ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.
ಈ ಸಭೆಯಲ್ಲಿ ನಂತೂರು ಫ್ಲೈ ಓವರ್, ಕೆ.ಪಿ.ಟಿ ಫ್ಲೈ ಓವರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಮುಖ್ಯಸ್ಥರಾದ ವಿವೇಕ್ ಜೈಸ್ವಾಲ್, ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಕೃಷ್ಣಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಶ್ರೀ ಲಿಂಗೇ ಗೌಡ, ದಕ್ಷಿಣ ಕನ್ನಡ ಡಿ.ಎಫ್.ಓ ಶ್ರೀ ದಿನೇಶ್, ಮೆಸ್ಕಾಮ್ ಕಾಯನಿರ್ವಹಕ ಎಂಜಿನೀರ್ ಶ್ರೀ ಲೋಹಿತ್, ವಿಶೇಷ ಭೂ ಸ್ವಾಧೀನಾಧಿಕಾರಿ ಶ್ರೀ ಬಿನೋಯ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.