Monday, May 23, 2022

ಬೈಂದೂರು: ನದಿಗೆ ಬಿದ್ದ ಮಗ, ರಕ್ಷಿಸಲು ಹೋದ ತಾಯಿಯೂ ನೀರುಪಾಲು

ಉಡುಪಿ: ನದಿಗೆ ಬಿದ್ದು ತಾಯಿ ಮಗ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ನಡೆದಿದೆ.


ಮೃತರನ್ನು ಶಾನ್‌ (11) ಮತ್ತು ರೊಸಾರಿಯಾ(35) ಎಂದು ಗುರುತಿಸಲಾಗಿದೆ. ಇವರು ನಾವುಂದದ ನೋಯೆಲ್‌ ಚುಂಗಿಗುಡ್ಡೆ ಎಂಬಲ್ಲಿನ ನಿವಾಸಿಗಳು ಎಂದು ತಿಳಿದು ಬಂದಿದೆ.

ನದಿ ಪಕ್ಕದಲ್ಲಿ ಹೋಗುತ್ತಿದ್ದಾಗ ನೀರಿಗೆ ಬಿದ್ದ ಬಾಲಕ ಒದ್ದಾಡುತ್ತಿರುವುದನ್ನು ಕಂಡ ತಾಯಿಯೂ ಮಗುವನ್ನು ರಕ್ಷಿಸಲು ಮುಂದಾಗಿದ್ದಾಳೆ.

ಈ ಸಂದರ್ಭ ಇಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಇನ್ನು ಘಟನೆ ನಡೆದ ಸ್ಥಳದಲ್ಲಿ ಶಾನ್‌ ಮೃತದೇಹ ಪತ್ತೆಯಾಗಿದೆ. ದೋಣಿ ಬಳಸಿ ಮಹಿಳೆ ಮೃತ ದೇಹವನ್ನು ಅಗ್ನಿಶಾಮಕ ದಳದ ತಂಡ ಪತ್ತೆ ಹಚ್ಚಿದೆ.

ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವದ ಮಹಜರು ನಡೆಸಿದ್ದಾರೆ. ನಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...