Home ಕರ್ನಾಟಕ ವಾರ್ತೆ  ಮೋಸ್ಟ್ ವಾಂಟೆಡ್ ಭೂಗತ ಪಾತಕಿ ರವಿಪೂಜಾರಿಯನ್ನ ಕೊನೆಗೂ ಬೆಂಗಳೂರಿಗೆ ಕರೆ ತಂದ ಪೊಲೀಸರು

 ಮೋಸ್ಟ್ ವಾಂಟೆಡ್ ಭೂಗತ ಪಾತಕಿ ರವಿಪೂಜಾರಿಯನ್ನ ಕೊನೆಗೂ ಬೆಂಗಳೂರಿಗೆ ಕರೆ ತಂದ ಪೊಲೀಸರು

ಮೋಸ್ಟ್ ವಾಂಟೆಡ್ ಭೂಗತ ಪಾತಕಿ ರವಿಪೂಜಾರಿಯನ್ನ ಕೊನೆಗೂ ಬೆಂಗಳೂರಿಗೆ ಕರೆ ತಂದ ಪೊಲೀಸರು

ಬೆಂಗಳೂರು : ಕೊಲೆ, ಸುಲಿಗೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಕಳೆದ 30 ವರ್ಷಗಳಿಂದ ಭಾರತದ ಪೊಲೀಸರಿಗೆ ಬೇಕಿದ್ದ ಭೂಗತ ಲೋಕದ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬೆಂಗಳೂರಿಗೆ ಕರೆ ತರಲಾಗಿದೆ.

ತಡರಾತ್ರಿ ಬಿಗಿ ಪೊಲಿಸ್ ಬಂದೋಬಸ್ತಿನಲ್ಲಿ ಬೆಂಗಳೂರಿಗೆ ಕರೆತರಲಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಶಾಸಕರಾದ ತನ್ವೀರ್ ಸೇಠ್, ಹೆಚ್‍ಎಂ ರೇವಣ್ಣ, ಮಾಜಿ ಶಾಸಕ ಅನಿಲ್ ಲಾಡ್‍ಗೆ ಹಣಕ್ಕೆ ಬೆದರಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದ.

ಮಲ್ಪೆ ಮೂಲದ ಈ ಗ್ಯಾಂಗ್‍ಸ್ಟರ್ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಪ್ರಕರಣಗಳಿವೆ.

ಈತನ ವಿರುದ್ಧ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಮೂಲತ ಉಡುಪಿ ಮಲ್ಪೆ ಮೂಲದ ರವಿ ಪೂಜಾರಿ ಮುಂಬೈನಲ್ಲಿಯೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದನು.

ಬಾಲಾ ಜ್ವಾಲೆಯನ್ನು ಕೊಲೆ ಮಾಡಿದ್ದ ರವಿ ಪೂಜಾರಿ ಭೂಗತ ಲೋಕದಲ್ಲಿ ಪ್ರವರ್ಧಮಾನಕ್ಕೆ ಬಂದು, ಭೂಗತ ಪಾತಕಿ ಚೋಟಾ ರಾಜನ್ ತಂಡಕ್ಕೆ ಸೇರ್ಪಡೆಯಾಗಿದ್ದನು.

1990ರಲ್ಲಿ ದುಬೈಗೆ ಎಸ್ಕೇಪ್ ಆಗಿದ್ದ ರವಿ ಪೂಜಾರಿ ಅಲ್ಲಿಂದಲೇ ಬಾಲಿವುಡ್ ನಟರಾದ ಶಾರೂಖ್ ಖಾನ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ನಿರ್ದೇಶಕ ಕರಣ್ ಜೋಹಾರ್, ನಿರ್ಮಾಪಕ ರಾಕೇಶ್ ರೋಷನ್‍ಗೆ ಬೆದರಿಕೆ ಹಾಕಿದ್ದನು.

ತನ್ನ ಹಿಂಬಾಲಕರ ಮೂಲಕ ಮುಂಬೈನಲ್ಲಿ ಓಂಪ್ರಕಾಶ್ ಕುಕ್ರೆಜಾ ಕೊಲೆ, ಬಿಲ್ಡರ್ಸ್ ಕೊಲೆಗೆ ಯತ್ನಿಸಿದ್ದನು.

ಕಳೆದ 15 ವರ್ಷದಿಂದ ವಿದೇಶದಲ್ಲಿ ತಲೆಮಾರಿಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಕಳೆದ ವರ್ಷ ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದರು. ಕಳೆದ 15 ವರ್ಷದಿಂದ ದುಬೈ, ಆಸ್ಟ್ರೇಲಿಯಾ, ಆಫ್ರಿಕಾ ಸೇರಿದಂತೆ ವಿದೇಶಗಳಲ್ಲಿ ತಲೆ ಮಾರಿಸಿಕೊಂಡಿದ್ದ.

ವಿದೇಶದಲ್ಲಿಯೇ ಇದ್ದುಕೊಂಡು ಉದ್ಯಮಿ, ರಾಜಕಾರಣಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. ಭೂಗತವಾಗಿದ್ದುಕೊಂಡೆ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿದ್ದನು. ಈ ಹಿನ್ನೆಲೆಯಲ್ಲಿ ಪೂಜಾರಿಯ ವಿರುದ್ಧ ಕೇಂದ್ರ ಸರ್ಕಾರ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...