Connect with us

DAKSHINA KANNADA

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಪ್ರತಿಷ್ಠಿತ ” ಬ್ರಹ್ಮಶ್ರೀ” ಪ್ರಶಸ್ತಿ… 

Published

on

 ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಪ್ರತಿಷ್ಠಿತ ” ಬ್ರಹ್ಮಶ್ರೀ” ಪ್ರಶಸ್ತಿ… 

ಮಂಗಳೂರು : ಉಳ್ಳಾಲದ ” ಬ್ರಹ್ಮಶ್ರೀ ಬಿಲ್ಲವ ವೇದಿಕೆ”ಯ ವತಿಯಿಂದ ವರ್ಷಂಪ್ರತಿ ಕೊಡಲಾಗುವ ಪ್ರತಿಷ್ಠಿತ “ಬ್ರಹ್ಮಶ್ರೀ” ಪ್ರಶಸ್ತಿಯನ್ನು ಈ ಬಾರಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಯ್ಕೆಯಾಗಿದ್ದಾರೆ.

ಇದೇ ಫೆ.‌28ರ ಭಾನುವಾರ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ  ತೊಕ್ಕೊಟ್ಟಿನ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ
ಆಶ್ರಯದಲ್ಲಿ ನಡೆಯುವ “ಮೆರುಗು” ಕಾರ್ಯಕ್ರಮದಲ್ಲಿ ಪ್ರಶಸ್ತಿ  ಪ್ರದಾನವಾಗಲಿದೆ.

ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಅಧ್ಯಕ್ಷ ಕೆ.ಟಿ. ಸುವರ್ಣ ತೊಕ್ಕೊಟ್ಟಿನ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಫೆ. 28ರಂದು ಬೆಳಗ್ಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ” ಮೆರುಗು 2021″ ಪ್ರತಿಭಾ ಅನಾವರಣದ ಹೊಸ್ತಿಲು ಕಾರ್ಯಕ್ರಮದಲ್ಲಿ ನೃತ್ಯ ಸ್ಫರ್ಧೆ, ಆಯುಷ್ಮಾನ್ ಕಾರ್ಡ್ ಮತ್ತು ಶೈಕ್ಷಣಿಕ ಶಾಲಾ ಶುಲ್ಕ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಳಮಟ್ಟದ ಕಾರ್ಯಕರ್ತನಾಗಿ ಇಂದು ಉನ್ನತ ಸಾಧನೆಗೈದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಸಾಲಿನ ಪ್ರತಿಷ್ಠಿತ ” ಬ್ರಹ್ಮಶ್ರೀ” ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ‌ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಯುಷ್ಮಾನ್ ಕಾರ್ಡ್ ವಿತರಿಸುವರು.

ಅಖಿಲ ಭಾರತ ಬಿಲ್ಲವರ ಯೂನಿಯನ್ ಮಂಗಳೂರು ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ನಾಡಿನ ಪ್ರಮುಖರು, ವಿವಿಧ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಮೆರುಗು ಕಾರ್ಯಕ್ರಮದಲ್ಲಿ ಎಲ್ಲ ಸಮಾಜ ಬಾಂಧವರಿಗೆ ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಜನಪದ ಮತ್ತು ಭಕ್ತಿಗೀತೆ ನೃತ್ಯ ಸ್ಫರ್ಧೆ ನಡೆಯಲಿದೆ.

ಮಂಗಳೂರು ವಿಧಾಸಭಾ ಕ್ಷೇತ್ರ ವ್ಯಾಪ್ತಿಯ 16 ಗ್ರಾಮಗಳಿಂದ ಆಯ್ದ ಸ್ಫರ್ಧಿಗಳು ಸ್ಫರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿ ಫಲಕ ಮತ್ತು ನಗದು ಬಹುಮಾನ ನೀಡಲಾಗುವುದು ಎಂದರು.

ಕಳೆದ ವರ್ಷ ಕೊರೊನಾ ಲಾಕ್ ಡೌನ್ ಇದ್ದ ಕಾರಣ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯ ನಡೆದಿರಲಿಲ್ಲ. ಈಗ ಮಕ್ಕಳಿಗೆ ಶಾಲೆ ಪ್ರಾರಂಭವಾಗಿದ್ದು ಭಾನುವಾರ ನಡೆಯುವ ಕಾರ್ಯಕ್ರಮದಲ್ಲಿ ವೇದಿಕೆಯ ವತಿಯಿಂದ ದತ್ತು ಸ್ವೀಕರಿಸಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಶಾಲಾ ಶುಲ್ಕವನ್ನು ವಿತರಿಸಲಾಗುವುದು ಎಂದರು.

ವೇದಿಕೆಯ ಕಾರ್ಯಾಧ್ಯಕ್ಷ ಸತೀಶ್ ಕರ್ಕೇರ ,ಕೋಶಾಧಿಕಾರಿ ಲಕ್ಷ್ಮಣ್ ಪೂಜಾರಿ, ದತ್ತು ಸಂಚಾಲಕ ಆನಂದ ಕೆ. ಅಸೈಗೋಳಿ, ಮಾಧ್ಯಮ ಕಾರ್ಯದರ್ಶಿ ಹರೀಶ್ ಅಂಬ್ಲಮೊಗರು, ಪ್ರಧಾನ ಸಂಘಟನಾ ಕಾರ್ಯದರ್ಶಿ ಗೋಪಿನಾಥ್ ಬಗಂಬಿಲ ಹಾಗೂ ಕ್ರೀಡಾ ಕಾರ್ಯದರ್ಶಿ ಭಗವಾನ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending