಗಳು ರಂಗಪ್ರವೇಶ ಮಾಡಿದರು.

    Continue Reading

    LATEST NEWS

    Trending