Connect with us

    LATEST NEWS

    ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

    Published

    on

    ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ಈ ಘಟನೆ ನಡೆದಿದೆ.

    ಗೀತಾ ಬಡಗಿ (28), ಮಕ್ಕಳಾದ ಶ್ರವಣ(6), ಶರಣ್(4) ನೀರುಪಾಲಾದವರು. ಮೃತ ಗೀತಾ ತಂದೆ ರಾಮಪ್ಪ ನಾಯ್ಕಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.

    ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    LATEST NEWS

    ಸೆಂಟ್ರಿಂಗ್ ಮರದ ತುಂಡು ಬಿದ್ದು ಬಾಲಕಿ ಸಾವು ಕೇಸ್: ಎಂಜಿನಿಯರ್ ಪೊಲೀಸ್ ವಶಕ್ಕೆ

    Published

    on

    ಬೆಂಗಳೂರಲ್ಲಿ ಶಾಲೆ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಮರದ ತುಂಡು ಬಿದ್ದು 15 ವರ್ಷದ ಬಾಲಕಿ ತೇಜಸ್ವಿನಿ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಕಟ್ಟಡದ ಇಂಜಿನಿಯರ್ ಚಂದ್ರಶೇಖರ್ ಎನ್ನುವವರನ್ನು ವಿವಿ ಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಹೌದು ಕಟ್ಟಡ ನಿರ್ಮಾಣ ಮಾಡುತ್ತಿರುವ ಇಂಜಿನಿಯರ್ ಅನ್ನು ವಿವಿ ಪುರಂ ಠಾಣೆ ಪೋಲಿಸಿರುವ ಅವಶ್ಯಕತೆ ಪಡೆದುಕೊಂಡು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.ಘಟನೆ ಸಂಬಂಧ ತೇಜಸ್ವಿನಿ ತಂದೆ ಸುಧಾಕರ್‌ ರಾವ್‌ ಅವರು ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲಿಕ, ಗುತ್ತಿಗೆದಾರ, ಎಂಜಿನಿಯರ್‌, ಬಿಬಿಎಂಪಿ ಅಧಿಕಾರಿಗಳು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಇನ್ನು ಕಟ್ಟಡ ಮಾಲಿಕ, ಗುತ್ತಿಗೆದಾರ ಹಾಗೂ ಘಟನೆ ವೇಳೆ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಇನ್ನು ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಿಲ್ಲ ಎಂಬುದು ಗೊತ್ತಾಗಿದೆ. ಎಲ್ಲಾ ಆರೋಪಿಗಳನ್ನು ಸದ್ಯದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

    Continue Reading

    LATEST NEWS

    ಬರ್ತ್‌ಡೇ ದಿನದಂದೇ ಹಾಸ್ಟೆಲ್ ಕಟ್ಟಡದಿಂದ ಬಿದ್ದು ‘IIM’ ವಿದ್ಯಾರ್ಥಿ ಸಾವು

    Published

    on

    ಬೆಂಗಳೂರು: ಬೆಂಗಳೂರಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದ್ದು, ತನ್ನ ಹುಟ್ಟು ಹಬ್ಬದ ದಿನದಂದೇ ಐಐಎಂ ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಕೈಲಾಶ್‌ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ. ಈತ ಗುಜರಾತ್ ಮೂಲದವನು ಎಂದು ತಿಳಿದುಬಂದಿದ್ದು, ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು, ಕೈಲಾಶ್ ಮೃತಪಟ್ಟಿದ್ದಾನೆ.

    ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್​ನಲ್ಲಿರುವ ಸ್ನೇಹಿತನ‌ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Continue Reading

    LATEST NEWS

    ಪತ್ರಕರ್ತನ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಪೊಲೀಸ್ ವಶಕ್ಕೆ

    Published

    on

    ಮಂಗಳೂರು/ರಾಯ್ ಪುರ : ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಪತ್ರಕರ್ತನ ಹತ್ಯೆಯ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎನ್ನುವಾತನನ್ನು ಹೈದರಾಬಾದ್ ನಲ್ಲಿ ವಿಶೇಷ ತನಿಖಾ ದಳ (ಎಸ್ ಐಟಿ) ವಶಕ್ಕೆ ಪಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಪತ್ರಕರ್ತ ಮುಕೇಶ್ ಚಂದ್ರಕರ್ ನ್ನು ಹತ್ಯೆ ಮಾಡಿದ್ದ ಪ್ರಕರಣ ಜನವರಿ 3 ರಂದು ಬೆಳಕಿಗೆ ಬಂದಿತ್ತು. ಆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ವೃತ್ತಿಯಲ್ಲಿ ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ ನನ್ನು ಪತ್ತೆ ಮಾಡಲು ಎಸ್ ಐಟಿ ರಚನೆ ಮಾಡಲಾಗಿತ್ತು. ಭಾನುವಾರ ರಾತ್ರಿ ಅಧಿಕಾರಿಗಳು ಸುರೇಶ್ ನನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ: ಬೈಕ್ ವ್ಹೀಲಿಂಗ್ ಮಾಡಿ ವಿಡಿಯೋ ಅಪ್ಲೋಡ್: ಆರೋಪಿ ವಶ

    ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುರೇಶ್ ಸಹೋದರರಾದ ರಿತೇಶ್ ಮತ್ತು ದಿನೇಶ್ ಚಂದ್ರಕರ್ ಮತ್ತು ಮೇಲ್ವಿಚಾರಕ ಮಹೇಂದ್ರ ರಾಂಟೆಕೆ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
    ಪತ್ರಕರ್ತ ಮುಕೇಶ್ ಚಂದ್ರಕರ್ (33) ಜ.1ರಂದು ನಾಪತ್ತೆಯಾಗಿದ್ದರು. ಜ.3 ರಂದು ಸುರೇಶ್ ಗೆ ಸೇರಿದ್ದ ಜಾಗದಲ್ಲಿದ್ದ ಸೆಪ್ಟೆಕ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು.

    ಮುಕೇಶ್ ಚಂದ್ರಕರ್ ‘ಬಸ್ತಾರ್ ಜಂಕ್ಷನ್’ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ಹೊಂದಿದ್ದರು, ಜತೆಗೆ ಬೇರೆ ಬೇರೆ ಪತ್ರಿಕೆಗಳಿಗೆ ಬರೆಯುತ್ತಿದ್ದರು. ರಸ್ತೆ ಕಾಮಗಾರಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ ನಂತರ ಅವರ ಹತ್ಯೆ ನಡೆದಿದೆ.

    Continue Reading

    LATEST NEWS

    Trending