Friday, August 19, 2022

ಸುರತ್ಕಲ್‌: ಗಂಡ ಮಲಗಿದ್ದ ವೇಳೆ ಮಕ್ಕಳೊಂದಿಗೆ ನಾಪತ್ತೆಯಾದ ಪತ್ನಿ

ಮಂಗಳೂರು: ಗಂಡ ಮನೆಯಲ್ಲಿ ಮಲಗಿದ್ದ ವೇಳೆ ತನ್ನಿಬ್ಬರು ಮಕ್ಕಳೊಂದಿಗೆ ಹೊರ ಹೋದ ಮಹಿಳೆ ನಾಪತ್ತೆಯಾದ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೊಪ್ಪಳ ಮೂಲದ ಹನುಮಂತ ಅವರು ಭಾರತಿ ಮಾದರ ಹಾಗೂ ಇಬ್ಬರು ಮಕ್ಕಳೊಂದಿಗೆ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಮಾ.21ರಂದು ರಾತ್ರಿ 8.00 ಗಂಟೆಯ ಸುಮಾರಿಗೆ ಗಂಡ ಮಲಗಿದ್ದ ವೇಳೆ ಪತ್ನಿ 11 ವರ್ಷದ ಮಗಳು ಹಾಗೂ 9 ವರ್ಷದ ಮಗನೊಂದಿಗೆ ಮನೆ ಮುಂಭಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಹೊರಗಡೆ ಹೋಗಿದ್ದಾರೆ.

ಅವರು ಮತ್ತೆ ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಗಂಡ ನಾಪತ್ತೆ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...