Connect with us

LATEST NEWS

‘ನನ್ನ ಮಗ ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳನ್ನು ಕರೆ ತನ್ನಿ’-ಸರ್ಕಾರಕ್ಕೆ ತಾಯಿಯ ಅಳಲು

Published

on

ಉಡುಪಿ: ಉಕ್ರೇನ್ ಹಾಗೂ ರಷ್ಯಾದ ನಡುವೆ ಈಗಾಗಲೇ ಯುದ್ಧ ಪ್ರಾರಂಭವಾಗಿದ್ದು ಉಡುಪಿಯ ಕಲ್ಯಾಣಪುರ ಮೂಲದ ವಿದ್ಯಾರ್ಥಿ ಉಕ್ರೇನ್ ‌ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಉಕ್ರೇನ್‌ನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿರುವ ಉಡುಪಿಯ ಗ್ಲೆನ್ ವೀಲ್ ಮೆಕ್ಲಿನ್ ಫೆರ್ನಾಂಡೀಸ್‌ನ ತಾಯಿ ಐಡಾ ಫೆರ್ನಾಂಡಿಸ್ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು

“ಮೆಕ್ಲಿನ್ ಉಕ್ರೇನ್‌ಗೆ ಹೋಗಿ ಕೇವಲ 10 ದಿನ ಆಗಿದೆ. ಸದ್ಯಕ್ಕೆ ಆತ ವಾಸ್ತವ್ಯವಿದ್ದ ಕಟ್ಟಡದ ಎಲ್ಲಾ ವಿದ್ಯಾರ್ಥಿಗಳನ್ನು ನೆಲ ಅಂತಸ್ತಿಗೆ ಕರೆದುಕೊಂಡು ಬರಲಾಗಿದೆ.

ಆದರೆ ಅಲ್ಲಿ ಅವರಿಗೆ ಇನ್ನು ಆಹಾರದ ಕೊರತೆ ಆಗಬಹುದು. ಯುದ್ಧ ಮಾಹಿತಿ ಮುಂಚಿತವಾಗಿ ತಿಳಿದಿದ್ದ ಕಾರಣ ಧೈರ್ಯಗೆಡದೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.

ಆದರೂ ಕೂಡ ಪ್ರತಿ ಅರ್ಧ ಗಂಟೆಗೆ ಒಮ್ಮೆ ವಿಡಿಯೋ ಕಾಲ್ ಮಾಡಿ ನಾವು ಧೈರ್ಯ ತುಂಬುತ್ತಿದ್ದೇವೆ. ಆದರೂ ಯುದ್ಧದ ಸ್ಥಿತಿಯನ್ನು ನೋಡಿದಾಗ ನಮಗೆ ಭಯವಾಗುತ್ತಿದೆ.

ಮಾಧ್ಯಮದ ಮೂಲಕ ಸರ್ಕಾರಕ್ಕೆ ವಿನಂತಿ ಮಾಡುವುದು ಏನೆಂದರೆ ಸರ್ಕಾರ ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳನ್ನು ಕರೆ ತರಬೇಕು. ಕೇವಲ ನನ್ನ ಮಗ ಮಾತ್ರವಲ್ಲ, ಅವನಂತೆ ಅನೇಕ ವಿದ್ಯಾರ್ಥಿಗಳು ಅಲ್ಲಿ ಶಿಕ್ಷಣ ಕಲಿಯಲು ಹೋಗಿದ್ದಾರೆ,

ವಿದ್ಯಾಭ್ಯಾಸ ಯಾವಾಗ, ಎಲ್ಲಿ ಬೇಕಾದರೂ ಮಾಡಬಹುದು ಆದರೆ ಅದೆಲ್ಲಕ್ಕಿಂತ ಜೀವ ಮುಖ್ಯ.

ಆದ್ದರಿಂದ ಸರ್ಕಾರ ಶೀಘ್ರವಾಗಿ ಅಲ್ಲಿ ನೆಲೆಸಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮರಳಿ ತಾಯ್ನಾಡಿಗೆ ಕರೆತರಲು ಯೋಜನೆ ರೂಪಿಸಬೇಕು” ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

LATEST NEWS

ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ

Published

on

ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Continue Reading

FILM

‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

Published

on

ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ.


ಕಾಡಾನೆ ಸೆರೆ ವೇಳೆ ನಡೆದಿದ್ದ ದುರಂ*ತ :

ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು, ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಮೃ*ತಪಟ್ಟಿದ್ದ. ಅವರಿಗೆ 63 ವರ್ಷ ವಯಸ್ಸಾಗಿತ್ತು. 2023 ರ ಡಿಸೆಂಬರ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಅರ್ಜುನ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ. ಆತನ ನಿಧ*ನ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ, ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಇಹಲೋಕ ತ್ಯಜಿಸಿದ್ದ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜನ ಕಂಬನಿ ಮಿಡಿದಿದ್ದರು.

ಅಂದು ಡಿ ಬಾಸ್ ದರ್ಶನ್ ಕೂಡ ಸಂತಾಪ ಸೂಚಿಸಿದ್ದರು. ಇದೀಗ ಮತ್ತೆ ಡಿ ಬಾಸ್ ‘ಅರ್ಜುನ’ನನ್ನು ಸ್ಮರಿಸಿದ್ದಾರೆ.

ಏನಂದ್ರು ಡಿಬಾಸ್?

ದರ್ಶನ್ ಅರ್ಜುನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನನಿಗೆ ಸಲ್ಲಬೇಕಾದ ಗೌರವದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.

ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?

ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಅವರು ಬರೆದುಕೊಂಡಿದ್ದಾರೆ.

Continue Reading

LATEST NEWS

Trending