Thursday, August 11, 2022

ಆರು ಮಕ್ಕಳನ್ನು ಬಾವಿಗೆ ಬಿಸಾಡಿ ಆತ್ಮಹತ್ಯೆಗೆ ಯತ್ನಿಸಿದ ಪಾಪಿ ತಾಯಿ

ರಾಯಗಢ: ಆರು ಮಕ್ಕಳನ್ನು ಬಾವಿಗೆ ಬಿಸಾಡಿ ಜೊತೆಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಬಾವಿಗೆ ಬಿಸಾಡಿದ ಐವರೂ ಮಕ್ಕಳು ಸಾವನ್ನಪ್ಪಿದ್ದಾರೆ.

ಇಲ್ಲಿನ ದಲ್ಕತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 6 ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತಪಟ್ಟ 6 ಮಕ್ಕಳು 10 ವರ್ಷದ ಒಳಗಿನವರಾಗಿದ್ದಾರೆ.

ಮೃತರಲ್ಲಿ ಒಂದು ಗಂಡು ಮಗು, ಐವರು ಹೆಣ್ಣು ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಲ್ಲ ಮೃತದೇಹಗಳನ್ನು ಹೊರತೆಗೆಯಲಾಗಿದ್ದು,

ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಕುರಿತಂತೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಭ್ಯವಾಗಿರುವ ಸ್ಥಳೀಯ ಮಾಹಿತಿ ಪ್ರಕಾರ, ಮಹಿಳೆಯು, ಪತಿ ಜೊತೆ ಜಗಳ ಮಾಡಿಕೊಂಡು ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...