Sunday, November 27, 2022

ಕೊಲೆ ಆರೋಪಿ ದಾವುದ್ ಪತ್ತೆಗೆ ಸಾರ್ವಜನಿಕರ ಮೊರೆ ಹೋದ ಮುಲ್ಕಿ ಪೊಲೀಸ್…

ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು‌ ಪೊಲೀಸರು ಮನವಿ ಮಾಡಿದ್ದಾರೆ.

ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ 1 ನೇ ಆರೋಪಿಯಾದ ಬಪ್ಪನಾಡು ನಿವಾಸಿ ದಾವೂದ್‌ ಹಕೀಮ್‌ನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಈಗಾಗಲೇ ನ್ಯಾಯಾಲಯವು ಹಲವು ಬಾರಿ ದಸ್ತಗಿರಿ ವಾರೆಂಟ್‌ ಹೊರಡಿಸಿದೆ.

ಪ್ರಸ್ತುತ ಈತನ ವಿರುದ್ಧ ನ್ಯಾಯಾಲಯವು ಪ್ರೋಕ್ಲಮೇಶನ್‌ ಕೂಡಾ ಹೊರಡಿಸಲಾಗಿದ್ದರೂ ಈತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುತ್ತಾನೆ.

ಹಾಗಾಗಿ ಈತನ ಪತ್ತೆಗೆ ಪೊಲೀಸರು ಸಾರ್ವಜನಿಕರ ಮೊರೆ ಹೋಗಿದ್ದಾರೆ. ಆರೋಪಿ ದಾವೂದ್‌ ಹಕೀಮ್‌ನ ಬಗ್ಗೆ ಸುಳಿವು ಇದ್ದರೆ ಮುಲ್ಕಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ದೂರವಾಣಿ ಸಂಖ್ಯೆ 9480805332 ಅಥವಾ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ 9480805359. ಮೊಬೈಲ್‌ ಮೊಬೈಲ್‌ ಸಂಖ್ಯೆಗೆ ಮಾಹಿತಿ ನೀಡಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...