Sunday, March 26, 2023

ದುಬೈನಿಂದ ಮಂಗಳೂರು ವಿಮಾನನಿಲ್ದಾಣಕ್ಕೆ ಬಂದಿಳಿದ ಮುಕ್ಕದ ಮಹಮ್ಮದ್‌ಗೆ ಹೃದಯಾಘಾತ..!

ಮಂಗಳೂರು :  ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಮೃತಪಟ್ಟವರನ್ನು‌ ಮುಕ್ಕ ನಿವಾಸಿ 65 ವರ್ಷದ ಮುಹಮ್ಮದ್ ಎಂದು ತಿಳಿದಿ ಬಂದಿದೆ.ಮುಹಮ್ಮದ್ ಅವರ ಪತ್ನಿ ದುಬೈನಲ್ಲಿರುವ ಮಗಳ ಬಳಿ ತೆರಳಿದ್ದರು.

ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಗುರುವಾರ ದುಬೈಗೆ ತೆರಳಿ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ದುಬೈನಿಂದ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಎಮಿಗ್ರೇಶನ್ ವಿಭಾಗದಲ್ಲಿ ನಿರ್ಗಮನದ ಮೊಹರು ಹಾಕಲು ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ವಿಮಾನ ನಿಲ್ದಾಣದ ಆ್ಯಂಬುಲೆನ್ಸ್ ಮೂಲಕ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮುಹಮ್ಮದ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದರು ಎಂದು ಅವರ ಸಹೋದರಿಯ ಪತಿ ಶರೀಫ್ ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಆಸ್ತಿಗಾಗಿ ಹೆತ್ತ ತಾಯಿಯ ಜುಟ್ಟು ಹಿಡಿದು ಮುಖಚಚ್ಚಿದ ಪಾಪಿ ಮಗ

ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...

ಉಳ್ಳಾಲ ಕುಂಪಲದಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ :ಸರಣಿ ಸಾವು ನೋವು- ಆತ್ಮಹತ್ಯೆಗಳಿಂದ ಜನ ಕಂಗಾಲು..!  

ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ.ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ...

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...