Connect with us

    DAKSHINA KANNADA

    ಪ್ರತಿಷ್ಟಿತ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಗೆ ಎ.ಸದಾನಂದ ಶೆಟ್ಟಿ ಹಾಗೂ ಹನುಮಂತ ಕಾಮತ್ ಆಯ್ಕೆ

    Published

    on

    ಮಂಗಳೂರು: ನಮ್ಮೂರ ಆಟ ಕೂಟ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ವರ್ಷಂಪ್ರತಿ ಸಮಾಜಸೇವೆಗಾಗಿ ಕೊಡಲ್ಪಡುವ ಪ್ರತಿಷ್ಟಿತ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ 2020-21ಕ್ಕೆ ಮಂಗಳೂರಿನ ಉದ್ಯಮಿ, ಶಿಕ್ಷಣ, ಕ್ರೀಡಾ ಕ್ಷೇತ್ರ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಹಾಗೂ ನಗರದ ಖ್ಯಾತ ಸಮಾಜ ಸೇವಾ ಕಾರ್ಯಕರ್ತ ಹನುಮಂತ ಕಾಮತ್ ಆಯ್ಕೆ ಆಗಿದ್ದಾರೆ.


    2017ರಿಂದ ಕಾರಣಾಂತರಗಳಿಂದ ಮುಂದೂಡಲ್ಪಟ್ಟ ವಿಜಯ ಬ್ಯಾಂಕ್ ವರ್ಕರ್ಸ್ ಆರ್ಗನೈಝೇಶನ್ ಮಂಗಳೂರು ವಲಯದ ವತಿಯಿಂದ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಗೆ ಆಯ್ಕೆಯಾದ ಸರ್ವೋತ್ತಮ ಶೆಟ್ಟಿ ಅಬುಧಾಬಿ (ವಿದೇಶದಲ್ಲಿ ತುಳು-ಕನ್ನಡ ಸಂಘಟಕ) ಕದ್ರಿ ನವನೀತ ಶೆಟ್ಟಿ (ಸಾರ್ವತ್ರಿಕ ಸಾಧಕ), ಪಟ್ಲ ಸತೀಶ್ ಶೆಟ್ಟಿ (ಯಕ್ಷಗಾನ), ವಿಠಲ್ ಡಿ ಶೆಟ್ಟಿ (ಬ್ಯಾಂಕಿಂಗ್ ಕ್ಷೇತ್ರ) ಇವರನ್ನು ಕೂಡಾ ಈ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
    ನಮ್ಮೂರ ಆಟ ಕೂಟ ಟ್ರಸ್ಟ್ (ರಿ) ಮಂಗಳೂರು ಇದರ ಉದ್ಘಾಟನಾ ಸಮಾರಂಭವನ್ನು ನವಂಬರ್ 28ರಂದು ನಗರದ ಪುರಭವನದಲ್ಲಿ ನಡೆಯಲಿದೆ.

    ಸಭಾಕಾರ್ಯಕ್ರಮದಲ್ಲಿ ಸರಕಾರದ ಜನಪ್ರತಿನಿಧಿಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ವರ್ಷಂಪ್ರತಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿದೆ, ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ನಮ್ಮೂರ ಆಟ ಕೂಟ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಮುಲ್ಕಿ ಕರುಣಾಕರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    LATEST NEWS

    Trending