Sunday, May 22, 2022

ಹಿರಿಯಡ್ಕ: ತಾಯಿ-ಮಗಳ ಕೊಲೆ ಪ್ರಕರಣದಲ್ಲಿ ಓರ್ವನ ಬಂಧನ

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ರಾಡಿಯಲ್ಲಿ ತಾಯಿ-ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಆರೋಪಿ ಹರೀಶ ಆರ್‌ ಯಾನೆ ಗಣೇಶ (29) ಎಂದು ತಿಳಿಯಲಾಗಿದೆ.


ಘಟನೆ ವಿವರ
ಮೇ.8ರಂದು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ರಾಡಿ ಗ್ರಾಮದ ಮದಗ ಮುಳ್ಳಗುಜ್ಜೆ ಎಂಬಲ್ಲಿ ವಾಸವಾಗಿರುವ ಚೆಲುವಿ (28) ಮತ್ತು 10 ವರ್ಷ ಪ್ರಾಯದ ಮಗಳನ್ನು

ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿರುವ ಬಗ್ಗೆ ಮೃತಳ ತಂಗಿ ದೇವಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದರು. ಘಟನೆ ನಡೆದು 2 ದಿನದೊಳಗೆ ಆರೋಪಿಯನ್ನು ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ತನಿಖಾಧಿಕಾರಿಯಾದ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ್ಲಿ ಪಿಎಸ್ಐಗಳಾದ ಅನಿಲ್ ಬಿ ಮಾದರ, ಮಧು ಬಿ.ಇ, ಪ್ರೊಬೆಷನರಿ ಪಿ.ಎಸ್.ಐ.ಗಳಾದ ಮಂಜುನಾಥ ಮರಬದ, ರವಿ ಬಿ ಕಾರಗಿ ಸಿಬ್ಬಂದಿ

ರಾಘವೇಂದ್ರ ಮತ್ತು ನಿತಿನ್‌ ಇದ್ದ ವಿಶೇಷ ತಂಡವು ಪ್ರಕರಣ ದಾಖಲಾಗಿ 48 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸಿದ್ದಾರೆ.


ಆರೋಪಿ ಹರೀಶ ಎಂಬಾತ ಚೆಲುವಿಯ ದೂರದ ಸಂಬಂಧಿಯಾಗಿದ್ದು, ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದ ಮಾತ್ರವಲ್ಲದೆ ಚೆಲುವಿಯನ್ನು ಮದುವೆ ಆಗಬೇಕೆಂದು ಒತ್ತಾಯಿಸುತ್ತಿದ್ದನು.

ಚೆಲುವಿಯು ಬೇರೆ ಗಂಡಸರೊಂದಿಗೆ ಪೋನ್‌‌ನಲ್ಲಿ ಮಾತನಾಡುತ್ತಿದ್ದಾಳೆ ಎಂಬುದಾಗಿ ಸಂಶಯದಿಂದ ದ್ವೇಷಗೊಂಡು ಮೇ.8 ರಂದು ರಾತ್ರಿ ಅವಳ ಮನೆಗೆ ತೆರಳಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಪೋನಿನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ

ತಗಾದೆ ತೆಗೆದು ಗಲಾಟೆ ಮಾಡಿದ್ದು ಚೆಲುವಿ ಮಲಗಿದ್ದ ಸಮಯ ಚೆಲುವಿಯನ್ನು ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದು ನಂತರ ನಿದ್ರೆಯಲ್ಲಿದ್ದ ಮಗಳು ತನ್ನ ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50 ಸಾವಿರ ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ ಮೊಬೈಲ್‌‌‌ ಪೋನ್‌‌ನ್ನು ಸುಲಿಗೆ ಮಾಡಿಕೊಂಡು ಹೋಗಿದ್ದ ಎನ್ನಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಎನ್‌, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್‌ .ಟಿ ಸಿದ್ದಲಿಂಗಪ್ಪ ಮಾರ್ಗದರ್ಶನದಂತೆ,

ಉಡುಪಿ‌ ಡಿವೈಎಸ್ಪಿ ಸುಧಾಕರ ಎಸ್‌ ನಾಯ್ಕ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಸಿಪಿಐ ಅನಂತ ಪದ್ಮನಾಭ, ಹಿರಿಯಡ್ಕ ಠಾಣಾ ಪಿ.ಎಸ್.ಐ ಅನಿಲ್‌ ಬಿ ಮಾದರ, ಕೋಟ ಠಾಣೆಯ ಪಿ.ಎಸ್‌‌.ಐ ಮಧು ಬಿ.ಇ,

ಹಿರಿಯಡ್ಕ ಠಾಣೆಯ ಪ್ರೊಬೆಷನರಿ ಪಿ.ಎಸ್.ಐ ಮಂಜುನಾಥ ಮರಬದ ಮತ್ತು ರವಿ ಬಿ.ಕಾರಗಿ ಬ್ರಹ್ಮಾವರ ವೃತ್ತ ಕಛೇರಿಯ ಎ.ಎಸ್.ಐ ಕೃಷ್ಣಪ್ಪ,

ಪ್ರದೀಪ್‌ ನಾಯಕ, ವಾಸುದೇವ ಪಿ, ರವೀಂದ್ರ ಹೆಚ್‌. ಶೇಖರ ಸೇರಿಗಾರ ಹಿರಿಯಡ್ಕ ಠಾಣೆಯ ಎ.ಎಸ್.ಐ ಗಂಗಪ್ಪ & ಜಯಂತ, ಸಿಬ್ಬಂದಿ ರಘು, ಸದಾಶಿವ, ರಾಘವೇಂದ್ರ ಕೆ,

ದಯಾನಂದ ಪ್ರಭು, ಉದಯ ಕಾಮತ್‌‌, ರಾಜೇಶ ಡಿ ಗಾರ್‌, ಸುರೇಖಾ, ರಾಕೇಶ ಶೆಟ್ಟಿ, ನಿತಿನ್‌, ಭೀಮಪ್ಪ, ಅಶೋಕ, ಸಂತೋಷ, ಕಾರ್ತಿಕ, ಆನಂದ, ಕೋಟ ಠಾಣೆಯ ಗಣೇಶ, ರಾಘವೇಂದ್ರ,

ಬ್ರಹ್ಮಾವರ ಠಾಣೆಯ ಪ್ರವೀಣ ಶೆಟ್ಟಿಗಾರ್‌ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ತಂಡದ ಸಿಬ್ಬಂದಿಯವರಾದ ಶಿವಾನಂದ, ದಿನೇಶ ಮೊದಲಾದವರು ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿ

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂದು ಬೆಳಿಗ್ಗೆ 7.30ರ ಸುಮಾರಿಗೆ ಕೋಡಿಂಬಾಡಿಯ ವಿನಾಯಕ ನಗರದ...

ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ ಬೆನ್ನಲ್ಲೇ ಗ್ಯಾಸ್‌ಗೆ 200 ರೂ ಸಬ್ಸಿಡಿ ಘೋಷಿಸಿದ ಕೇಂದ್ರ

ನವದೆಹಲಿ: ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ.ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಪ್ರತಿ ಸಿಲಿಂಡರ್‌ಗೆ 200 ರೂ...