Connect with us

    DAKSHINA KANNADA

     Mulki: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

    Published

    on

    ಕಳೆದ ಕೆಲವು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ಎಂಬಲ್ಲಿ ನಡೆದಿದೆ.

    ಮುಲ್ಕಿ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ಎಂಬಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52)  ಎಂದು ಗುರುತಿಸಲಾಗಿದ್ದು ಅವರ ಶವ ಪಾವಂಜೆ ದೇವಸ್ಥಾನ ಬಳಿಯ ಪಾಳು ಬಿದ್ದ ಮನೆಯಲ್ಲಿ ಪತ್ತೆಯಾಗಿದೆ.

    ಶವ ಪತ್ತೆಯಾದ ಸ್ಥಳದಲ್ಲಿ ಕೀಟನಾಶಕ ಪ್ಯಾಕೆಟ್ ಮತ್ತು ಎರಡು ಪ್ಲಾಸ್ಟಿಕ್ ಬಾಟಲಿಗಳು ಪತ್ತೆಯಾಗಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಕಳೆದ ಕೆಲವು ದಿನಗಳಿಂದ ಪಾವಂಜೆ ಪರಿಸರದಲ್ಲಿ ದುರ್ವಾಸನೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಅನುಮಾನಾಸ್ಪದವಾಗಿ ಹುಡುಕಾಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

    ಮೃತರ ಪತ್ನಿ ಮತ್ತು ಸಂಬಂಧಿಕರು ಅಂಗಿ, ಪ್ಯಾಂಟ್ ನಿಂದ ಶವದ ಗುರುತನ್ನು ಪತ್ತೆ ಹಚ್ಚಿದ್ದಾರೆ.

    ಕಳೆದ ಜು. 25 ರಂದು ಕದ್ರಾ ತೋಟದ ತನ್ನ ಮನೆಯಿಂದ ಕೆಲಸಕ್ಕೆಂದು ಹೋದ ದೇವದಾಸ್ ಕುಲಾಲ್ ಅವರು ಆ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದು, ಇದೀಗ ಶವವಾಗಿ ಪತ್ತೆಯಾಗಿದ್ದಾರೆ.

    ಮೃತರ ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಕಾರಣ ಎನ್ನಲಾಗಿದೆ.

    ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಅಂಗಡಿ ಕಳ್ಳರ ಬಂಧನ..! ಕೃತ್ಯ ನಡೆಸಿ ಗಂಟೆಗಳಲ್ಲಿ ಕಾರ್ಯಾಚರಣೆ..!

    Published

    on

    ಮಂಗಳೂರು : ಮಂಗಳೂರಿನ ಉರ್ವದ ಕೋಟೆಕಣಿಯ ದರೋಡೆ ಪ್ರಕರಣವನ್ನು ಐದು ಘಂಟೆಯಲ್ಲಿ ಬೇಧಿಸಿರುವ ಮಂಗಳೂರು ನಗರ ಪೊಲೀಸರು ಮತ್ತೊಂದು ಸಾಧನೆ ಮಾಡಿದ್ದಾರೆ. ಉರ್ವ ಮನೆ ದರೋಡೆ ನಡೆದ ದಿನದಂದೇ ವೆಲೆನ್ಸಿಯಾದಲ್ಲಿ ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣದ ಆರೋಪಿಗಳನ್ನೂ ರಾತ್ರಿಯೊಳಗೆ ಬಂಧಿಸಿದ್ದಾರೆ.

    ಉರ್ವದ ದರೋಡೆ ಪ್ರಕರಣದಿಂದ ಮಂಗಳೂರು ನಗರದ ಜನ ಬೆಚ್ಚಿ ಬಿದ್ದಿರುವಾಗಲೇ ನಗರದ ವೆಲೆನ್ಸಿಯಾದಲ್ಲಿ ಅಂಗಡಿ ಕಳ್ಳತನ ನಡೆದಿತ್ತು. ಅಂಗಡಿಯ ಶಟರ್ ಮುರಿದ ಕಳ್ಳರು ಅಂಗಡಿಯ ಒಳಗಿಟ್ಟಿದ್ದ 10 ಲಕ್ಷ ನಗದು ಕದ್ದೊಯ್ದಿದ್ದರು. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ಬೆನ್ನತ್ತಿದ್ದ ಇನ್ಸ್‌ಪೆಕ್ಟರ್ ಎ.ಡಿ.ನಾಗರಾಜ್‌ ಅವರು ಕೇವಲ ನಾಲ್ಕು ಗಂಟೆಯಲ್ಲಿ ಕಳ್ಳರ ಜಾಡು ಪತ್ತೆ ಹಚ್ಚಿ ರಾತ್ರಿಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಗೆ ಇಳಿದ ಇನ್ಸ್‌ಪೆಕ್ಟರ್ ಎ.ಡಿ.ನಾಗರಾಜ್‌ ಅಂಗಡಿಯ ಸಿಸಿ ಟಿವಿ ಮೂಲಕ ಇಬ್ಬರು ಕಳ್ಳರ ಕೃತ್ಯ ಅನ್ನೋದನ್ನು ಸ್ಪಷ್ಟ ಪಡಿಸಿಕೊಂಡಿದ್ದಾರೆ. ಬಳಿಕ ಸ್ಥಳೀಯವಾಗಿ ಮಾಹಿತಿ ಸಂಗ್ರಹಿಸಿ ಅಟೋ ಚಾಲಕನ ಮೂಲಕ ಕಳ್ಳರು ರೈಲ್ವೇ ಸ್ಟೇಷನ್‌ಗೆ ಹೋಗುತ್ತಿರುವ ಹಾಗೂ ಹಿಂದಿ ಮಾತನಾಡುತ್ತಿರುವ ವಿಚಾರ ಸಂಗ್ರಹಿಸಿದ್ದಾರೆ. ಬಳಿಕ ರೈಲ್ವೇ ಸ್ಟೇಷನ್‌ನ ಸಿಸಿ ಟಿವಿ ಪರಿಶೀಲಿಸಿ ಅಂಗಡಿಯ ಸಿಸಿ ಟಿವಿಯಲ್ಲಿ ಕಾಣಿಸಿದ ವ್ಯಕ್ತಿಗಳ ಹೋಲಿಕೆಯ ವ್ಯಕ್ತಿಗಳಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಅದೇ ಸಾಮ್ಯತೆಯ ಇಬ್ಬರು ಎರ್ನಾಕುಲಂ ನಿಂದ ಪೂನಾ ಹೋಗುವ ರೈಲು ಹತ್ತಿರುವುದು ಪತ್ತೆ ಹಚ್ಚಿದ್ದಾರೆ.


    ಈ ಎಲ್ಲಾ ಪ್ರಕ್ರಿಯೆ ಕೇವಲ ನಾಲ್ಕು ಗಂಟೆಯಲ್ಲಿ ಮುಗಿದಿದ್ದು, ಬಳಿಕ ಪೂನಾ ರೈಲ್ವೇ ಪೊಲೀಸರ ಸಹಾಯ ಪಡೆದು ಆರೋಪಿಗಳನ್ನು ಬಂಧಿಸಲಾಗಿದೆ. ರೈಲು ಕರ್ನಾಟಕದ ಗಡಿ ದಾಟಿ ಸತ್ತಾರ ದಾಟಿದ್ದ ಕಾರಣ ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡಬಾರದು ಎಂದು ತಕ್ಷಣ ಮಂಗಳೂರು ಪೊಲೀಸರು ಕಾರ್ಯಪ್ರವೃತ್ತರಾದ ಕಾರಣ ಈ ಆರೋಪಿಗಳ ಬಂಧನ ಸಾಧ್ಯವಾಗಿದೆ.
    ಇಬ್ಬರೂ ಆರೋಪಿಗಳು ಉತ್ತರ ಪ್ರದೇಶ ಮೂಲದವರಾಗಿದ್ದು, ಮಂಗಳೂರಿನಲ್ಲಿನ ಚಿನ್ನದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್‌ ಮಾಹಿತಿ ಪಡೆದು ಬಂದಿದ್ದಾರೆ. ಇಲ್ಲೇ ಕೆಲಸ ಹುಡುಕುವಂತೆ ಮಾಡಿ ಅಂಗಡಿಗಳನ್ನು ಗಮನಿಸಿದ್ದು, ಕಪಿತಾನಿಯೋದ ಅಂಗಡಿಯನ್ನು ಕೊಳ್ಳೆ ಹೊಡೆದು ಪರಾರಿಯಾಗಿದ್ದರು.

    Continue Reading

    DAKSHINA KANNADA

    ಜು. 15ರಿಂದ ಮುಂಗಾರು ಅಧಿವೇಶನ: ಯು.ಟಿ ಖಾದರ್

    Published

    on

    ಬೆಂಗಳೂರು: 16ನೇ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು ಎಂದರು.

    9 ದಿನಗಳ ಕಾಲ ಪ್ರಶ್ನೋತ್ತರ ಕಲಾಪವನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕ್ರಮಗಳನ್ನ ನಡೆಸಲಾಗುವುದು.

    2023-24ನೇ ಸಾಲಿನ ವಿಧಾನ ಮಂಡಲ, ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ 8ರಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನ ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವವನ್ನ ಮಂಡಿಸಿ, ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

    Continue Reading

    DAKSHINA KANNADA

    ಕುಡುಕರನ್ನು ಓಡಿಸಲು ಕುಡಿದೇ ಬಂದ ಪೊಲೀಸರು

    Published

    on

    ಸುಳ್ಯ: ಕುಡುಕರ ಹಾವಳಿ ತಡೆಯಲು ಪೊಲೀಸರೇ ಎಣ್ಣೆ ಹೊಡೆದು ಡ್ಯೂಟಿಗೆ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿ ಎಂಬಲ್ಲಿ ನಡೆದಿದೆ.

    ಹೊಯ್ಸಳ ವಾಹನದಲ್ಲಿ ಕುಡಿದು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಶಂಕೆ ಮೇಲೆ ಅನುಮಾನ ಬಂದ ಸ್ಥಳೀಯರು ಪ್ರಶ್ನಿಸಿದ್ದಾರೆ. ಜೊತೆಗೆ ಪೊಲೀಸರಿಗೆ ಬುದ್ದಿವಾದ ಹೇಳುವ ವೀಡಿಯೋ ವೈರಲ್​ ಆಗಿದೆ.

    ಜುಲೈ 11 ರಂದು ಕುಡಿದು ಬಸ್ ಸ್ಟ್ಯಾಂಡ್​ನಲ್ಲಿ ಬಾಟಲಿ ಒಡೆದು ಮಲಗಿದ್ದ ಕುಡುಕರ ಹಾವಳಿ ತಡೆಯಲು ಮಹಿಳೆಯೋರ್ವಳು ರಕ್ಷಣೆ ಕೋರಿ 112 ಗೆ ಕರೆ ಮಾಡಿದ್ದರು. ಈ ವೇಳೆ ಓರ್ವ ಎ.ಎಸ್.ಐ ಮತ್ತು ಡ್ರೈವರ್ ಆಗಮಿಸಿದ್ದರು. ಆದರೆ, ಕುಡುಕರ ಮೇಲೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ. ಈ ವೇಳೆ ಅನುಮಾನ ಬಂದು ಸ್ಥಳೀಯರು ಪ್ರಶ್ನಿಸಿದಾಗ ಪೊಲೀಸರೇ ಕುಡಿದು ಬಂದಿರುವುದು ಬೆಳಕಿಗೆ ಬಂದಿದೆ.

    ಕುಡಿದು ವಾಹನ ಚಾಲನೆ ಮಾಡಬೇಡಿ‌ ಎಂದ ಸ್ಥಳೀಯರು

    ಇನ್ನು ಕುಡಿದು ವಾಹನ ಚಾಲನೆ ಮಾಡಬೇಡಿ‌. ಪೊಲೀಸ್ ಜೀಪ್ ಇಲ್ಲೇ ಬಿಟ್ಟು ಹೋಗಿ ಎಂದು ಸ್ಥಳೀಯರು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಪೊಲೀಸರು, ‘ ನಾವು ಸುಳ್ಯ ಪೊಲೀಸ್ ಠಾಣೆಯಿಂದ ಬಂದಿದ್ದು, ಡೈಲಿ ಕುಡಿಯುತ್ತೇವೆ. ಆದ್ರೆ, ಈಗ ಕುಡಿದಿಲ್ಲ, ಪಾರ್ಸೆಲ್ ತಗೊಂಡಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ‘ನನಗೆ ಆರೋಗ್ಯ ಸರಿ ಇಲ್ಲ ಎಂದು ಪೊಲೀಸ್ ವಾಹನ ಚಾಲಕ ಹೇಳಿದ್ದಾನೆ.

    Continue Reading

    LATEST NEWS

    Trending