Thursday, September 29, 2022

ಡ್ರಗ್ಸ್‌ ಖರೀದಿಗೆ ಹಣ ನೀಡದಕ್ಕೆ ಮನೆಗೆ ಬೆಂಕಿ ಕೊಟ್ಟು ತಾಯಿಯನ್ನೇ ಕೊಂದ ಪಾಪಿ ಮಗ

ಉತ್ತರಾಖಾಂಡ್: ಡ್ರಗ್ಸ್​ ಖರೀದಿಸಲು ತಾಯಿ ಹಣ ನೀಡದ ಕಾರಣಕ್ಕೆ ಮನೆಗೆ ಬೆಂಕಿ ಹಚ್ಚಿ ತಾಯಿಯನ್ನೇ ಕೊಂದ ಘಟನೆ ಉತ್ತರಾಖಂಡದ ರೂರ್ಕಿಯಲ್ಲಿ ನಡೆದಿದೆ.


ಕುಡಿದ ಮತ್ತಿನಲ್ಲಿದ್ದ ಮಗ, ತಾಯಿಯ ಬಳಿ ಡ್ರಗ್ಸ್ ಖರೀದಿಸಲು ಹಣ ಕೇಳಿದ್ದನು. ಇದಕ್ಕೆ ತಾಯಿ ನಿರಾಕರಿಸಿದ್ದಾಳೆ. ಈ ವೇಳೆ ಇಬ್ಬರು ನಡುವೆ ಕೆಲ ಹೊತ್ತು ವಾಗ್ವಾದ ನಡೆದಿದೆ.

ಇದರಿಂದ ಕೆರಳಿದ ಆತ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ಹಚ್ಚಿ ಸ್ಫೋಟಗೊಳಿಸಿದ್ದಾನೆ. ಇದರ ಪರಿಣಾಮ, ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಕೋಪಗೊಂಡ ಮಗ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆ ಮನೆಯಲ್ಲಿದ್ದ ಸಾಮಗ್ರಿಗಳೆಲ್ಲವೂ ಸುಟ್ಟು ಕರಕಲಾಗಿವೆ. ತುರ್ತು ಸೇವೆಯ ವಾಹನಗಳು ಘಟನಾ ಸ್ಥಳ ತಲುಪುವಷ್ಟರಲ್ಲಿ ತಾಯಿ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...