bangalore
ಬ್ಯಾಂಕ್‌ನ ಇಯರ್ ಎಂಡ್ ಕಿರಿಕ್…ಉಡುಪಿ ಮೂಲದ ಮೂವರ ಜೀವಾಂತ್ಯ…!
Published
8 months agoon
By
Adminಬೆಂಗಳೂರು : ಖಾಸಗಿ ಬ್ಯಾಂಕ್ ಸಾಲ ವಸೂಲಿ ವಿಚಾರದಲ್ಲಿ ಮೂವರು ತಮ್ಮ ಜೀವಾಂತ್ಯಗೊಳಿಸಿದ್ದಾರೆ. ಖಾಸಗಿ ಬ್ಯಾಂಕ್‌ನಲ್ಲಿ ಪತಿ ಸಾಲ ಮಾಡಿದ್ದು, ಬಾಕಿ ಕಟ್ಟಲು ಉಳಿದಿತ್ತು. ಆ ಸಾಲದ ವಸೂಲಿಗೆ ಬ್ಯಾಂಕ್ ಸಿಬ್ಬಂದಿಗಳು ಸಾಲಗಾರನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸಾಲ ಮಾಡಿದ ಪತಿ ಮನೆಯಿಂದ ಹೊರ ಹೋಗಿದ್ದರು. ಆದ್ರೆ ಅಕ್ಕ ಪಕ್ಕದ ಮನೆಯವರ ಮುಂದೆ ಬ್ಯಾಂಕ್ ಸಿಬ್ಬಂದಿಗಳು ಜೋರಾಗಿ ಮಾತನಾಡಿ ಗಲಾಟೆ ಮಾಡಿದ್ದರು. ಇದರಿಂದ ಅಕ್ಕಪಕ್ಕದ ಮನೆಯವರಿಗೂ ಸಾಲದ ವಿಚಾರ ಗೊತ್ತಾದ ಹಿನ್ನಲೆಯಲ್ಲಿ ಮಾನ ಹೋಯಿತು ಎಂದು ಮನ ನೊಂದಿದ್ದಾರೆ. ಬಳಿಕ ಇಬ್ಬರು ಅವಳಿ ಗಂಡು ಮಕ್ಕಳ ಜೊತೆಯಲ್ಲಿ ತಾಯಿ ಬೆಂಕಿ ಹಚ್ಚಿಕೊಂಡು ಜೀವಾಂತ್ಯ ಗೊಳಿಸಿದ್ದಾರೆ. ಇವರು ಉಡುಪಿಯ ಅಂಬಲಪಾಡಿ ನಿವಾಸಿಗಳಾಗಿದ್ದು, ಕೆಲ ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಾಯಿ ಸುಕನ್ಯ, ಮಕ್ಕಳಾದ ನಿಖಿತ್ ಹಾಗೂ ನಿಶ್ಚಿತ್ ಮೂವರು ತಮ್ಮ ಜೀವಾಂತ್ಯ ಗೊಳಿಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ಮೂರನೇ ಹಂತದಲ್ಲಿ ವಾಸವಾಗಿದ್ದ ಈ ಕುಟುಂಬದ ಬಗ್ಗೆ ಅಕ್ಕಪಕ್ಕದ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇತ್ತು ಎನ್ನಲಾಗಿದೆ. ಬ್ಯಾಂಕ್ ಸಾಲದ ವಿಚಾರ ಎಲ್ಲರಿಗೂ ತಿಳಿದು ಮಾನ ಹಾನಿಯಾಗಿದೆ ಎಂದು ಈ ರೀತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
bangalore
ಮಂಜುಮ್ಮೆಲ್ ಬಾಯ್ಸ್ ಸಿನಿಮಾ ರೀತಿಯ ಘಟನೆ; ಸೆಲ್ಫಿ ಹುಚ್ಚಿಗೆ ಬಲಿಯಾಗಬೇಕಿದ್ದ ಯುವತಿ ರೋಚಕ ಪಾರು !
Published
4 weeks agoon
28/10/2024ಕೊಚ್ಚಿಯಿಂದ ಹತ್ತು ಜನ ಸ್ನೇಹಿತರು ಕೊಡೈಕೆನಾಲ್‌ಗೆ ಹೋಗುತ್ತಾರೆ. ಕಮಲ್ ಹಾಸನ್ ಅಭಿನಯದ ಗುಣ ಚಿತ್ರದಲ್ಲಿನ ಗುಹೆಗಳನ್ನು ನೋಡಲೆಂದು ತೆರಳುತ್ತಾರೆ. ನಿರ್ಬಂಧಿತ ಪ್ರದೇಶ ಎಂದು ಗೊತ್ತಿದ್ದರೂ ಆಳವಾದ ಗುಹೆಗಳನ್ನು ಪ್ರವೇಶಿಸುತ್ತಾರೆ. ಆದರೆ, ಸ್ನೇಹಿತನೊಬ್ಬ ಆಕಸ್ಮಿಕವಾಗಿ ಆಳವಾದ ಕಣಿವೆಯಲ್ಲಿ ಬೀಳುತ್ತಾನೆ. ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೆಲ್ ಬಾಯ್ಸ್ ಸಿನಿಮಾದ ಕತೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
bangalore
ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು ; ವಾರ್ನ್ ಮಾಡಿದ್ದಕ್ಕೆ ಬರ್ಬರ ಹ*ತ್ಯೆ
Published
4 weeks agoon
27/10/2024ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ.
ಘಟನೆ ಹಿನ್ನಲೆ :
ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್‌ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ ವಿಷಯ ತಿಳಿದ ರೋಹಿದ್ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ ಹಿಂದೆ ಅಮ್ಜಾದ್ ಮನೆ ಬಳಿ ಹೋಗಿ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ನಿನ್ನೆ (ಅ.26) ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ‘ನಿನ್ನ ಜೊತೆಗೆ ಮಾತನಾಡಬೇಕು ಬಾ’ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕು*ವಿನಿಂದ ಇ*ರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.
ಆರೋಪಿ ಬಂಧನ :
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊ*ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ*ಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION1 day ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
Mithun
21/03/2024 at 5:30 AM
Bank Halli takonda saala na repay maadi annodu thappa.. Bank officers manege bandu recovery maado modlu telephonic calls Ella madtaare response llde iddaga manege recovery ge bartaare.. Astu maryaadi GE anjoru repayment madbeku.. Sir naavu borrower n doorta Illa.. Kasta elrigu iruthe.. Artha aguthe.. But bankers deal with public money…kotta saala repayment aaglilla andre bank business.. Turnover.. Profitability effect aguthe.. Helbodu recovery agde idre case haaki anta.. Haagadre ice kelsa na.. Loan kodi.. Katlilla andre chinte madbedi case haaki court kacheri anta alita iri.. Bere kelsa emu maadbedi .. Business beda.. Ice maadi Alva… Bank managers, adhikaariglu estu Jana suicide madkolta iddare.. U might b reading in news paper or social media.. Ella work pressure.. Business pressure.. N NPA/loan recovery is main.. Thappu adaag yare agirli bayyri.. Comment Maadi.No issues. Bank du year end kirkiri Andre en artha.. Elladakku bankers de thappu Andre enartha ..
Shivakumar
22/03/2024 at 1:15 PM
ಲೇ ಬೋಳಿಮಗ್ನೇ ಸಾಲ ಕೊಡುವಾಗ ಬ್ಯಾಂಕ್ ನವರು ಸಾಲದ ನಾಲ್ಕರಷ್ಟು ಶೂರಿಟಿ ಪಡೆದಿರುತ್ತಾರೆ, ಆದರು ವಸೂಲಿ ಮಾಡಬೇಕಾದ್ದು ಅವರ ಡ್ಯೂಟಿ ಹಾಗಂತ ಮನೆಮುಂದೆ ಹೋಗಿ ಕೇಳೋ ಅವಶ್ಯಕತೆಯಿಲ್ಲ ಅಲ್ವೇನೋ ನೋಟೀಸ್ ಕೊಟ್ಟು ಶೂರಿಟಿ ಕೊಟ್ಟ ಅಸ್ತಿಗಳ ಮೇಲೆ ಕ್ರಮ ತೆಗೆಬಹುದಿತ್ತು, ಈಗ ಅವರ ಜೀವ ಹೋಗಿದೆ ನಿಮ್ಮಪ್ಪ ಕೊಡ್ತಾನ ನೋಡೋಣ ಕನಿಷ್ಠ ಅವರ ಜೊತೆ ಹೋಗಿ ಬಾ ಬಾಯಿಗೆ ಬಂದ ಹಾಗೆ ಮಾತಾಡ್ಬೇಡ ಎಚ್ಚರ.
Madhusudana K R
22/03/2024 at 10:18 PM
ಇಲ್ಲಿ ತಪ್ಪು ಯಾರದ್ದು ಅಂತ ಹೇಳೋಕೆ ಆಗಲ್ಲ. ಸಾಲ ತೆಗೆದುಕೊಂಡ ಮೇಲೆ ಕಟ್ಟಬೇಕು ಇದು ಗ್ರಾಹಕರ ಕರ್ತವ್ಯ ಅದೇ ರೀತಿ ಕೊಟ್ಟ ಸಾಲವನ್ನು ವಸೂಲಿ ಮಾಡುವುದು ಬ್ಯಾಂಕ್ ಸಿಬ್ಬಂದಿಯ ಕರ್ತವ್ಯ. ಸಾಲ ಕಟ್ಟುವಾಗ ಗ್ರಾಹಕರಿಗೆ ಕಷ್ಟ ವಸೂಲಿ ಮಾಡದಿದ್ದರೆ ಸಿಬ್ಬಂದಿಗೆ ಕೆಲ್ಸದ ಮೇಲೆ ತೂಗುಗತ್ತಿ… ಹಾಗಾಗಿ ಮಾಡಿದ ಸಾಲದಲ್ಲಿ ಅದನ್ನು ತೀರಿಸಲು ಒಂದು ವ್ಯವಸ್ಥೆಯನ್ನು ಮಾಡಿಕೊಂಡು ನಿಮಗೂ ಹಾಗೂ ಕೊಟ್ಟವರಿಗೂ ತೊಂದರೆಯಗದಂತೆ ನೋಡಿಕೊಳ್ಳಿ ಆಗ ನಿಮಗೂ ಸಿಬ್ಬಂದಿಗೂ ಸಮಸ್ಯೆ ತಪ್ಪುತ್ತದೆ.