Connect with us

BANTWAL

ಬಂಟ್ವಾಳದಲ್ಲಿ ವಿಷ ಪದಾರ್ಥ ಸೇವಿಸಿದ ಅಮ್ಮ- ಮಗ: ತಾಯಿ ಕೊನೆಯುಸಿರು

Published

on

ಬಂಟ್ವಾಳ: ವಿಷ ಪದಾರ್ಥ ಸೇವಿಸಿದ ತಾಯಿ, ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ.


ಗಿರಿಜಾ (62) ಮೃತ ತಾಯಿ, ಪುತ್ರ ರಾಮಚಂದ್ರ (40) ಸ್ಥಿತಿ ಚಿಂತಾಜನಕವಾಗಿದ್ದು ಮಂಗಳೂರಿನ ವೆನ್ಲಾಕ್​​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಗಿರಿಜಾ ಅವರಿಗೆ ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಇದ್ದಾರೆ. ಅವರ ಪತಿ ನಿಧನ ಹೊಂದಿದ್ದಾರೆ. ಮೂವರು ಗಂಡು ಮಕ್ಕಳು ವಿವಿಧ ರೀತಿಯ ಅಂಗವೈಕಲ್ಯ ಹೊಂದಿದ್ದಾರೆ. ಈ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರಬಹುದು ಎಂದು ಶಂಕಿಸಲಾಗಿದೆ.

ಇವರು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು. ಬಾತ್ ರೂಂನಲ್ಲಿ ತಾಯಿ ಮತ್ತು ಮಗ ಕುಸಿದು ಬಿದ್ದಿರುವುದನ್ನು ಕಂಡ ಸಂಬಂಧಿ ಉಮಾನಾಥ ಎಂಬವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

BANTWAL

ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾ*ವು

Published

on

ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.

died

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃ*ತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Continue Reading

BANTWAL

ಮಂಗಳೂರು, ಬಂಟ್ವಾಳಗಳಲ್ಲಿ ಮತದಾನ ಜಾಗೃತಿ; ತಪ್ಪದೇ ವೋಟ್ ಮಾಡಿ ಎಂದ ಅರವಿಂದ ಬೋಳಾರ್..!

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವೀಪ್‌ ಸಮಿತಿ (ಸಿಸ್ಟಮೆಟಿಕ್‌ ವೋಟರ್ಸ್‌ ಎಜ್ಯುಕೇಶನ್‌ ಆಂಡ್‌ ಇಲೆಕ್ಟ್ರೋರಲ್‌ ಪಾರ್ಟಿಸಿಪೇಶನ್‌ ಪ್ರೋಗ್ರಾಮ್‌ ಕಮಿಟಿ) ವತಿಯಿಂದ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ.

ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಂಗಳೂರು ತಾಲೂಕು ಸ್ವೀಪ್‌ ಸಮಿತಿ ವತಿಯಿಂದ ನಿನ್ನೆ(ಎ.1) ನಡೆಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅಪ್ಪಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರದ ಮತಗಟ್ಟೆಗಳ ವ್ಯಾಪ್ತಿಗೆ ಬರುವಂತಹ ಆಶ್ರಮಗಳು ,ಸಂಘ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಮತದಾನದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು.

ತಾಲೂಕು ಸ್ವೀಪ್‌   ಸಮಿತಿ ಸದಸ್ಯರು, ತರಬೇತುದಾರರಾದ ಒ.ಆರ್‌. ಪ್ರಕಾಶ್ ಮತ್ತು ತಹಸೀನ್ ಹಾಜರಿದ್ದರು. ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳು ಸಹಕರಿಸಿದರು.

ಇದನ್ನೂ ಓದಿ..; ಪಕ್ಷ ಬಿಡಿ ಬಿಲ್ಲವರನ್ನು ಗೆಲ್ಲಿಸಿ ಎಂದ ಸತ್ಯಜಿತ್ ಸುರತ್ಕಲ್!

ಬಂಟ್ವಾಳ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸ್ವೀಪ್ ಸಮಿತಿಯಿಂದ ಸಂಗಬೆಟ್ಟು, ಕುಕ್ಕಿಪಾಡಿ, ಪಿಲಾತಬೆಟ್ಟು, ಇರುವತ್ತೂರು, ಬಡಗ ಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿ ಬೋಧನೆ ಮತ್ತು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಚಿತ್ರ ನಟ ಹಾಗೂ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಅವರು ಕೂಡಾ ತಪ್ಪದೆ  ವೋಟ್‌ ಮಾಡಿ ಎಂಬುದಾಗಿ ಇನ್‌ ಸ್ಟಾ ಗ್ರಾಂ ಮೂಲಕ ಮನವಿ ಮಾಡಿದ್ದಾರೆ.

 

 

Continue Reading

LATEST NEWS

Trending