Friday, July 1, 2022

ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆಂದು ಬಂದಿದ್ದ ಅಮ್ಮ ಮಗಳು ನಾಪತ್ತೆ

ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಎಂದು ಬಂದಿದ್ದ ಅಮ್ಮ ಮಗಳು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಹಾಗೂ ಅವರ ಮಗಳು ಪುನರ್ವಿ (4 ವರ್ಷ, 6 ತಿಂಗಳು) ನಾಪತ್ತೆಯಾದವರು.


ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಇವರು ಮೇ 13ರಿಂದ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ ನಿರೀಕ್ಷಕರು (0820-2561966) ಅನ್ನು ಸಂಪರ್ಕಿಸಲು ಬ್ರಹ್ಮಾವರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

 

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್‌ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...