Connect with us

    LATEST NEWS

    ಎಂಎಸ್ಸಿ ಮಾಡಿ ಕಛೇರಿಯಲ್ಲಿ ಗುಡಿಸುತ್ತಿದ್ದ ಮಹಿಳೆಗೆ ಕೆಲಸ ಕೊಟ್ಟ ಸಚಿವರು

    Published

    on

    ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಸರ್ಕಾರಿ ಕಛೇರಿಯಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಸಚಿವರೊಬ್ಬರು ಮಹಾನಗರಪಾಲಿಕೆಯಲ್ಲಿ ಕೆಲಸ ಕೊಟ್ಟ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.


    ಇಲ್ಲಿನ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್(ಜೆಎಚ್‍ಎಂಸಿ)ನಲ್ಲಿ ಆ ಮಹಿಳೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಕೀಟಶಾಸ್ತ್ರಜ್ಞರ ಕೆಲಸ ನೀಡಿದ್ದಾರೆ.
    ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ) ಮಾಡಿದ ಎ.ರಜನಿ, ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಸ್ಥಳೀಯ ದಿನಪತ್ರಿಕೆಯೊಂದರಲ್ಲಿ ಮಹಿಳೆ ಬಗ್ಗೆ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ಸಚಿವರು ಸ್ಪಂದಿಸಿದ್ದಾರೆ.

    ರಜನಿ ಅವರನ್ನು ಸಚಿವರ ಬಳಿ ನಗರಾಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿರುವ ಅರವಿಂದ್ ಕುಮಾರ್‌‌ರವರು ಕರೆದುಕೊಂಡು ಹೋಗಿ ಕೆಲಸ ಕೊಡಿಸಿರುವುದಾಗಿ ತಿಳಿಸಿದ್ದಾರೆ.
    ರಜನಿಗೆ ಕೀಟಶಾಸ್ತ್ರ ವಿಭಾಗದಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ಕೆಲಸ ಕೊಟ್ಟಿದ್ದಾರೆ.

    ವಾರಂಗಲ್ ಜಿಲ್ಲೆಯವರಾಗಿದ್ದು, 2013ರಲ್ಲಿ ಪ್ರಥಮ ದರ್ಜೆ ಜೊತೆಗೆ ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ)ಯಲ್ಲಿ ಉತ್ತೀರ್ಣರಾದರು.

    ಅಲ್ಲದೇ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಅರ್ಹತೆ ಪಡೆದರು.


    ರಜನಿಗೆ ಎರಡು ಮಕ್ಕಳ ತಾಯೊಯಾದ ನಂತರ ಕೂಡ ಉದ್ಯೋಗಕ್ಕಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು. ಆದರೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದರಿಂದ ಕುಟುಂಬ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿತು.

    ನಂತರ ಕುಟುಂಬವನ್ನು ನಡೆಸಲು ಆಕೆಯ ಅತ್ತೆ ಸೇರಿದಂತೆ ಐವರು ತರಕಾರಿ ಮಾರಾಟ ಮಾಡಲು ಆರಂಭಿಸಿದರು.

    ಇದರಿಂದ ಗಳಿಸಿದ ಹಣದಿಂದಾಗಿ ರಜನಿ ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಗುಡಿಸುವ ಕೆಲಸ ಪಡೆದು ತಿಂಗಳಿಗೆ 10,000ರೂ, ಸಂಬಳ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending