Connect with us

STATE

‘ಆದಷ್ಟು ಬೇಗ ನಮ್ಮ ಮಗನನ್ನು ಭಾರತಕ್ಕೆ ಕರೆತನ್ನಿ’-ಉಕ್ರೇನ್‌ನಲ್ಲಿ ಬಾಕಿಯಾದ ಮಗನ ತಾಯಿ ಅಳಲು

Published

on

ಬೆಳಗಾವಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರಕ್ಕೆ ಭಾರತೀಯರು ಕಂಗಲಾಗಿ ಹೋಗಿದ್ದು, ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿರುವ ಹಲವಾರು ಮಂದಿ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.


ಈ ನಿಟ್ಟಿನಲ್ಲಿ ಭಾರತ ಸರಕಾರವು ತಮ್ಮ ದೇಶದ ಪ್ರಜೆಗಳನ್ನು ಮರಳಿ ತಮ್ಮ ತವರಿಗೆ ಕರೆತರುವ ಕಾಯಕವನ್ನು ಮುಂದುವರೆಸಿದೆ.

ಇತ್ತ ಬೆಳಗಾವಿ ಜಿಲ್ಲೆಯ ಅಥಣಿಯ ರಕ್ಷತ್ ಗಣಿ ಎಂಬ ವಿದ್ಯಾರ್ಥಿ ಎಂಬಿಬಿಎಸ್ ವಿದ್ಯಾಭ್ಯಾಸಕ್ಕಾಗಿ ದೂರದ ಉಕ್ರೇನ್ ತೆರಳಿದ್ದು

ರಷ್ಯಾ ಹಾಗು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದ ತಮ್ಮ ಮನೆಯ ಮಗನಿಗೆ ಜೀವಕ್ಕೆ ಅಪಾಯವಾಗಲಿದೆಯೇ ಅನ್ನುವ ಭಯ ಪೋಷಕರಲ್ಲಿ ಕಾಡತೊಡಗಿದೆ.

ಈ ಕುರಿತು ರಕ್ಷತ್ ತಂದೆ ರವಿಕುಮಾರ್ ಹಾಗು ತಾಯಿ ರೇಖಾ ಮಾಧ್ಯಮಗಳ ಜೊತೆ ಮಾತನಾಡಿದ್ದು, ಕಳೆದ ಮೂರು ತಿಂಗಳ ಹಿಂದೆಯಷ್ಟೇ ಎಂಬಿಬಿಎಸ್ ವಿದ್ಯಾಭಾಸ್ಕಕಾಗಿ ನಮ್ಮ ಮಗ ಉಕ್ರೇನ್‌‌ನ ಕಾರ್ಕಿವ್‌ ಗೆ ತೆರಳಿದ್ದ.

ನಿನ್ನೆ ಬೆಳಗ್ಗೆ ಬಾಂಬ್ ಬ್ಲಾಸ್ಟ್ ಆದ ನಂತರ ಅವನು ಹೆದರಿಕೊಂಡಿದ್ದ. ಇಂದು ಬೆಳಗ್ಗೆ ಮೆಸೇಜ್ ಮಾಡಿ ನಾವು ಅರಾಮದಿಂದ ಇದ್ದೇವೆ ಎಂದು ಹೇಳಿದ್ದಾನೆ.

ಆದಷ್ಟು ಬೇಗ ಮಗ ರಕ್ಷತ್‌ನನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡಿ ಎಂದು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ರಕ್ಷತ್ ಪೋಷಕರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

LATEST NEWS

Trending