Wednesday, May 18, 2022

ಹೆತ್ತ ಮಗುವನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪಾಪಿ ತಾಯಿ

ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸ್(4) ಹತ್ಯೆಗೊಳಗಾದ ಮಗು ಎಂದು ತಿಳಿದುಬಂದಿದೆ.

ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, ಶ್ರೀನಿವಾಸ್‌ನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ. ಪತಿ ಶಂಕರ್ ಮನೆಯಲ್ಲಿ ಇಲ್ಲದಿದ್ದಾಗ ಭವಾನಿ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಎಚ್.ಡಿ.ಕೋಟೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತದೆ ಎನ್ನುತ್ತಿದ್ದಳು.

ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.

ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ.

ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದು ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

LEAVE A REPLY

Please enter your comment!
Please enter your name here

Hot Topics

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...