Connect with us

    bangalore

    ಬ್ಯಾಂಕ್‌ನ ಇಯರ್‌ ಎಂಡ್ ಕಿರಿಕ್‌…ಉಡುಪಿ ಮೂಲದ ಮೂವರ ಜೀವಾಂತ್ಯ…!

    Published

    on

    ಬೆಂಗಳೂರು : ಖಾಸಗಿ ಬ್ಯಾಂಕ್ ಸಾಲ ವಸೂಲಿ ವಿಚಾರದಲ್ಲಿ ಮೂವರು ತಮ್ಮ ಜೀವಾಂತ್ಯಗೊಳಿಸಿದ್ದಾರೆ.  ಖಾಸಗಿ ಬ್ಯಾಂಕ್‌ನಲ್ಲಿ ಪತಿ ಸಾಲ ಮಾಡಿದ್ದು, ಬಾಕಿ ಕಟ್ಟಲು ಉಳಿದಿತ್ತು. ಆ ಸಾಲದ ವಸೂಲಿಗೆ ಬ್ಯಾಂಕ್ ಸಿಬ್ಬಂದಿಗಳು ಸಾಲಗಾರನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸಾಲ ಮಾಡಿದ ಪತಿ ಮನೆಯಿಂದ ಹೊರ ಹೋಗಿದ್ದರು.  ಆದ್ರೆ ಅಕ್ಕ ಪಕ್ಕದ ಮನೆಯವರ ಮುಂದೆ ಬ್ಯಾಂಕ್ ಸಿಬ್ಬಂದಿಗಳು ಜೋರಾಗಿ ಮಾತನಾಡಿ ಗಲಾಟೆ ಮಾಡಿದ್ದರು. ಇದರಿಂದ ಅಕ್ಕಪಕ್ಕದ ಮನೆಯವರಿಗೂ ಸಾಲದ ವಿಚಾರ ಗೊತ್ತಾದ ಹಿನ್ನಲೆಯಲ್ಲಿ ಮಾನ ಹೋಯಿತು ಎಂದು ಮನ ನೊಂದಿದ್ದಾರೆ. ಬಳಿಕ ಇಬ್ಬರು ಅವಳಿ ಗಂಡು ಮಕ್ಕಳ ಜೊತೆಯಲ್ಲಿ ತಾಯಿ ಬೆಂಕಿ ಹಚ್ಚಿಕೊಂಡು ಜೀವಾಂತ್ಯ ಗೊಳಿಸಿದ್ದಾರೆ. ಇವರು ಉಡುಪಿಯ ಅಂಬಲಪಾಡಿ ನಿವಾಸಿಗಳಾಗಿದ್ದು, ಕೆಲ ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ತಾಯಿ ಸುಕನ್ಯ, ಮಕ್ಕಳಾದ ನಿಖಿತ್ ಹಾಗೂ ನಿಶ್ಚಿತ್‌ ಮೂವರು ತಮ್ಮ ಜೀವಾಂತ್ಯ ಗೊಳಿಸಿದ್ದಾರೆ. ಬೆಂಗಳೂರಿನ  ಜೆ.ಪಿ.ನಗರದ ಮೂರನೇ ಹಂತದಲ್ಲಿ ವಾಸವಾಗಿದ್ದ ಈ ಕುಟುಂಬದ ಬಗ್ಗೆ ಅಕ್ಕಪಕ್ಕದ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇತ್ತು ಎನ್ನಲಾಗಿದೆ. ಬ್ಯಾಂಕ್ ಸಾಲದ ವಿಚಾರ ಎಲ್ಲರಿಗೂ ತಿಳಿದು ಮಾನ ಹಾನಿಯಾಗಿದೆ ಎಂದು ಈ ರೀತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

     

    3 Comments

    3 Comments

    1. Mithun

      21/03/2024 at 5:30 AM

      Bank Halli takonda saala na repay maadi annodu thappa.. Bank officers manege bandu recovery maado modlu telephonic calls Ella madtaare response llde iddaga manege recovery ge bartaare.. Astu maryaadi GE anjoru repayment madbeku.. Sir naavu borrower n doorta Illa.. Kasta elrigu iruthe.. Artha aguthe.. But bankers deal with public money…kotta saala repayment aaglilla andre bank business.. Turnover.. Profitability effect aguthe.. Helbodu recovery agde idre case haaki anta.. Haagadre ice kelsa na.. Loan kodi.. Katlilla andre chinte madbedi case haaki court kacheri anta alita iri.. Bere kelsa emu maadbedi .. Business beda.. Ice maadi Alva… Bank managers, adhikaariglu estu Jana suicide madkolta iddare.. U might b reading in news paper or social media.. Ella work pressure.. Business pressure.. N NPA/loan recovery is main.. Thappu adaag yare agirli bayyri.. Comment Maadi.No issues. Bank du year end kirkiri Andre en artha.. Elladakku bankers de thappu Andre enartha ..

    2. Shivakumar

      22/03/2024 at 1:15 PM

      ಲೇ ಬೋಳಿಮಗ್ನೇ ಸಾಲ ಕೊಡುವಾಗ ಬ್ಯಾಂಕ್ ನವರು ಸಾಲದ ನಾಲ್ಕರಷ್ಟು ಶೂರಿಟಿ ಪಡೆದಿರುತ್ತಾರೆ, ಆದರು ವಸೂಲಿ ಮಾಡಬೇಕಾದ್ದು ಅವರ ಡ್ಯೂಟಿ ಹಾಗಂತ ಮನೆಮುಂದೆ ಹೋಗಿ ಕೇಳೋ ಅವಶ್ಯಕತೆಯಿಲ್ಲ ಅಲ್ವೇನೋ ನೋಟೀಸ್ ಕೊಟ್ಟು ಶೂರಿಟಿ ಕೊಟ್ಟ ಅಸ್ತಿಗಳ ಮೇಲೆ ಕ್ರಮ ತೆಗೆಬಹುದಿತ್ತು, ಈಗ ಅವರ ಜೀವ ಹೋಗಿದೆ ನಿಮ್ಮಪ್ಪ ಕೊಡ್ತಾನ ನೋಡೋಣ ಕನಿಷ್ಠ ಅವರ ಜೊತೆ ಹೋಗಿ ಬಾ ಬಾಯಿಗೆ ಬಂದ ಹಾಗೆ ಮಾತಾಡ್ಬೇಡ ಎಚ್ಚರ.

    3. Madhusudana K R

      22/03/2024 at 10:18 PM

      ಇಲ್ಲಿ ತಪ್ಪು ಯಾರದ್ದು ಅಂತ ಹೇಳೋಕೆ ಆಗಲ್ಲ. ಸಾಲ ತೆಗೆದುಕೊಂಡ ಮೇಲೆ ಕಟ್ಟಬೇಕು ಇದು ಗ್ರಾಹಕರ ಕರ್ತವ್ಯ ಅದೇ ರೀತಿ ಕೊಟ್ಟ ಸಾಲವನ್ನು ವಸೂಲಿ ಮಾಡುವುದು ಬ್ಯಾಂಕ್ ಸಿಬ್ಬಂದಿಯ ಕರ್ತವ್ಯ. ಸಾಲ ಕಟ್ಟುವಾಗ ಗ್ರಾಹಕರಿಗೆ ಕಷ್ಟ ವಸೂಲಿ ಮಾಡದಿದ್ದರೆ ಸಿಬ್ಬಂದಿಗೆ ಕೆಲ್ಸದ ಮೇಲೆ ತೂಗುಗತ್ತಿ… ಹಾಗಾಗಿ ಮಾಡಿದ ಸಾಲದಲ್ಲಿ ಅದನ್ನು ತೀರಿಸಲು ಒಂದು ವ್ಯವಸ್ಥೆಯನ್ನು ಮಾಡಿಕೊಂಡು ನಿಮಗೂ ಹಾಗೂ ಕೊಟ್ಟವರಿಗೂ ತೊಂದರೆಯಗದಂತೆ ನೋಡಿಕೊಳ್ಳಿ ಆಗ ನಿಮಗೂ ಸಿಬ್ಬಂದಿಗೂ ಸಮಸ್ಯೆ ತಪ್ಪುತ್ತದೆ.

    Leave a Reply

    Your email address will not be published. Required fields are marked *

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending