Friday, August 12, 2022

ಬಿಹಾರದ ಜೈಲಿನಲ್ಲಿ ತುಂಬಿ ತುಳುಕುತ್ತಿರುವ ಕುಡುಕರು: 73 ಸಾವಿರ ಮಂದಿ ಅರೆಸ್ಟ್‌..!

ಬಿಹಾರ: ಬಿಹಾರದಲ್ಲಿ ಮುಖ್ಯಮಂತ್ರಿ ನಿತಿಶ್‌ಕುಮಾರ್‌ ಸಂಪೂರ್ಣ ಮದ್ಯ ನಿಷೇಧ ಜಾರಿಗೆ ತಂದಿದ್ದರೂ, ಮದ್ಯಪಾನ ಮಾರಾಟ ಮಾಡುವವರು ಮತ್ತು ಕುಡುಕರು ಮಾತ್ರ ಈ ನಿಷೇಧಕ್ಕೆಲ್ಲ ಕ್ಯಾರೆ ಅನ್ನುತ್ತಿಲ್ಲ. ಪರಿಣಾಮವಾಗಿ ಅಲ್ಲಿನ ಜೈಲು ಪೂರ್ತಿ ಕುಡುಕರೇ ತುಂಬಿದ್ದಾರೆ.


ಬಿಹಾರ ರಾಜ್ಯ ಪೊಲೀಸರು ಮತ್ತು ಮದ್ಯ ವಿರೋಧಿ ಕಾರ್ಯಪಡೆ (ಎಎಲ್‌ಟಿಎಫ್) ಕಳೆದ 7 ತಿಂಗಳಲ್ಲಿ 73,000 ಕ್ಕೂ ಹೆಚ್ಚು ಅಪರಾಧಿಗಳನ್ನು ಬಂಧಿಸಿದ್ದಾರೆ.
ನಮ್ಮ ಇಲಾಖೆಯು 40,000 ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ ಮತ್ತು ಉಳಿದವರನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎಂದು ಎಲ್‌ಟಿಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 2016 ರಿಂದ ಮದ್ಯ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಳೆದ ಏಳು ತಿಂಗಳ ಅವಧಿಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 52,770 ಎಫ್‌ಐಆರ್‌ಗಳು ದಾಖಲಾಗಿವೆ. ಅಂಕಿಅಂಶಗಳ ಪ್ರಕಾರ, 2018 ರಲ್ಲಿ 4,012, 2019 ರಲ್ಲಿ 4,313, 2020 ರಲ್ಲಿ 3,802 ಮತ್ತು 2021 ರಲ್ಲಿ 5,522 ಅಪರಾಧಿಗಳನ್ನು ಬಂಧಿಸಲಾಗಿದೆ.

ಜನವರಿಯಲ್ಲಿ 4,357, ಫೆಬ್ರವರಿಯಲ್ಲಿ 4,118, ಮಾರ್ಚ್‌ನಲ್ಲಿ 5,422, ಏಪ್ರಿಲ್‌ನಲ್ಲಿ 4,490, ಮೇನಲ್ಲಿ 6,255, ಜೂನ್‌ನಲ್ಲಿ 6,992 ಮತ್ತು ಜುಲೈನಲ್ಲಿ 8,440 ಅಪರಾಧಿಗಳನ್ನು ಜೈಲಿಗೆ ಅಟ್ಟಲಾಗಿದೆ.
“ನಾವು ಬಿಹಾರದ ಎಲ್ಲಾ 38 ಜಿಲ್ಲೆಗಳಲ್ಲಿ 233 ತಂಡಗಳನ್ನು ಹೊಂದಿದ್ದೇವೆ, ಜಿಲ್ಲಾ ಪೊಲೀಸರ ಸಹಯೋಗದೊಂದಿಗೆ ಹಗಲಿರುಳು ಕೆಲಸ ಮಾಡುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ...

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...