DAKSHINA KANNADA
ಮಣಿಪಾಲ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಬೈಕ್- ಸವಾರ ಸ್ಪಾಟ್ ಡೆತ್
ಮಣಿಪಾಲ: ಬೈಕೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಮೃತರನ್ನು ಹಿರಿಯಡ್ಕ ನಿವಾಸಿ ಅಕ್ಷಯ ಭಟ್(26) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಬಾಣಸಿಗನಾಗಿದ್ದ ಅಕ್ಷಯ್ ಭಟ್ ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆಯ ಅಡುಗೆ ಕೆಲಸ ನಿರ್ವಹಿಸಲು ಇಂದು ಮುಂಜಾನೆ ಮನೆಯಿಂದ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಅಕ್ಷಯ ಭಟ್ ತಲೆಗೆ ತೀವ್ರ ತರಹದ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲದ ಪೊಲೀಸರು ಆಸ್ವತ್ರೆಗೆ ದಾಖಲಿಸಿದ್ದಾರೆ.
ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ಆದರೆ ಅಷ್ಟರಲ್ಲಿ ಅಕ್ಷಯ್ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
DAKSHINA KANNADA
ನೆಲ್ಯಾಡಿಯಲ್ಲಿ ವರುಣತಾಂಡವ ; 4 ಮನೆ, 2 ವಿದ್ಯುತ್ ಕಂಬಗಳಿಗೆ ಹಾನಿ
ಉಪ್ಪಿನಂಗಡಿ: ಕರಾವಳಿ ಭಾಗದಲ್ಲಿ ಮಳೆಗಾಲ ಜೂನ್ ತಿಂಗಳಿನಿಂದಲೇ ಆರಂಭವಾಗಿದೆ. ಆದರೆ ಮಳೆ ಮಾತ್ರ ಬೇಕೋ ಬೇಡವೋ ಎಂಬಂತೆ ಬರುತ್ತಿದೆ. ಇತ್ತ ಬಿಸಿಲಿದ್ದು, ಅತ್ತ ಕಣ್ಣು ಹಾಯಿಸುವಾಗ ಮಳೆ ಬರುತ್ತದೆ. ಯಾವ ಸಮಯದಲ್ಲಿ ಏನಾಗುವುದು ಎಂದು ಊಹಿಸಲೂ ಅಸಾದ್ಯ. ನಿನ್ನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಜನತಾ ಕಾಲನಿ ಪರಿಸರದಲ್ಲಿ ಬೀಸಿದ ಭಾರೀ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್ ಕಂಬಗಳು ಮುರಿದಿದೆ.
ನೆಲ್ಯಾಡಿಯ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗರಾದ ಐತ್ತಪ್ಪ, ಐಸುಬು, ಬಾಬು ಆಚಾರಿ, ಲೋಕೇಶ್ ಅವರ ಮನೆಯ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್ ಕಂಬಗಳು ಮುರಿದಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ , ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
DAKSHINA KANNADA
ಅಬ್ಬರದ ಹೆಜ್ಜೆಯಿಟ್ಟುಕೊಂಡು ಬರುತ್ತಿದೆ ”ಕಲ್ಜಿಗ”
ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್‌ನಡಿ ನಿರ್ಮಾಣಗೊಂಡಿರುವ “ಕಲ್ಜಿಗ” ಕನ್ನಡ ಸಿನಿಮಾ ಸೆ.13 ರಂದು ರಾಜ್ಯಾದಂತ್ಯ ತೆರೆಕಾಣಲಿದೆ. ಕುತೂಹಲಕಾರಿಯಾಗಿರುವ ಶೀರ್ಷಿಕೆಯಲ್ಲೇ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರದ ಟ್ರೈಲರ್ ಭಾರತ್ ಮಾಲ್‌ನ ಭಾರತ್ ಸಿನಿಮಾಸ್ ನಲ್ಲಿ ಅನಾವರಣಗೊಂಡಿತ್ತು. ಚಿತ್ರದ ಟ್ರೈಲರ್ ಎ2 ಫಿಲ್ಮ್ ಯೂಟ್ಯೂಬ್ ಚಾನೆಲ್‌ನಲ್ಲಿ ಬೆಡುಗಡೆಯಾಗಿದ್ದು, ಜನರಿಂದ ಅದ್ಬುತ ಪ್ತತಿಕ್ರಿಯೆ ದೊರಕಿದೆ ಎಂದು ನಿರ್ದೇಶಕ ಸುಮನ್ ಸುವರ್ಣ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.
ಶರತ್ ಕುಮಾರ್ ಎ.ಕೆ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. “ಕಲ್ಜಿಗ” ದ ಕಥೆ ಚಿತ್ರಕಥೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದು, ಹಂಸಲೇಖ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ನಟ ಅರ್ಜುನ್ ಕಾಪಿಕಾಡ್ ನಾಯಕನಾಗಿ ಹಾಗೂ ಸುಶ್ಮಿತಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿದ್ದಾರೆ. ಪ್ರಸಾದ್ ಕೆ. ಶೆಟ್ಟಿ ಹಿನ್ನಲೆ ಸಂಗೀತ ನೀಡಿದ್ದಾರೆ.
ಮಂಗಳೂರು, ಉಡುಪಿ ಸುತ್ತಮುತ್ತಲಿನ ಪ್ರದೆಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸೆ. 13 ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಮುಂಬಾಯಿ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರನ್ನು 14 ಲಕ್ಷಕ್ಕಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಮಂಗಳೂರು ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ಬಳಿಕ ಘಟಿಸುವ ರೋಚಕ ಕಥನ “ಕಲ್ಜಿಗ”ದಲ್ಲಿದೆ. ಸಚಿನ್ ಶಟ್ಟಿ ಛಾಯಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್‌ನ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನಲ್ ಗುರು ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ ಇದ್ದಾರೆ. ಗಿರ್ಗಿಟ್, ಸರ್ಕಸ್, ಗಮ್ಜಾಲ್ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದ ಸುಮನ್ ಸುವರ್ಣ “ಕಲ್ಜಿಗ” ದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ.
DAKSHINA KANNADA
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು : ಕರಾವಳಿ ಮೂಲದ ಕನ್ನಡ ಚಲನ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ.
ಬೆಂಗಳೂರು ವಿವಿಯು ಈ ಗೌರವ ಡಾಕ್ಟರೇಟ್ ನೀಡಿ ಗುರುಕಿರಣ್ ಅವರನ್ನು ನೀಡಿ ಗೌರವಿಸಿದೆ. ಸೆಪ್ಟಂಬರ್ 10 ರಂದು ನಡೆದಿದ್ದ ವಿವಿ ಘಟಿಕೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಬೆಂಗಳೂರು ವಿವಿಯ ಈ ಪ್ರಶಸ್ತಿಯಿಂದ ಗುರು ಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ.
- LATEST NEWS3 days ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- FILM2 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- DAKSHINA KANNADA4 days ago
WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ ‘ಅಪರೇಷನ್ ಹೆಬ್ಬಾವು’; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ
- LATEST NEWS1 day ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ