Connect with us

    MANGALORE

    ಮೂಲಗೇಣಿ ಸಮಸ್ಯೆ ಶೀಘ್ರ ಪರಿಹಾರ: ವಕೀಲ ಎಂ ಕೆ ವಿಜಯಕುಮಾರ್‌

    Published

    on

    ಮಂಗಳೂರು: ಮೂಲಗೇಣಿ ಒಕ್ಕಲುದಾರರ ಗೇಣಿ ಪದ್ಧತಿ ರದ್ದಾಗಿ ಆಸ್ತಿ ಹಕ್ಕು ಪ್ರದಾನ ಮಾಡುವುದಕ್ಕೆ ಸಂಬಂಧಿಸಿದ ಕಾಯ್ದೆಯ ಬಗೆಗಿನ ನ್ಯಾಯ ತೀರ್ಮಾನ ಶೀಘ್ರದಲ್ಲಿಯೇ ಆಗುವ ನಿರೀಕ್ಷೆ ಇದೆ,

    ಎಂದು ಹಿರಿಯ ವಕೀಲ ಹಾಗೂ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಕಾನೂನು ಸಲಹೆಗಾರ ಎಂ ಕೆ ವಿಜಯಕುಮಾರ್ ನುಡಿದರು.


    ಅವರು ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ೧೧ನೇ ಸರ್ವ ಸದಸ್ಯರ ಮಹಾಸಭೆಯಲ್ಲಿ ಮಾತನಾಡಿದರು.
    ಮೂಲಗೇಣಿ ಒಕ್ಕಲುದಾರರ ಕಾಯ್ದೆ ರಚನೆಯಾಗಿದ್ದು, ಅದು ರಾಜ್ಯ ವಿಧಾನ ಮಂಡಲದಲ್ಲಿಯೇ ಅಂಗೀಕಾರಗೊಂಡು ರಾಷ್ಟ್ರಪತಿಗಳ ಒಪ್ಪಿಗೆಯೂ ಲಭಿಸಿದೆ.

    ಆದರೆ ಭೂಮಾಲಕರು ಈ ಕಾಯ್ದೆಯನ್ನು ಪ್ರಶ್ನಿಸಿಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರಿಂದ ಕಾಯ್ದೆ ಅನುಷ್ಠಾನಗೊಂಡಿಲ್ಲ.

    ನವೆಂಬರ್ 19ರಂದು ಅಂತಿಮ ವಿಚಾರಣೆ ನಡೆಯಲಿದೆ. ತಿಂಗಳೊಳಗೆ ತೀರ್ಪು ಪ್ರಕಟವಾಗುವ ಎಲ್ಲಾ ಸಾಧ್ಯತೆಗಳಿವೆ ಎಂದರು.


    ದ.ಕ. ಹಾಗೂ ಉಡುಪಿ ಜಿಲ್ಲೆಯ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆಗಮಿಸಿ ಮೂಲಗೇಣಿ ಒಕ್ಕಲು ಕುರಿತಾಗಿ ಪ್ರಸ್ತುತ ಇರುವ ಸಮಸ್ಯೆಗಳ ಪರಿಹಾರಕ್ಕೆ ಸಹಾಯ ಒದಗಿಸುತ್ತೇನೆ ಎಂದರು.


    ನಝೀರ್ ಉಳ್ಳಾಲ್, ಮನೋಹರ್ , ಉಪಾಧ್ಯಕ್ಷ ಯಶೋಧರ ಉಪಸ್ಥಿತರಿದ್ದರು. ವೇದಿಕೆ ಅಧ್ಯಕ್ಷ ಮ್ಯಾಕ್ಸಿಮ್ ಡಿ ಸಿಲ್ವ ಸ್ವಾಗತಿಸಿದರು. ಉಡುಪಿ ಪ್ರತಿನಿಧಿ ಎಸ್ ಎಸ್ ಶೇಟ್ ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದಿಟ್ಟರು. ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು. ವೇದಿಕೆ ಕಾರ್ಯಕಾರಿಣಿ ಸದಸ್ಯ ಜೆರಾರ್ಡ್ ಟವರ್ಸ್ ವಂದಿಸಿದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: 73ನೇ ವರ್ಷದ ಬಳ್ಳಾಲ್‌ಭಾಗ್‌ ಗುರ್ಜಿ ದೀಪೋತ್ಸವ ಸಂಭ್ರಮ

    Published

    on

    ಮಂಗಳೂರು: ಬಳ್ಳಾಲ್‌ಭಾಗ್‌ ಗುರ್ಜಿ ದೀಪೋತ್ಸವ ಸಮಿತಿ ವತಿಯಿಂದ 73ನೇ ವರ್ಷದ ಗುರ್ಜಿ ದೀಪೋತ್ಸವ ಬಹಳ ಸಂಭ್ರಮದಿಂದ ಜರುಗಿತು.

    ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ , ಸೇವಾ ಕಾರ್ಯಕ್ರಮಗಳನ್ನು ಪ್ರತಿ ವರ್ಷದಂತೆ ಈ ವರ್ಷವೂ ನೆರವೇರಿಸಲಾಯಿತು. ಅತ್ಯಂತ ಜನಮಣ್ಣನೆ ಗಳಿಸಿದ ಈ ಗುರ್ಜಿ ದೀಪೋತ್ಸವವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಈ ಬಾರಿಯೂ ನಡೆಯಿತು. ಸಂಜೆ 5.55ಕ್ಕೆ ದೀಪಾರಾಧನೆ, ಸಂಜೆ 6 .30ಕ್ಕೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ರಾತ್ರಿ 9.30ಕ್ಕೆ ರಸಮಂಜರಿ ಕಾರ್ಯಕ್ರಮ ನಡೆಯಿತು. ವೈಭವದ ಮೆರವಣಿಗೆ ಮೂಲಕ ಶ್ರೀದೇವರನ್ನು ಪಲ್ಲಕ್ಕಿಯಲ್ಲಿ ಹೊತ್ತುಕೊಂಡು ಬರಲಾಯಿತು. ವಿದ್ಯುತ್ ಅಲಂಕಾರ, ಹೂವಿನ ಅಲಂಕಾರದಿಂದ ರಥವನ್ನು ಶೃಂಗರಿಸಲಾಗಿತ್ತು.

    ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ಉದ್ಯಮಿ ಕುಡ್ಪಿ ಜಗದೀಶ್ ಶೆಣೈ ಅವರು ನೀಡಿದರು. ಕಾರ್ಮಿಕ ನಾಯಕ ಸುರೇಶ್ಚಂದ್ರ ಶೆಟ್ಟಿ, ಉದ್ಯಮಿ ರವೀಂದ್ರ ಶೇಟ್‌, ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್‌, ಮಾಜಿ ಕಾರ್ಪೋರೇಟರ್ ಪದ್ಮನಾಭ ಅಮೀನ್‌ , ರಂಗ ಕಲಾವಿದ ವಿಜಯಕುಮಾರ್ ಕೊಡಿಯಾಲ್‌ಬೈಲು, ಸುಶಾಂತ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಪ್ರಕಾಶ್ ಸಾಲ್ಯಾನ್, ಪ್ರಮೋದ್ ಭಂಢಾರಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸನಾತನ ನೃತ್ಯಾಂಜಲಿ ಕಾರ್ಯಕ್ರಮ ಪ್ರದರ್ಶನಗೊಂಡಿತು. ಇದೇ ವೇಳೆ ಗುರ್ಜಿ ದೀಪೋತ್ಸವದಲ್ಲಿ ಹಲವು ಮಂದಿ ಸಾಧಕರನ್ನು ಗೌರವಿಸಲಾಯಿತು.

     

    Continue Reading

    LATEST NEWS

    ಮಂಗಳೂರು: ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ

    Published

    on

    ಮಂಗಳೂರು: ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ.

    ಬಂಧಿತನಿಂದ 64,500ರೂ. ನಗದು, ದ್ಚಿಚಕ್ರ ವಾಹನ, ಮೊಬೈಲ್, ಹೆಲ್ಮೆಟ್ ವಶಪಡಿಸಿಕೊಳ್ಳಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಮಂಗಳೂರು : ದಿ.ಉಮೇಶ್ ಕಾಜಿಲ ಸವಿನೆನಪಿಗಾಗಿ ಡಿ.1 ರಂದು ಬೃಹತ್ ರಕ್ತದಾನ ಶಿಬಿರ

    Published

    on

    ಮಂಗಳೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ, ವೀರಾಂಜನೇಯ ಶಾಖೆ ಕಾಜಿಲ, ಭಾರತೀಯ ಜನತಾ ಪಾರ್ಟಿ ತೆಂಕುಳಿಪಾಡಿ ವಾರ್ಡ್ ಸಮಿತಿ ಕಾಜಿಲ, ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗ ಮೋರ್ಚಾ ಮಂಗಳೂರು ಉತ್ತರ ಮಂಡಲ ಇದರ ಸಹಯೋಗದಿಂದ ರಕ್ತಕೇಂದ್ರ ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿ.ಉಮೇಶ್ ಕಾಜಿಲ ಇವರ ಸವಿನೆನಪಿಗಾಗಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

    ಡಿಸೆಂಬರ್ 1 ರಂದು ಭಾನುವಾರ ಕಾಜಿಲ ಮಾಧವ ಮನೆ ವಠಾರದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 8.30 ರಿಂದ 1 ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

    Continue Reading

    LATEST NEWS

    Trending