Thursday, September 29, 2022

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ ‘ಸಂಸದರ ಕಾರ್ಯಾಲಯ’ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.

ಸ್ಥಳೀಯ ಶಾಸಕ ಹರೀಶ್ ಪೂಂಜ ಅವರು ಕಾರ್ಯಾಲಯವನ್ನು ಉದ್ಘಾಟಿಸಿದರು.


ಬಳಿಕ ಮಾತನಾಡಿದ ಅವರು ‘ವೀರೇಂದ್ರ ಹೆಗ್ಗಡೆಯವರ ಕಾರ್ಯಾಲಯ ಧರ್ಮಸ್ಥಳದಲ್ಲಿ ಉದ್ಘಾಟನೆಯಾಗಿರುವುದು ನಮ್ಮ ಸೌಭಾಗ್ಯವೇ ಸರಿ.

ಪೂಜ್ಯ ಹೆಗ್ಗಡೆಯವರ ಗ್ರಾಮೀಣ ಅಭಿವೃದ್ಧಿ ಪರಿಕಲ್ಪನೆಯ ಮೂಲಕ ನಾಡಿನ ಜನರಿಗೆ ಮತ್ತಷ್ಟು ಶಕ್ತಿಯನ್ನು ನೀಡಲಿ’ ಎಂದು ಶುಭ ಹಾರೈಸಿದರು.


ನಂತರ ಪೂಜ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ ‘ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾದ ನಾನು ಜನತೆಗೆ ಪೂರಕವಾಗಿ ಕೆಲಸ ಮಾಡುತ್ತೇನೆ ಎಂದು ಸಂಭ್ರಮ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...