ನಂತೂರು ಸರ್ಕಲ್ ನಲ್ಲಿ ಚರಂಡಿ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಮತ್ತು ತಂಡ
ನಂತೂರು ಸರ್ಕಲ್ ನಲ್ಲಿ ಚರಂಡಿ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಮತ್ತು ತಂಡ
ಮಂಗಳೂರು: ಮಂಗಳೂರು ನಗರ ಭಾಗವಾದ ನಂತೂರು ಸರ್ಕಲ್ ಬಳಿ ಮಳೆ ನೀರು ಹರಿದು ಹೋಗಲು ಚರಂಡಿ ರಚನೆ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್,
ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ್ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಸಂಸದರು, ಮಂಗಳೂರಿನ ಪ್ರಮುಖ ಜಂಕ್ಷನ್ ಗಳಲ್ಲಿ ಒಂದಾಗಿರುವ ನಂತೂರು ಜಂಕ್ಷನ್ ಬಳಿ ಪ್ರತಿ ವರ್ಷ
ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ತುಂಬಿ ಜನಸಾಮಾನ್ಯರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು.
ಆ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖಾಂತರ ಕಾರ್ಕಳ ಭಾಗಕ್ಕೆ ತೆರಳುವ ರಸ್ತೆಯ ಎಡಭಾಗದಿಂದ ಬಲ ಬದಿಗೆ ಮಳೆ ನೀರು ಹರಿದುಹೋಗಲು ಚರಂಡಿ ನಿರ್ಮಿಸುವ ಕಾಮಗಾರಿ ಪ್ರಾರಂಭವಾಗಿದೆ ಎಂದರು.
ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ನಂತೂರು ಜಂಕ್ಷನ್ ನಲ್ಲಿ ಮಳೆನೀರು ತುಂಬದ ರೀತಿಯಲ್ಲಿ ಚರಂಡಿ ನಿರ್ಮಿಸಲು ಈ ಭಾಗದ ಜನರು ಮನವಿ ಸಲ್ಲಿಸಿದ್ದರು.
ಪ್ರತಿ ಮಳೆಗಾಲದಲ್ಲೂ ಈ ರಸ್ತೆಯ ಮೇಲೆ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಾಚಾರಿಗಳಿಗೆ ತೆರಳಲು ಸಮಸ್ಯೆ ಉಂಟಾಗುತ್ತಿತ್ತು.
ಇಲ್ಲಿ ಚರಂಡಿ ನಿರ್ಮಾಣವಾದರೆ ಮಳೆ ನೀರು ಸರಾಗವಾಗಿ ಹರಿದು ಹೋದರೆ ವಾಹನ ಸವಾರರಿಗೆ ಸಮಸ್ಯೆ ಎದುರಾಗುವುದಿಲ್ಲ ಎನ್ನುವ ಕಾರಣದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಸದ್ಯ ಕಾಮಗಾರಿ ಪ್ರಾರಂಭಿಸಲಾಗಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಲ್ಪ ಮಟ್ಟದ ಸಮಸ್ಯೆಯಾಗಬಹುದು.
ಆದರೆ ಭವಿಷ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕರು ಸಹಕಾರ ಸಂಪೂರ್ಣ ನೀಡಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿಕೊಂಡರು.
ಈ ಸಂಧರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಮನೋಹರ್ ಕದ್ರಿ,
ಕಾವ್ಯ ನಟರಾಜ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜೆ.ಸುರೇಂದ್ರ, ರೂಪಾ ಡಿ ಬಂಗೇರಾ, ಭಾಸ್ಕರ್ ಚಂದ್ರ ಶೆಟ್ಟಿ,
ರಮೇಶ್ ಕಂಡೆಟ್ಟು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.