Connect with us

DAKSHINA KANNADA

Mulki: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ವಾರ್ಷಿಕೋತ್ಸವದ ಗ್ರಾಹಕ ಸಭೆ

Published

on

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಶಾಖೆಯ ಹನ್ನೊಂದನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ “ಸಹಕಾರ ರತ್ನ’’ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರಗಿತು.

ಈ ಕಾರ್ಯಕ್ರಮವನ್ನು ಸಂಘದ ಸದಸ್ಯ ಹರೀಶ್ಚಂದ್ರ ಪಿ ಸಾಲ್ಯಾನ್, ಎಚ್ ಬಿ ತಾರನಾಥ್ ಹಾಗೂ ವಾಸು ಪೂಜಾರಿ ಎಚ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು. ಸಂಘದ ಸದಸ್ಯ ಮಾಧವ ಸನಿಲ್‌ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತಪಡಿಸಿ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಪ್ರಶಂಶಿಸಿದರು. ಸಂಘವು ಇನ್ನೂ ಮುಂದೆಯೂ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸದಸ್ಯರಾದ ಹರೀಶ್ಚಂದ್ರ ಪಿ ಸಾಲ್ಯಾನ್ ರವರು ಮಾತಾನಾಡಿ, ಸಂಘದ ಅಧ್ಯಕ್ಷ “ಸಹಕಾರ ರತ್ನ’’ ಚಿತ್ತರಂಜನ್ ಬೋಳಾರ್ ರವರು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪಡೆದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು ಹಾಗೂ 11 ವರ್ಷದಿಂದ ಸಂಘವು ಮಾಡಿದ ಸಾಧನೆ ಅನನ್ಯ. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ನಗುಮೊಗದ ಸೇವೆ ಸಂತೋಷ ನೀಡಿದೆ. ಸಂಘವು ಇನ್ನಷ್ಟು ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು.

ಸಂಘದ ಸಲಹ ಸಮಿತಿಯ ಸದಸ್ಯ ವಿಜಯಕುಮಾರ್ ಕುಬೆವೂರು ಇವರು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ “ಸಹಕಾರ ರತ್ನ’’ ಚಿತ್ತರಂಜನ್ ಬೋಳಾರ್ ರವರಿಗೆ ಸನ್ಮಾನಿಸಿದರು. ಹಾಗೂ ಗ್ರಾಹಕ ಸಭೆಗೆ ಶುಭವನ್ನು ಹಾರೈಸಿ ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು. ಸದಸ್ಯರುಗಳಾದ ವಾಸು ಎಸ್ ಪೂಜಾರಿ, ವೆಂಕಟೇಶ್ ಹೆಬ್ಬಾರ್, ವಾಸು ಎಚ್ ಪೂಜಾರಿ, ಕೇಶವ್ ಎಚ್ ರವರು ಸಂಘವು ಇನ್ನಷ್ಟು ಅಭಿವೃದ್ದಿ ಹೊಂದಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ “ಸಹಕಾರ ರತ್ನ’’ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, ಮುಲ್ಕಿ ಶಾಖೆ ಆರಂಭವಾಗಿ ಹನ್ನೊಂದು ವರ್ಷವಾಯಿತು. ಆರಂಭದಿಂದ ಇಂದಿನವರೆಗೆ ನಮ್ಮ ಅಭಿವೃದ್ದಿಗೆ ನೀವು ಸಹಕಾರ ನೀಡಿದ್ದೀರಿ ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನೂ 5 ಶಾಖೆಗಳನ್ನು ತೆರೆಯುವ ಬಗ್ಗೆ ಹಾಗೂ ಸಂಘದಲ್ಲಿ ಲಭ್ಯವಿರುವ ವಿಮಾ ಸೇವೆಯ ಜೊತೆಗೆ ಲಭ್ಯವಿರುವ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಗ್ರಾಹಕರ ಸಲಹೆ ಸಹಕಾರವನ್ನು ಸದಾ ಬಯಸುತ್ತಾ ಸಂಘವು ಇನ್ನಷ್ಟು ಎತ್ತರಕ್ಕೆ ಏರಲು ಇನ್ನು ಮುಂದೆಯೂ ಗಾಹಕರು ಕೈ ಜೋಡಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ರಮಾನಾಥ್ ಸನಿಲ್, ಬಿ ಪಿ ದಿವಾಕರ್, ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು.ಮುಲ್ಕಿ ಶಾಖೆಯ ಶಾಖಾಧಿಕಾರಿ ಭಾಗ್ಯಶ್ರೀಯವರು ಸ್ವಾಗತಿಸಿ, ಸಿಬ್ಬಂದಿ ಕುಮಾರಿ ಸ್ವಾತಿ ಎಸ್ ಇವರು ವಂದಿಸಿದರು. ಸಂಘದ ಹಿರಿಯ ಶಾಖೆಯ ಶಾಖಾಧಿಕಾರಿ ಸೌಮ್ಯಲತ ಕಾರ್ಯಕ್ರಮ ನಿರೂಪಿಸಿದರು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

LATEST NEWS

Trending